ಸಸಿ ನೆಟ್ಟು ಪರಿಸರ ಬೆಳೆಸಿ-ಉಳಿಸಿ
ಕೊರೊನಾ ಸೋಂಕಿತರ ಆಮ್ಲಜನಕ ಸಮಸ್ಯೆಗೆ ಪರಿಸರ ಹಾನಿಯೇ ಕಾರಣ: ಚಂದ್ರಶೇಖರ ಶ್ರೀ
Team Udayavani, Jun 6, 2021, 6:36 PM IST
ಬೆಳಗಾವಿ: ನಾಡಿನ ಪರಿಸರ ಶುದ್ಧ ಇದ್ದರೆ ಎಂತಹ ರೋಗವನ್ನೂ ತಡೆಗಟ್ಟಬಹುದು. ಕಾರಣ ಪ್ರತಿಯೊಬ್ಬರು ಮನೆಯ ಮುಂದೆ ಸಸಿಗಳನ್ನು ನೆಟ್ಟು ಪರಿಸರ ಬೆಳೆಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಸಸಿ ನೆಡುವುದರ ಮೂಲಕ ವಿಶ್ವಪರಿಸರ ದಿನ ಆಚರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜನರು ಪರಿಸರ ರಕ್ಷಣೆ ಮಾಡುತ್ತಿಲ್ಲ. ಇದರಿಂದ ಹೊರಗಡೆ ಬರಲು ಸಾಧ್ಯವಾಗದ ಸ್ಥಿತಿಯಲ್ಲಿ ನಾವಿದ್ದೇವೆ. ಆಮ್ಲಜನಕ ಸಿಗುತ್ತಿಲ್ಲ ಎಂದು ಸಾಕಷ್ಟು ಪರಿಶ್ರಮ ಪಡುತ್ತಿದ್ದೇವೆ. ಮರಗಳನ್ನು ಉಳಿಸಿ ಬೆಳೆಸುವಲ್ಲಿ ವಿಫಲವಾಗಿದ್ದೇವೆ ಎಂದು ವಿಷಾದಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್‌ಗಾಗಿ ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಉದಾಹರಣೆಗಳು ಸಾಕಷ್ಟಿದೆ. ಈಗಲೂ ನಾವು ಪರಿಸರ ಬೆಳೆಸದಿದ್ದರೆ ಮುಂದೆ ಇನ್ನೂ ಹೆಚ್ಚಿನ ಅನಾಹುತ ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಅರಳಿಮರ ನಿತ್ಯ ಆಮ್ಲಜನಕ ಕೊಡುತ್ತದೆ. ಆಲದ ಮರ ಒಂದು ದಿನಕ್ಕೆ 20 ಗಂಟೆಗಳ ಕಾಲ ಆಮ್ಲಜನಕವನ್ನು ಕೊಡುತ್ತದೆ. ಬೇವಿನ ಮರ 18 ಗಂಟೆ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ. ಪ್ರತಿಯೊಂದು ಮರಗಳನ್ನು ನಾವು ಬೆಳೆಸುವುದರಿಂದ ನಮಗೆ ಬಹಳ ಲಾಭವಿದೆ. ಜನರು ಇದನ್ನು ಅರಿತು ಗಿಡಗಳನ್ನು ಬೆಳೆಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.