ಸಿಎಂ ರಾಜೀನಾಮೆ ಹೇಳಿಕೆಯ ಅರ್ಥ ಸ್ಥಾನ ತ್ಯಜಿಸುತ್ತಾರೆಂದಲ್ಲ : ಡಿಸಿಎಂ
Team Udayavani, Jun 6, 2021, 8:05 PM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಯನ್ನು “ಅವರು ರಾಜೀನಾಮೆ ನೀಡುತ್ತಾರೆ” ಅಥವಾ “ಸ್ಥಾನ ತ್ಯಜಿಸುತ್ತಾರೆ” ಎಂದು ಅರ್ಥೈಸುವುದು ಬೇಡ. ನಮ್ಮದು ಶಿಸ್ತಿನ ಪಕ್ಷ ಎಂಬ ಸಂದೇಶವನ್ನಷ್ಟೇ ಅವರು ಪ್ರತಿಪಕ್ಷಗಳಿಗೆ ರವಾನಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಲಗ್ಗೆರೆಯಲ್ಲಿ ಭಾನುವಾರ ಶಾಸಕ ಮುನಿರತ್ನ ಅವರು ಆಯೋಜಿಸಿದ್ದ ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಒಂದು ಲಕ್ಷ ಆಹಾರ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ಮುಖ್ಯಮಂತ್ರಿ ಅವರು ಯಾವ ದೃಷ್ಟಿಯಲ್ಲಿ ಈ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರು ನಮ್ಮ ಅಗ್ರಮಾನ್ಯ ನಾಯಕರು. ನಾನು ಯಾವುದೇ ಕುರ್ಚಿಗೆ ಅಂಟಿಕೊಳ್ಳಲ್ಲ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ನಿರ್ಣಯಕ್ಕೆ ನಾನು ಬದ್ಧವಾಗಿರುತ್ತೇನೆ ಅಂತ ಅವರು ಹೇಳಿದ್ದಾರೆ. ಹಾಗೆ ಹೇಳಿದ ತಕ್ಷಣ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುತ್ತಾರೆಂದು ಅರ್ಥವಲ್ಲ. ಪಕ್ಷಕ್ಕೆ ಬದ್ಧರಾಗಿರುವ ಸಂದೇಶವನ್ನಷ್ಟೇ ಅವರು ಪ್ರತಿಪಕ್ಷಕ್ಕೆ ನೀಡಿದ್ದಾರೆ ಎಂದರು ಡಿಸಿಎಂ.
ಅವರು ಈಗ ನಮ್ಮ ಮುಖ್ಯಮಂತ್ರಿಗಳಾಗಿದ್ದಾರೆ. ಮುಖ್ಯಮಂತ್ರಿಗಳಾಗಿಯೇ ಮುಂದುವರಿಯುತ್ತಾರೆ. ಈ ಬಗ್ಗೆ ಯಾವ ಗೊಂದಲ ಅಥವಾ ಅನುಮಾನ ಬೇಡ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರಲ್ಲದೆ, ಬಿಜೆಪಿ ಕೇಡರ್ ಆಧಾರಿತ ಪಕ್ಷ. ಹೀಗಾಗಿ ಇಂಥ ವಿಷಯಗಳಿಗೆ ಹೆಚ್ಚು ಮಹತ್ವ ಕೊಡುವ ಪದ್ಧತಿ ನಮ್ಮಲ್ಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.