ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್
Team Udayavani, Jun 5, 2021, 5:06 PM IST
ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಸಿ.ವಿ.ರಾಮನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.
15 ದಿನಗಳ ಹಿಂದೆ ಇದ್ದ ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ ಹೆಚ್ಚು ಹಣ ಪಡೆಯುವಂತಿಲ್ಲ. ಇದಕ್ಕಾಗಿ ದರ ನಿಗದಿಪಡಿಸಲಾಗುವುದು. ಚಿಕಿತ್ಸಾ ವೆಚ್ಚಕ್ಕೆ ಇಷ್ಟೇ ಪಡೆಯಬೇಕು ಎಂದು ನಿಗದಿ ಮಾಡಲಾಗುವುದು ಎಂದರು.
ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ
ಸಿಎಸ್ ಆರ್ ಚಟುವಟಿಕೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಅಳವಡಿಸಲಾಗಿದೆ. ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ 24 ಹಾಸಿಗೆಗಳ ಐಸಿಯು ಘಟಕ ಆರಂಭಿಸಲಾಗಿದೆ. ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ 77 ಹಾಸಿಗೆಗಳ ಐಸಿಯು, ಆಕ್ಸಿಜನ್ ಹಾಸಿಗೆ ಅಳವಡಿಸಲಾಗಿದೆ. ಜೊತೆಗೆ ಡಿಆರ್ ಡಿಒ ಸಂಶೋಧಿಸಿದ 1 ಸಾವಿರ ಲೀಟರ್ ಆಕ್ಸಿಜನ್ ಘಟಕವನ್ನು ಅಳವಡಿಸಲಾಗಿದೆ. ಇದು ವಾತಾವರಣದಿಂದ ಆಕ್ಸಿಜನ್ ಪಡೆದು 100 ಹಾಸಿಗೆಗಳಿಗೆ ಪೂರೈಕೆ ಮಾಡುತ್ತದೆ. ಇದನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಒಂದೇ ಭಾಗದಲ್ಲಿ ಹೆಚ್ಚು ಆಕ್ಸಿಜನ್, ಐಸಿಯು ವ್ಯವಸ್ಥೆ ಲಭ್ಯವಿದೆ. ಕೋವಿಡ್ ಪ್ರಕರಣ ಕಡಿಮೆಯಾದರೂ ಸಿದ್ಧತೆಗಳನ್ನು ಮಾಡಿಕೊಂಡಿರ ಬೇಕಾಗುತ್ತದೆ. ಸಿದ್ಧತೆಗಳನ್ನು ಮಾಡಿಕೊಳ್ಳುವುದು ರಾಜ್ಯ ಸರ್ಕಾರದ ಗಂಭೀರ ಚಿಂತನೆ. ಆ ನಿಟ್ಟಿನಲ್ಲಿ ಆಸ್ಪತ್ರೆಗಳ ಮೂಲಸೌಕರ್ಯ ಹೆಚ್ಚಿಸಲಾಗಿದೆ ಎಂದು ಸುಧಾಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.