ಸರ್ಕಾರದ ಎಡಬಿಡಂಗಿತನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ: ಕುಮಾರಸ್ವಾಮಿ
Team Udayavani, Jun 4, 2021, 4:23 PM IST
ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮೈಸೂರಿನ ಐಎಎಸ್ ಅಧಿಕಾರಿಗಳ ಜಗಳದ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ದ ವಿರುದ್ಧ ಕಿಡಿಕಾರಿದ್ದಾರೆ.
ಈ ಇಬ್ಬರು ಐಎಎಸ್ ಅಧಿಕಾರಿಗಳು ಇಷ್ಟೊಂದು ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತ ಸರಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಮಹಿಳಾ ಅಧಿಕಾರಿಗಳ ಜಗಳದಲ್ಲಿ ಜನಪ್ರತಿನಿಧಿಗಳು ಪರ ವಿರೋಧದ ಹೇಳಿಕೆಗಳನ್ನು ನೀಡಿ ತಮ್ಮ ಬಾಯಿ ಚಪಲ ತೀರಿಸಿ ಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿದೆ. ಹೀಗೆ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಪರಸ್ಪರ ಕಿತ್ತಾಡಿಕೊಂಡರೆ ಬೇರೆ ಬೇರೆ ಇಲಾಖೆಯಲ್ಲಿರುವವರು ನಾಳೆ ಇದೇ “ಹಾದಿ” ತುಳಿದರೆ ರಾಜ್ಯದ ಪರಿಸ್ಥಿತಿ ಏನಾಗಬಾರದು? ಕೂಡಲೇ ಸರಕಾರ ಇಬ್ಬರೂ ಅಧಿಕಾರಿಗಳ “ಬಾಯಿಗೆ ಬೀಗ” ಹಾಕುವಂತಹ ಧೈರ್ಯವನ್ನಾದರೂ ತೋರಲಿ. ಇಲ್ಲದಿದ್ದರೆ, ನಾಳೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಮರ್ಯಾದೆ ಹರಾಜಾದರೆ ಅದಕ್ಕೆ ಈಗಿನ ಸರಕಾರವೇ ಕಾರಣವಾಗಲಿದೆ ಎಂದು ಎಚ್ ಡಿಕೆ ಗುಡುಗಿದ್ದಾರೆ.
ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿಯ ಜೀವ ಬಲಿ ಪಡೆಯಲಾಯಿತು. ಅಂತಹದೇ ಪರಿಸ್ಥಿತಿ ಮೈಸೂರಿನಲ್ಲೂ ನಿರ್ಮಾಣವಾಗಿದೆ. ಅಮಾಯಕರನ್ನು ಬಲಿ ಪಡೆಯುವ ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು. ಮೈಸೂರಿನಲ್ಲಿ ಅಧಿಕಾರಿಗಳಿಬ್ಬರ ನಡುವಣ ಸಂಘರ್ಷ ಐದಾರು ತಿಂಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿ ಅಥವಾ ಸರ್ಕಾರದ ದೌರ್ಬಲ್ಯದ ಕಾರಣದಿಂದಲೇ ಅಧಿಕಾರಿಗಳು ಸೂಪರ್ ಮ್ಯಾನ್ ಗಳಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ:ಶಾಸಕಾಂಗ ಸಭೆ ಕರೆಯಲ್ಲ, ಶಾಸಕರ ಜೊತೆಗೆ ವೈಯಕ್ತಿಕವಾಗಿ ಚರ್ಚೆ ಮಾಡುತ್ತೇವೆ: ಅಶೋಕ್
ಅಧಿಕಾರಿಗಳ ಜಟಾಪಟಿಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದಂತಿದೆ. ಮೂಡ ಕಮಿಷನರ್ 12 ಕೋಟಿ ರೂಪಾಯಿಗಿಂತ ಸಿಎಸ್ಆರ್ ಎಫ್ ಹೆಚ್ಚು ಹಣದ ಲೆಕ್ಕ ಕೊಟ್ಟಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಆರೋಪಿಸಿದರೆ, 42 ಕೋಟಿ ರೂಪಾಯಿ ಮಿಗಿಲಾದ ಹಣದ ದುರ್ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಸಂಸದ ಅಬ್ಬರಿಸುತ್ತಾರೆ. ಕೋಟ್ಯಂತರ ರೂಪಾಯಿಗಳ ಆವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇದು ಮುಖ್ಯಮಂತ್ರಿಯ ದೌರ್ಬಲ್ಯವೋ? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ? ಯಾರನ್ನು ಓಲೈಸಲು ಅಥವಾ ದೌರ್ಬಲ್ಯ ಮುಚ್ಚಿಕೊಳ್ಳಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ? ಸರ್ಕಾರಕ್ಕೇನಾದರೂ ಕಿಂಚಿತ್ತು ಮಾನ ಮರ್ಯಾದೆ ಇದೆಯೇ? ‘ಪ್ರಜಾಪ್ರಭುತ್ವದ ಮೂರು ಮಂಗಗಳು’ ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮತ್ತೆ ಜೈಲು ಸೇರಲು ಪ್ರಧಾನಿ ಮೋದಿಯನ್ನು ಹತ್ಯೆಗೈಯುವುದಾಗಿ ಬೆದರಿಕೆಯೊಡ್ಡಿದ ಯುವಕ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.