ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ,ಬಿಜೆಪಿ ಮಾತು ಕೇಳಿದರೆ ಜೀವ ಉಳಿಯುತ್ತದೆ: ರಾಮುಲು
Team Udayavani, Jun 3, 2021, 3:14 PM IST
ಚಿತ್ರದುರ್ಗ: ಕೊವಿಡ್ ಲಸಿಕೆ ವಿಚಾರದಲ್ಲಿ ಜಾತಿ, ರಾಜಕಾರಣ ಸರಿಯಲ್ಲ. ಬೇಧವಿಲ್ಲದೆ ಎಲ್ಲಾ ಜಾತಿ, ಧರ್ಮದ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ. ಬಿಜೆಪಿ ಮಾತು ಕೇಳಿ ಲಸಿಕೆ ಪಡೆದರೆ ಜೀವ ಉಳಿಯುತ್ತವೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರ ಒಂದು ಸಮುದಾಯಕ್ಕೆ ಲಸಿಕೆ ಹೇಳಿಕೆಗೆ ತಿರುಗೇಟು ನೀಡಿದರು.
ಬಿ.ಕೆ.ಹರಿಪ್ರಸಾದ್ ನಿಮ್ಮ ಬುದ್ಧಿ ಒಳ್ಳೆಯತನಕ್ಕೆ ಮಾತ್ರ ಬಳಸಿ,ಕೊವಿಡ್ ಲಸಿಕೆ ವಿಚಾರದಲ್ಲಿ ಜಾತಿ, ರಾಜಕಾರಣ ಸರಿಯಲ್ಲ. ಬೇಧವಿಲ್ಲದೆ ಎಲ್ಲಾ ಜಾತಿ, ಧರ್ಮದ ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.
ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸೋಲಿನ ಹತಾಶೆ ಕಾಡುತ್ತಿದೆ. ಅದಕ್ಕೆ ಕೋವಿಡ್ ಸಂದರ್ಭ ಬಳಸಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪಗೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಸುತ್ತಿದ್ದಾರೆ. ಕೋವಿಡ್ ಸಂದಿಗ್ಧತೆ ವೇಳೆ ಜನರ ಜೀವದ ಜತೆ ರಾಜಕಾರಣ ಬೇಡ ಎಂದು ಶ್ರೀರಾಮುಲು ಹೇಳಿದರು.
ಇದನ್ನೂ ಓದಿ:ಎಷ್ಟು ದಿನ ಲಾಕ್- ಯಾವುದಕ್ಕೆ ಅನ್ ಲಾಕ್? ಸಂಜೆ ಸಿಎಂ ಮಹತ್ವದ ಸುದ್ದಿಗೋಷ್ಠಿ
ಸಿಎಂ ಬದಲಾವಣೆ ಕುರಿತು ಮಾತನಾಡಿದ ಸಚಿವರು, ಸಿಎಂ ಬಿಎಸ್ ವೈ ಶಕ್ತಿ ಮೀರಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದೆ. ಯಾರೋ ಸಣ್ಣ ಪುಟ್ಟವರು ದೆಹಲಿಗೆ ಹೋಗಿ ರಾಜಕಾರಣ ಸರಿಯಲ್ಲ ಎಂದುಸಚಿವ ಸಿ.ಪಿ.ಯೋಗೀಶ್ವರ್ ಗೆ ಶ್ರೀರಾಮುಲು ಟಾಂಗ್ ನೀಡಿದರು.
ಲಾಕ್ ಡೌನ್ ನಿಂದಾಗಿ ಕೋವಿಡ್ ಸೋಂಕು ಕಡಿಮೆಯಾಗಿದೆ. ಹಂತ ಹಂತವಾಗಿ ಲಾಕ್ ಡೌನ್ ಸಡಿಲೀಕರಣ ಮಾಡುತ್ತೇವೆ ಎಂದು ಸಚಿವ ಶ್ರೀರಾಮುಲು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.