ಆರ್ಥಿಕ ಸಂಕಷ್ಟ : ವೇತನರಹಿತ ರಜೆ ತೆಗೆದುಕೊಳ್ಳಿ : ಹಿರಿಯ ಉದ್ಯೋಗಿಗಳಿಗೆ ಇಂಡಿಗೋ ಸೂಚನೆ

Team Udayavani, Jun 3, 2021, 4:56 PM IST

covid-2nd-wave-impact-indigo-to-make-employees-go-on-leave-without-pay-for-few-days

ನವ ದೆಹಲಿ : ಕೋವಿಡ್ ನ ಪರಿಸ್ಥಿತಿಯಿಂದಾಗಿ ಎಲ್ಲಾ ಕ್ಷೇತ್ರಗಳು ಸಂಕಷ್ಟದಲ್ಲಿವೆ. ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳು ಹರಸಾಹಸಪಡುತ್ತಿವೆ.

ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಎರಡನೇ ಅಲೆಯಿಂದಾಗಿ ಇಂಡಿಗೋ ತನ್ನ ಹಿರಿಯ ಉದ್ಯೋಗಿಗಳಿಗೆ ಸೆಪ್ಟೆಂಬರ್‌ ವರೆಗೆ ತಿಂಗಳಿಗೆ ನಾಲ್ಕು ದಿನಗಳು ವೇತನರಹಿತವಾಗಿ ಕಡ್ಡಾಯ ರಜೆ (ಎಲ್ ಡಬ್ಲ್ಯು ಪಿ) ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ :ಸಮರೋಪಾದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಕೋವಿಡ್ ವಿರುದ್ಧ ಹೋರಾಡುತ್ತಿವೆ : ಶಾ 

ಕೋವಿಡ್ ಸೋಂಕಿನ ಕಾರಣದಿಂದಾಗಿ ವಿಮಾನಯಾನ ಮಾಡುವ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಬಹುತೇಕ ವಿಮಾನಯಾನ ಸಂಸ್ಥೆಗಳು ದೊಡ್ಡ ಪ್ರಮಾಣದ ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಇಂಡಿಗೋ ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ.

ಈ ಬಗ್ಗೆ  ಪೈಲೆಟ್‌ ಗಳಿಗೆ ಮಿಂಚಂಚೆ ಅಥವಾ ಇಮೇಲ್‌ ಮೂಲಕ ಮಾಹಿತಿ ನೀಡಿದ ಇಂಡಿಗೊದ ಫ್ಲೈಟ್ ಆಪರೇಶನ್ಸ್ ಹಿರಿಯ ಉಪಾಧ್ಯಕ್ಷ ಅಶೀಮ್ ಮಿತ್ರ,  ಕೋವಿಡ್ ಸೋಂಕಿನ ಎರಡನೇ ಅಲೆ ಎಲ್ಲಾ ಕ್ಷೇತ್ರಗಳಿಗೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಹೊಡೆತವನ್ನು ನೀಡಿದೆ. ವಿಮಾನಯಾನ ಮಾಡುವ ಪ್ರಯಾಣಿಕರು ಈ ಕೋವಿಡ್ ನ ಕಾರಣದಿಂದಾಗಿ ಕಡಿಮೆಯಾಗಿದ್ದಾರೆ. ಇದು ನಮ್ಮ ಆರ್ಥಿಕ ಹಾಗೂ ವಾಣಿಜ್ಯ ವಹಿವಾಟಿನ ಮೇಲೂ ಕೂಡ ದೊಡ್ಡ ಮಟ್ಟದಲ್ಲಿ ಸಂಕಷ್ಟಕ್ಕೆ ಈಡಾಗುವ ಹಾಗೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ವಿಮಾನಯಾನದ ಬಹುಪಾಲು ಉದ್ಯೋಗಿಗಳು ಬ್ಯಾಂಡ್ ಬಿ ಮತ್ತು ಬ್ಯಾಂಡ್ ಎ ನಲ್ಲಿದ್ದಾರೆ, ಅವುಗಳು ಕೆಳಮಟ್ಟದ ಬ್ಯಾಂಡ್‌ ಗಳಾಗಿವೆ. ಹೀಗಾಗಿ 2021ರ ಜೂನ್ 1 ರಿಂದ ಮುಂದಿನ 3 ತಿಂಗಳವರೆಗೆ ಅಂದರೇ, ಸಂಪ್ಟೆಂಬರ್ ತನಕ ತಿಂಗಳಲ್ಲಿ 4 ದಿನಗಳ ಕಡ್ಡಾಯ ವೇತನವಿಲ್ಲದೆ ರಜೆ ತೆಗೆದುಕೊಳ್ಳಬೇಕೆಂದು ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ ಎಂದು ಅವರು ಇಮೇಲ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮಾನವೀಯತೆ ಮೆರೆಯುವ ಸಮಯ, ರಾಜಕೀಯ ಮಾಡುವುದು ಸರಿಯಲ್ಲ ರೇಣುಕಾಚಾರ್ಯ

ಇನ್ನು,  ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ ಕಳೆದ ವಾರ  ನಿರ್ಧರಿಸಿದೆ.

40 ನಿಮಿಷಗಳಿಂತ ಕಡಿಮೆ ಅವಧಿ ಇರುವ ದೇಶದ ಒಳಗಿನ ವಿಮಾನಯಾನದ ವೆಚ್ಚ ದುಬಾರಿಯಾಗಲಿದ್ದು, 2,300 ರೂಪಾಯಿಗಳಿಂದ 2,600 ರೂಪಾಯಿಗಳಿಗೆ ಏರಿಸಲಾಗಿದೆ. ಈಗಿರುವ ದರದ ಶೇಕಡಾ 13 ರಷ್ಟು ಹೆಚ್ಚಾಗಿದೆ.

2,900 ರೂ ವೆಚ್ಚದಲ್ಲಿ 40 ನಿಮಿಷದಿಂದ ಒಂದು ಗಂಟೆಯ ನಡುವಿನ ವಿಮಾನಯಾನವನ್ನು 3,300 ರೂ. ಗೆ ಏರಿಸಲಾಗಿದೆ.  ಇನ್ನು,  60 ರಿಂದ 90 ನಿಮಿಷಗಳ ನಡುವಿನ ವಿಮಾನಯಾನಕ್ಕೆ 4,000 ರೂ, 90 ರಿಂದ 120 ನಿಮಿಷಗಳ ವಿಮಾನಯಾನಕ್ಕೆ 4,700 ರೂ, 150 ರಿಂದ 180 ನಿಮಿಷಗಳ ವಿಮಾನ ಯಾನಕ್ಕೆ 6,100 ರೂ. ಹಾಗೂ 180 ರಿಂದ 210 ನಿಮಿಷಗಳ ವಿಮಾನಯಾನಕ್ಕೆ 7,400 ರೂ. ನಿಗದಿಪಡಿಸಲು ಸಚಿವಾಲಯ ನಿರ್ಧರಿಸಿತ್ತು.

ಇದನ್ನೂ ಓದಿ : ದೆಹಲಿ: ಕಳೆದ 24ಗಂಟೆಗಳಲ್ಲಿ 487 ಕೋವಿಡ್ ಪ್ರಕರಣ ಪತ್ತೆ, 45 ಮಂದಿ ಸಾವು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.