ಸಚಿವರಿದಾಗ ನೇಕಾರರಿಗೆ ಉಮಾಶ್ರೀ ಮಾಡಿದೇನು?

ಮಾಜಿ ಸಚಿವೆ ವಿರುದ್ಧ ಶಾಸಕ ಸಿದ್ದು ಸವದಿ ವಾಗ್ಧಾಳಿ | ಆಸ್ಪತ್ರೆಗಳಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಪಡಿಸಲು ಅನುದಾನ ಬಳಕೆ

Team Udayavani, Jun 5, 2021, 7:32 PM IST

4 bnt 2

ಬನಹಟ್ಟಿ: ಕೊರೊನಾಗೆ ಹೆದರಿ ಬೆಂಗಳೂರಿನ ಮನೆಯಲ್ಲಿ ಕುಳಿತು ಅದೇಗೆ ನೇಕಾರರ ಪರ ಕಾಳಜಿ ವಹಿಸಿದ್ದೀರಿ? ನೇಕಾರರ ಕಾರ್ಯ ಮಾಡಿದ್ದೀರಿ? ಸಚಿವರಿದ್ದಾಗಲೇ ಏನು ಮಾಡದ ನೀವು, ಈಗ ಹೇಗೆ ಮಾಡುತ್ತೀರಿ, ಇಂತಹ ತೀವ್ರ ಸಂಕಷ್ಟದ ಸಮಯದಲ್ಲಿ ಮಾಡಿದ್ದಾದರೂ ಏನು. ನಿಮ್ಮ ಹಣೆಬರಹ ಜನರಿಗೆ ತಿಳಿದಿದೆ ಎಂದು ಮಾಜಿ ಸಚಿವೆ ಉಮಾಶ್ರೀ ವಿರುದ್ಧ ತೇರದಾಳ ಶಾಸಕ ಸಿದ್ದು ಸವದಿ ಹರಿಹಾಯದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿ ವೇಶನದಲ್ಲಿಯೂ ಆಡಳಿತ ಸರ್ಕಾರವಿದ್ದರೂ ನೇಕಾರರಿಗೆ ಅನ್ಯಾಯವಾದ ಸಂದರ್ಭದಲ್ಲಿ ನಮ್ಮದೇ ಸರಕಾರವಿದ್ದರೂ ಸರಕಾರದ ನಿರ್ಲಕ್ಷ್ಯತನವನ್ನು ಖಂಡಿಸಿ ಸಭೆಯ ಗಮನ ಸೆಳೆದಿದ್ದೇನೆ. ಸಮುದಾಯಕ್ಕೆ ಅನ್ಯಾಯವಾದರೆ ಸಹಿಸೋಲ್ಲ. ಇದೀಗ ಮುಖ್ಯಮಂತ್ರಿಯವರೊಂದಿಗೆ ಅನೇಕ ಬಾರಿ ಮನವಿ ಮಾಡಿಕೊಂಡು ಡಿಸಿಎಂ ಗೋವಿಂದ ಕಾರಜೋಳರೊಂದಿಗೆ ಮಾತುಕತೆ ಮೂಲಕ ಪ್ರತಿ ನೇಕಾರನಿಗೆ 3 ಸಾವಿರ ರೂ. ಸಹಾಯ ಧನ ಒದಗಿಸಿದ್ದೇನೆ. ಆದರೆ, ಅದನ್ನು ನಾವೇ ಮಾಡಿಸಿದ್ದು ಎಂದು ಸುಳ್ಳು ಹೇಳಿಕೆ ನೀಡುತ್ತಿರುವ ಉಮಾಶ್ರೀಯವರ ಧೋರಣೆಯನ್ನು ಖಂಡಿಸಿದರು.

ಕ್ಷೇತ್ರದಲ್ಲಿ ನೇಕಾರರ ಸೇವಾ ಕಾರ್ಯ ಮಾಡುತ್ತೇವೆ. ಮಾನವೀಯತೆ ದೃಷ್ಟಿಯಿಂದ ದೇವರು ಮೆಚ್ಚುವಂತಹ ಕೆಲಸ ಮಾಡುತ್ತೇವೆ. ಕೈ ಮಗ್ಗ ನೇಕಾರ ಪರಸ್ಥಿತಿ ಗಂಭೀರವಾಗಿದೆ. ಅವರಿಗೆ ಎರಡು ಸಾವಿರ ಕೊಟ್ಟಿದ್ದು ನಮಗೆ ಸಮಾಧಾನವಿಲ್ಲ. ಆದರೆ ಕೋವಿಡ್‌ ಸಂಕಷ್ಟದಲ್ಲಿ ಸರಕಾರದ ಸ್ಥಿತಿ ಗಂಭೀರವಾಗಿದೆ. ಎಲ್ಲ ನೇಕಾರರಿಗೆ ಕನಿಷ್ಠ 5 ಸಾವಿರ ನೀಡಬೇಕು ಎನ್ನುವುದು ನಮ್ಮ ಬೇಡಿಕೆ ಬಹುದಿನಗಳಿಂದ ಇದೆ ಎಂದರು.

ಸಾಲಮನ್ನಾಕ್ಕೆ ನೇಕಾರರ ಮುಂಗಡ ಸಾಲ (ಕ್ಯಾಶ್‌ ಕ್ರೆಡಿಟ್‌)ದವರಿಗೂ ಶೀಘ್ರವೇ 1 ಲಕ್ಷ ರೂ. ಸಾಲ ಮನ್ನಾ ಕಾರ್ಯ ನಡೆಯುತ್ತಿದೆ. ನೇಕಾರರಲ್ಲಿ ಅನುಮಾನಬೇಡ. ಈ ಕುರಿತು ಶೀಘ್ರ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳ ಜತೆ ಹಾಗೂ ಇಲಾಖೆಯ ಕಾರ್ಯದರ್ಶಿಯವರ ಜತೆ ಮಾತನಾಡಿ ಶೀಘ್ರ ಇತ್ಯರ್ಥ ಪಡಿಸುವುದಾಗಿ ತಿಳಿಸಿದರು.

50 ಲಕ್ಷ ಶಾಸಕರ ನಿಧಿ ಕ್ಷೇತ್ರದ ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟಿದ್ದು, ಕ್ಷೇತ್ರದಲ್ಲಿನ ರಬಕವಿ- ಬನಹಟ್ಟಿ, ಮಹಾಲಿಂಗಪುರ, ತೇರದಾಳದಲ್ಲಿನ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಲಭ್ಯ ಅಭಿವೃದ್ಧಿ ಪಡಿಸಲು ಹಣ ಬಳಸುವುದಾಗಿ ಶಾಸಕ ಸವದಿ ತಿಳಿಸಿದರು. ರಬಕವಿ-ಬನಹಟ್ಟಿ ನಗರಾಧ್ಯಕ್ಷ ಶ್ರೀಶೈಲ ಬೀಳಗಿ ಮಾತನಾಡಿ, ನೀಚ ಹಾಗೂ ನಾಲಾಯಕ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್‌ ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಾದರೂ ಪ್ರಾಮಾಣಿಕವಾಗಿ ಸಾರ್ವಜನಿಕರ ಸಹಾಯಕ್ಕೆ ಬರಲಿ ಬದಲಾಗಿ ಅಪಪ್ರಚಾರ ನಡೆಸುತ್ತಿರುವದು ಬೇಸರ ತರುವಂಥದ್ದು ಎಂದರು.

ಶ್ರೀಶೈಲ ದಭಾಡಿ, ಸಿದ್ಧನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ ಅಂಬಲಿ, ಗೋವಿಂದ ಡಾಗಾ, ಸೋಮನಾಥ ಗೊಂಬಿ, ರಮೇಶ ಕೊಣ್ಣೂರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸವಿತಾ ಹೊಸೂರ, ಸುವರ್ಣಾ ಕೊಪ್ಪದ, ಪ್ರವೀಣ ಕೋಲಾರ ಇದ್ದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.