ಮೆಡಿಕಲ್ ಸರ್ವೀಸ್ ಸೆಂಟರ್ ಪದಾಧಿಕಾರಿಗಳ ಪ್ರತಿಭಟನೆ
Team Udayavani, Jun 5, 2021, 9:53 AM IST
ದಾವಣಗೆರೆ: ಕೋವಿಡ್ ವಾರಿಯರ್ಸ್ ಗಳ ಮೇಲಿನ ಹಲ್ಲೆ, ಆಧುನಿಕ ವೈದ್ಯಕೀಯ ಪದ್ಧತಿ ವಿರುದ್ಧ ಬಾಬಾ ರಾಮದೇವ್ ನೀಡಿರುವ ಹೇಳಿಕೆ ಖಂಡಿಸಿ ಶುಕ್ರವಾರ ಮೆಡಿಕಲ್ ಸರ್ವೀಸ್ ಸೆಂಟರ್ ಮುಖಂಡರು, ಪದಾಧಿಕಾರಿಗಳು ಆನ್ಲೈನ್ ಪ್ರತಿಭಟನೆ ನಡೆಸಿದರು.
ಇತ್ತಿಚಿನ ವರ್ಷಗಳಲ್ಲಿ, ಅವೈಜ್ಞಾನಿಕ ವೈದ್ಯಕೀಯ ಚಿಕಿತ್ಸೆ ಮತ್ತು ಚಿಂತನೆಗಳಿಗೆ ಕುಮ್ಮಕ್ಕು ನೀಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಕೋವಿಡ್ ಮಹಾಮಾರಿಯ ವಿರುದ್ಧದ ಹೋರಾಟದ ಹಗಲು ರಾತ್ರಿಯನ್ನದೆ ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುವ ಆಧುನಿಕ ವೈದ್ಯಕೀಯ ಸಿಬ್ಬಂದಿ ಮತ್ತು ಚಿಕಿತ್ಸಾ ವಿಧಾನದ ಬಗ್ಗೆ ಬಾಬಾ ರಾಮದೇವ್ ಅವರು ಅವಹೇಳನಕಾರಿ ಹೇಳಿಕೆ ನೀಡುವ ಜೊತೆಗೆ ದುರುದ್ದೇಶಪೂರಿತ ಅಭಿಯಾನ ನಡೆಸುತ್ತಿರುವುದು ಖಂಡನೀಯ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಈಚೆಗೆ ಹಲವು ಕಡೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಲ್ಲೆ ಹೆಚ್ಚುತ್ತಿವೆ. ವೈದ್ಯಕೀಯ ಸಿಬ್ಬಂದಿ, ಕೋವಿಡ್ ವಾರಿಯರ್ಸ್ ಮೇಲಿನ ಹಲ್ಲೆಯನ್ನು ನಿಲ್ಲಿಸಿ, ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಎಲ್ಲರಿಗೂ ಉಚಿತ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಖಾತ್ರಿಪಡಿಸಬೇಕು. ಸಾರ್ವತ್ರಿಕ, ಉಚಿತ ಲಸಿಕಾ ಅಭಿಯಾನ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.