ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ: ಸರ್ಕಾರದ ವಿರುದ್ಧ ಎಚ್ ಡಿಕೆ ಕಿಡಿ
Team Udayavani, Jun 5, 2021, 10:00 AM IST
ಬೆಂಗಳೂರು: ‘ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೆಯೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–ಎಫ್ ಎಂಡಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗ ಟ್ವೀಟ್ ಮಾಡಿರುವ ಅವರು, ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೇ ರೈತ ಕೊರಗಿ ಕುಗ್ಗಿ ಹೋಗುತ್ತಾನೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೋವಿಡ್ 19 ಕಾರಣದಿಂದ ಲಸಿಕೆ ಹಾಕಿಲ್ಲ ಎಂದು ಪಶು ವೈದ್ಯರು ಹೇಳಿದ್ದಾರೆ. ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಗತ ವೈಭವ ಪಡೆದೀತೆ ‘ದಿ ರಿಯಲ್ ಕ್ರಿಕೆಟ್’: ಟೆಸ್ಟ್ ಕ್ರಿಕೆಟ್ ನ ಭವಿಷ್ಯವೇನು?
ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾ. ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗಬೇಕು. ಮುಂದೆ ಜೂನ್‌ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು. ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಲಿ. ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.