36,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಸಲು ಗುರಿ ನಿಗದಿ


Team Udayavani, Jun 4, 2021, 5:20 AM IST

Untitled-1

ಸಾಂದರ್ಭಿಕ ಚಿತ್ರ

ಉಡುಪಿ: ಕೋವಿಡ್‌-19 ಭೀತಿಯ ನಡುವೆ ಕೃಷಿ ಚಟುವಟಿಕೆ ಗರಿಗೆದರಿದ್ದು ಕಳೆದ ಬಾರಿ ಕೃಷಿ ಇಲಾಖೆಯು ಶೇ. 99ರಷ್ಟು ಗುರಿ ಸಾಧನೆ ಮಾಡಿದ್ದು, ಈ ಬಾರಿ ಶೇ. 100ರಷ್ಟು ಗುರಿ ಮುಟ್ಟಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುತ್ತಿದೆ.

2018-19ರ ವರೆಗೆ ಜಿಲ್ಲೆಯಲ್ಲಿ ಭತ್ತದ ಕೃಷಿ ಬೆಳೆಯುವ ಪ್ರದೇಶ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬಂತು. ಆದರೆ ಕೋವಿಡ್‌-19 ಸೋಂಕಿನ ಬಳಿಕ ಜನರು ಕೃಷಿ ಕ್ಷೇತ್ರದೆಡೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಹೊರ ದೇಶ, ರಾಜ್ಯ, ಜಿಲ್ಲೆಗಳಿಂದ ಉಡುಪಿಗೆ ಆಗಮಿಸಿದ ಬಹುತೇಕ ಜನರು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಅದರ ಪರಿಣಾಮವಾಗಿ ಕಳೆದ ಬಾರಿ 35,700 ಹೆ. ಪ್ರದೇಶದಲ್ಲಿ ಭತ್ತದ ಕೃಷಿ ಮಾಡಲಾಗಿದೆ.

36,000 ಹೆಕ್ಟೇರ್‌ ಗುರಿ :

ಉಡುಪಿ ತಾಲೂಕಿನಲ್ಲಿ 15,500 ಹೆ., ಕಾರ್ಕಳ 6,500 ಹೆ., ಕುಂದಾಪುರದಲ್ಲಿ 14,000 ಹೆ. ಸೇರಿದಂತೆ ಜಿಲ್ಲೆಯಲ್ಲಿ 36,000 ಹೆ. ಪ್ರದೇಶದಲ್ಲಿ ಭತ್ತ  ಬೆಳೆಸುವ ಗುರಿಯನ್ನು ಹೊಂದಲಾಗಿದೆ. ಕಳೆದ ಬಾರಿ ನಿಗದಿಪಡಿಸಿದ 36,000 ಹೆ.ನಲ್ಲಿ 35,700 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಕೃಷಿ ಮಾಡುವ ಮೂಲಕ ಹಲವು ವರ್ಷದ ಬಳಿಕ ಗುರಿ ಸಾಧನೆ ಮಾಡಿದೆ. 2018-19ನೇ ಸಾಲಿನಲ್ಲಿ 44 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕೇವಲ 35,487 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಸಲಾಗಿತ್ತು.

605 ಮಿ.ಮೀ. ದಾಖಲೆ ಮಳೆ :

ಸಾಮಾನ್ಯವಾಗಿ ಮೇ ಅಂತ್ಯ- ಜೂನ್‌ ವಾರಕ್ಕೆ 189 ಮಿ.ಮೀ. ಮಳೆಯಾಗುತ್ತಿತ್ತು. ಆದರೆ ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ದಾಖಲೆ ಪ್ರಮಾಣ 605 ಮಿ.ಮೀ. ಮಳೆಯಾಗಿದೆ. ಇದು ಈ ಬಾರಿಯ ಕೃಷಿ ಚಟುವಟಿಕೆಗೆ ಪೂರಕವಾದ ವಾತಾವರಣ ನಿರ್ಮಿ ಸಿದೆ. 2019ರಲ್ಲಿ ಮಳೆಯ ಕೊರತೆಯಿಂದಾಗಿ ಕೃಷಿ ಚಟುವಟಿಕೆ ಜೂನ್‌ ತಿಂಗಳಿನಲ್ಲಿ ಪ್ರಾರಂಭವಾಗಿತ್ತು. ಇದು ಬೆಳೆಯ ಮೇಲೆ ಪರಿಣಾಮ ಬೀರಿತ್ತು ಎಂದು ಕೃಷಿ ಇಲಾಖೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಪ್ರದೇಶ ಹೆಚ್ಚಲಿದೆ ;

ಕೊರೊನಾದಿಂದ ಮತ್ತೆ ಜನರು ಜಿಲ್ಲೆಗೆ ಮರಳಿ ದ್ದಾರೆ. ಇಷ್ಟು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿಯಲ್ಲಿ ಮಾಡಲು ಮುಂದಾಗಿದ್ದಾರೆ. ಜತೆಗೆ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಅಭಿಯಾನ ನಡೆಸುತ್ತಿರುವುದರಿಂದ ಈ ಬಾರಿ ಕೃಷಿ ಭೂಮಿ ಪ್ರದೇಶ ಹೆಚ್ಚಾಗಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ  ಎಚ್‌. ಕೆಂಪೇಗೌಡ ತಿಳಿಸಿದರು.

ಉತ್ಪಾದಕತೆ ಕಡಿಮೆ- ವೆಚ್ಚ ಹೆಚ್ಚು:

ಜಿಲ್ಲೆಯಲ್ಲಿ ಎಕರೆಗೆ 16ರಿಂದ 17 ಕ್ವಿಂಟಾಲ್‌  ಭತ್ತವಷ್ಟೇ ಉತ್ಪಾದನೆಯಾಗುತ್ತಿದೆ. ಹೆಚ್ಚುತ್ತಿರುವ ಉತ್ಪಾದನ ವೆಚ್ಚ, ಬೆಲೆ ಕುಸಿತ, ವಿವಿಧ ಕಡೆಯಲ್ಲಿ ಉಪ್ಪು ನೀರಿನ ಹಾವಳಿಯಿಂದ ಜನರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಜತೆಗೆ ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಲಾಭದಾಯಕವಾಗಿರುವ ಅಡಿಕೆ, ಕಾಳು ಮೆಣಸಿನಂತಹ ತೋಟಗಾರಿಕಾ ಬೆಳೆಗಳು ಭತ್ತದ ಗದ್ದೆಗಳನ್ನು ಆಕ್ರಮಿಸಿಕೊಂಡಿವೆ. ಇನ್ನು ನಗರಕ್ಕೆ ಸಮೀಪದ ಪ್ರದೇಶಗಳ ಗದ್ದೆಗಳು ಸೈಟ್‌ಗಳಾಗಿ ಪರಿವರ್ತನೆಗೊಂಡು ಲೇಔಟ್‌, ವಾಣಿಜ್ಯ, ವಸತಿ ಸಂಕೀರ್ಣಗಳಾಗಿ ಮಾರ್ಪಾಡಾಗಿದೆ.

ನಿರ್ವಹಣೆ ಕೊರತೆ :

ಜಿಲ್ಲಾದ್ಯಂತ ಕೃಷಿ ಕಾರ್ಮಿಕರ ಕೊರತೆ ಹಿನ್ನೆಲೆಯಲ್ಲಿ ರೈತರು ಯಂತ್ರೋಪಕರಣ ಕೃಷಿಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಪ್ರಸ್ತುತ ಗದ್ದೆ ಉಳುಮೆ ಮಾಡಲು ಹಾಗೂ ನೇಜಿಗೂ ಯಂತ್ರ ಬಳಕೆಯಾಗುತ್ತಿದೆ. ಪ್ರಸ್ತುತ ಕೋವಿಡ್‌ ಹಾಗೂ ಗ್ರಾಮಗಳು ಸಂಪೂರ್ಣ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೃಷಿ ಯಂತ್ರಗಳ ನಿರ್ವಹಣೆಗೆ ತಂತ್ರಜ್ಞರು ಸಿಗದೆ ಯಂತ್ರೋಪಕರಣಗಳ ನಿರ್ವಹಣೆಯಾಗುತ್ತಿಲ್ಲ. ಇದರಿಂದ ಬಾಡಿಗೆ ನೀಡುವ ಸಂಸ್ಥೆ ಹಾಗೂ ಯಂತ್ರಗಳನ್ನು ಹೊಂದಿರುವ ರೈತರು ದುರಸ್ತಿಗಾಗಿ ಪರದಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಕೃಷಿ  ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ.

ಬಿತ್ತನೆ ಬೀಜ  ವಿತರಣೆ  : ಸರಕಾರದಿಂದ ಜಿಲ್ಲೆಗೆ 2020-21ರಲ್ಲಿ 2,597.65 ಕ್ವಿಂ. ಬಿತ್ತನೆ ಬೀಜ ಬಂದಿದ್ದು, ಅದರಲ್ಲಿ 2,591.65 ಕ್ವಿಂ. ಬಿತ್ತನೆ ಬೀಜ ರೈತರಿಗೆ ನೀಡಲಾಗಿದೆ. ಈ ಬಾರಿ 2021-22ನೇ ಸಾಲಿನಲ್ಲಿ 2,194.2 ಕ್ವಿಂ.ನಲ್ಲಿ 1,780 ಕ್ವಿಂ. ಬೀಜ ಈಗಾಗಲೇ ವಿತರಿಸಲಾಗಿದೆ. ಬಾಕಿ ಇರುವ 414 ಕ್ವಿಂ. ಬಿತ್ತನೆ ಬೀಜ ವಿತರಣೆಗೆ ಬಾಕಿಯಿದೆ. ಜಿಲ್ಲೆಯಲ್ಲಿ ಶೇ.20ರಷ್ಟು ರೈತರು ಮಾತ್ರ ಬಿತ್ತನೆ ಬೀಜ ಖರೀದಿ ಮಾಡುತ್ತಾರೆ. ಉಳಿದವರು ಸಾಂಪ್ರ ದಾಯಿಕವಾಗಿ ಬೀಜ ಸಂಗ್ರಹಿಸಿ, ಬಿತ್ತನೆ ಮಾಡು ತ್ತಾರೆ.

ಸಮಸ್ಯೆಗಳಿದ್ದರೆ ಕರೆ ಮಾಡಿ : ಜಿಲ್ಲೆಯ ಎಲ್ಲ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳು ಪ್ರತಿನಿತ್ಯ (ರಜೆ ದಿನ ಹೊರತುಪಡಿಸಿ) ಬೆಳಗ್ಗೆ 6ರಿಂದ 10 ಗಂಟೆಯವರೆಗೆ ತೆರೆದಿರುತ್ತವೆ. ರೈತ ಸಂಪರ್ಕ ಕೇಂದ್ರಗಳ  ಕೃಷಿ ಅಧಿಕಾರಿಗಳ ದೂರವಾಣಿ ಸಂಖ್ಯೆ  ಕೋಟ: 8277929753, ಬ್ರಹ್ಮಾವರ: 8277932506, ಉಡುಪಿ: 8277929751, ಕಾಪು: 8277929752, ಕುಂದಾಪುರ: 8277929754, ವಂಡ್ಸೆ: 8277929755, ಬೈಂದೂರು: 8277932520, ಕಾರ್ಕಳ: 8277932523, ಅಜೆಕಾರು: 8277932527 ಅಥವಾ ಕೃಷಿ ಇಲಾಖೆಯ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮೊ.ನಂ: 8277932515, ಕುಂದಾಪುರ: 8277929754, ಕಾರ್ಕಳ: 8277932505 ಅವರನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಜನರು ಕೃಷಿ ಕಡೆಗೆ ಒಲವು ತೋರಿಸುತ್ತಿದ್ದಾರೆ. ಈ ಬಾರಿಯೂ ನಿಗದಿಪಡಿಸಿದ ಗುರಿ ಸಾಧನೆಯಾಗಲಿದೆ. ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆ ಇಲ್ಲ. ಯಂತ್ರೋಪಕರಣಗಳ ದುರಸ್ತಿಗೆ  ತೆರಳುವುದಕ್ಕೂ ಅಡ್ಡಿ ಇಲ್ಲ.   – ಎಚ್‌. ಕೆಂಪೇಗೌಡ,  ಜಂಟಿ ನಿರ್ದೇಶಕರು, ಕೃಷಿ ಇಲಾಖೆ ಉಡುಪಿ

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.