ಲಾಕ್ ಡೌನ್ ಅವಧಿಯಲ್ಲಿ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ಧಿ
Team Udayavani, Jun 5, 2021, 6:55 PM IST
ಮಂಗಳೂರು : ಒಂದೆಡೆ ಕೋವಿಡ್ ಸೋಂಕಿನ ಕರಿನೆರಳು ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಮನೆ ಮಾಡಿದ್ದರೆ, ಇನ್ನೊಂದೆಡೆ ಪಿಲಿಕುಳದ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ದಿಯ ಖುಷಿಯ ವಿಚಾರವನ್ನು ಪಿಲಿಕುಳ ಜೈವಿಕ ಉದ್ಯಾವನದ ನಿರ್ದೇಶಕ ಹೆಚ್. ಜೆ. ಭಂಡಾರಿಯವರು ತಿಳಿಸಿದ್ದಾರೆ.
ಪಿಲಿಕುಳ ಮೃಗಾಲದಲ್ಲಿರುವ ರಾಣಿ ಹುಲಿ, ಕಾಡುಶ್ವಾನ ‘ದೋಳ್’ , ‘ರಿಯಾ’ ಪಕ್ಷಿ, ‘ಲಟಿಕ್ಯುಲೇಟಿಡ್’ ಹೆಬ್ಬಾವು, ಕಾಳಿಂಗ ಸರ್ಪ ಇವು ಸಂತಾನಾಭಿವೃದ್ದಿಯನ್ನು ನಡೆಸಿದ ಪ್ರಾಣಿಗಳು.
ರಾಣಿ ಹುಲಿ :
10 ವರ್ಷ ಪ್ರಾಯದ ‘ರಾಣಿ’ ಹುಲಿ ಮೂರು ಮರಿಗಳಿಗೆ ಜನ್ಮ ನೀಡಿದೆ. ಹಿಂದೆ 2019ರಲ್ಲಿ ರೇವಾ, ಸುಧಾ, ಜಯರಾಮ, ಸಂಜಯ ಮತ್ತು ವಿಜಯ ಎಂಬ 5 ಮರಿಗಳಿಗೆ ಜನ್ಮ ನೀಡಿದ್ದು, ಅದು ಈಗ ಬೆಳೆದು ದೊಡ್ಡದಾಗಿವೆ. ಈಗ ಜನಿಸಿದ ಮರಿಗಳು ಆರೋಗ್ಯವಾಗಿದ್ದು ಇನ್ನು 16 ದಿನಗಳಲ್ಲಿ ಕಣ್ಣು ತೆರೆಯಲಿವೆಯಂತೆ.
ರಾಣಿ ಹುಲಿಯನ್ನು ಪ್ರಾಣಿ ವಿನಿಮಯ ಕಾರ್ಯದಡಿ ಬನೇರುಘಟ್ಟ ಮೃಗಾಲಯಕ್ಕೆ ಪಿಲಿಕುಲದ ಒಂದು ಗಂಡು ಹುಲಿಯನ್ನು ನೀಡಿ ಬದಲಿಗೆ ರಾಣಿಯನ್ನು ಕರೆತರಲಾಗಿತ್ತು, ಸದ್ಯ ಈಗ ಪಿಲಿಕುಲದಲ್ಲಿ ಹುಲಿಗಳ ಸಂಖ್ಯೆ 13 ಕ್ಕೆ ಏರಿದೆ.
ಕಾಡುಶ್ವಾನ ‘ದೋಳ್’ :
ಆಂದ್ರ ಪ್ರದೇಶದ ವಿಶಾಖಪಟ್ಟಣಂ ಮೃಗಾಲಯದಿಂದ ತರಿಸಲಾದ ಅಳಿವಿನಂಚಿನಲ್ಲಿರುವ ಕಾಡು ಶ್ವಾನಗಳ ವರ್ಗಕ್ಕೆ ಸೇರಿದ ‘ದೋಳ್’ ಇತ್ತೀಚಿಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಇದೆ ‘ದೋಳ್” ಈ ಹಿಂದೆ 5 ಮರಿಗಳಿಗೆ ಜನ್ಮ ನೀಡಿತ್ತು. ಮೃಗಾಲಯದಲ್ಲಿರುವ ಇನ್ನೊಂದು ‘ದೋಳ್ ಹತ್ತು ಮರಿಗಳಿಗೆ ಜನ್ಮ ನೀಡಿತ್ತು. ಪಿಲಿಕುಲದಲ್ಲಿ “ದೋಳ್” ಕಾಡು ಶ್ವಾನಗಳ ಸಂಖ್ಯೆ 32ಕ್ಕೆ ಏರಿದೆ.
‘ರಿಯಾ’ ಪಕ್ಷಿಯ ಜನನ:
ಉಷ್ಟ್ರಪಕ್ಷೀಯ ವರ್ಗಕ್ಕೆ ಸೇರಿದ ಬಿಳಿ ರಿಯಾವು ಮೊಟ್ಟೆಗಳನಿಟ್ಟಿದು. ಅವುಗಳಿಗೆ ಪ್ರಯೋಗಾಲಯದಲ್ಲಿ ಕೃತಕ ಕಾವು ಕೊಡಲಾಗುತ್ತಿದ್ದು , ಅದರಲ್ಲಿ ಈಗಾಗಲೇ ಒಂದು ಬಿಳಿ ರಿಯಾ ಮರಿಯು ಜನ್ಮ ತಾಳಿದೆ.
‘ರೆಟಿಕ್ಯುಲೇಟಿಡ್’ ಹೆಬ್ಬಾವು:
ಅಪರೂಪದ ಅಳಿವಿನಂಚಿನಲಿರುವ ‘ರೆಟಿಕ್ಕುಲೇಟೆಡ್’ ಹೆಬ್ಬಾವು ಸುಮಾರು 20 ಮೊಟ್ಟೆಗಳನಿಟ್ಟು ಕಾವು ನೀಡುತ್ತಿದೆ. ಇದೇ ಹೆಬ್ಬಾವು ಕಳೆದ ಸಾಲಿನಲ್ಲಿ 17 ಮರಿಗಳಿಗೆ ಜನ್ಮ ನೀಡಿದೆ. ರೆಟಿಕ್ಯುಲೇಟೆಡ್ ಹೆಬ್ಬಾವು ನಿಕೊಬಾರ್‌ನಲ್ಲಿ ಕಾಣಸಿಗುವ ಹಾವುಗಳು.
ಕಾಳಿಂಗ ಸರ್ಪ:
ಕೆಲವು ವರ್ಷಗಳ ಹಿಂದೆ ದೇಶದಲ್ಲೇ ಪ್ರಥಮಬಾರಿ ವೈಜ್ಞಾನಿಕವಾಗಿ ಕಾಳಿಂಗಗಳ ಸಂತಾನಾಭಿವೃದಿ ಪಡಿಸಿದ ಕೀರ್ತಿ ಪಿಲಿಕುಳ ಮೃಗಾಲಯಕ್ಕೆ ಸಲ್ಲುತ್ತದೆ. ಈಗ ಕಾಳಿಂಗ ‘ನಾಗಮಣಿ’ ಯು ಆರು ಮೊಟ್ಟೆಗಳನ್ನು ಇಟ್ಟಿದ್ದು ಅವುಗಳಿಗೆ ಕೃತಕ ಕಾವು ಕೊಡಲಾಗುತ್ತಿವೆ. ಪಿಲಿಕುಳದಲ್ಲಿ ಒಟ್ಟು 19 ಕಾಳಿಂಗ ಸರ್ಪಗಳಿವೆ.
ಇನ್ನು “ಲಾಕ್‌ಡೌನ್ ಮುಗಿದ ಬಳಿಕ ಪ್ರಾಣಿ ವಿನಿಮಯದಲ್ಲಿ ಚೆನ್ನೈ ನ ವಂಡಲೂರು ಮೃಗಾಲಯದಿಂದ ಬಿಳಿ ಹುಲಿಯನ್ನು ತರಿಸಲಾಗುವುದು. ಒರಿಸ್ಸಾದ ನಂದನಕಾನನ್, ಸೂರತ್, ಮತ್ತು ಹೈದರಾಬಾದ್ ಮೃಗಾಲಯದಿಂದ ಕೆಲವು ಪ್ರಾಣಿ ಪಕ್ಷಿಗಳನ್ನು ತರುವ ಬಗ್ಗೆ ಯೋಜನೆ ಕೈಗೊಳ್ಳಲಾಗಿದೆ” ಎಂದು ಪಿಲಿಕುಲ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್. ಜೆ. ಭಂಡಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.