ಈ ಬಾರಿಯೂ ಭತ್ತ ಖರೀದಿ ಕೇಂದ್ರ ಮರೀಚಿಕೆ?

ರೈತರು, ಜನಪ್ರತಿನಿಧಿಗಳ ಒತ್ತಡಕ್ಕೂ ಮಣಿಯದ ಸರ್ಕಾರ

Team Udayavani, Jun 6, 2021, 8:45 PM IST

Davanagere

„ರಾ. ರವಿಬಾಬು

ದಾವಣಗೆರೆ: ಭದ್ರಾ ಅಚ್ಚುಕಟ್ಟಿನ ದಾವಣಗೆರೆ ಜಿಲ್ಲೆಯಲ್ಲಿ ಬೇಸಿಗೆ ಭತ್ತದ ಹಂಗಾಮು ಪ್ರಾರಂಭವಾಗಿ ಸಾಕಷ್ಟು ದಿನ ಕಳೆದರೂ ಭತ್ತ ಖರೀದಿ ಕೇಂದ್ರ ಪ್ರಾರಂಭ ಆಗಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರ ಖರೀದಿ ಕೇಂದ್ರ ತೆರೆಯುವ ಮೂಲಕ ಭತ್ತದ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಒತ್ತಾಯ ಮಾಡುತ್ತಲೇ ಇದ್ದಾರೆ.

ಆದರೆ ಸರ್ಕಾರ ಮಾತ್ರ ಕೊರೊನಾ, ಆರ್ಥಿಕ ಸ್ಥಿತಿಯ ನೆಪವೊಡ್ಡಿ ಭತ್ತ ಖರೀದಿ ಕೇಂದ್ರದತ್ತ ಚಿತ್ತ ಹರಿಸುತ್ತಿಲ್ಲ. ಹಾಗಾಗಿ ಭತ್ತ ಬೆಳೆದವರ ಗೋಳು ಹೇಳತೀರದ್ದಾಗಿದೆ. ರೈತರು ಸಾಲ ಮಾಡಿ ಬೆಳೆದಂತಹ ಭತ್ತಕ್ಕೆ ಸರಿಯಾದ ದರ ಸಿಗದೆ ತೊಂದರೆ ಅನುಭವಿಸುವುದು ಮಾಮೂಲು ಎನ್ನುವಂತಾಗಿದೆ. ಒಂದು ಎಕರೆಯಲ್ಲಿ ಭತ್ತ ಬೆಳೆಯುವುದಕ್ಕೆ 20-25 ಸಾವಿರ ರೂ. ಖರ್ಚಾಗುತ್ತದೆ. ಮಾರುಕಟ್ಟೆಯಲ್ಲಿ ಕ್ವಿಂಟಲ್‌ ಭತ್ತವನ್ನು 1400-1500 ರೂಪಾಯಿಗೆ ಮಾರಿದರೆ ರೈತರಿಗೆ ಏನೂ ಸಿಗುವುದೇ ಇಲ್ಲ. ಕೊರೊನಾ ನೆಪದಲ್ಲಿ ರೈತರನ್ನು ಸಾಯಿಸಲಾಗುತ್ತಿದೆ. ಎಲೆಕ್ಷನ್‌, ಮೀಟಿಂಗ್‌ ಎಲ್ಲವೂ ನಡೆಯುವುದು ನಡೆಯುತ್ತಲೇ ಇದೆ.

ಆದರೆ, ಭತ್ತ ಖರೀದಿ ಆರಂಭ ಮಾಡಿ ರೈತರನ್ನು ಉಳಿಸುವ ಕೆಲಸ ಆಗುತ್ತಲೇ ಇಲ್ಲ. ಏನಾದರೂ ಆಗಲಿ ಮೊದಲು ಖರೀದಿ ಕೇಂದ್ರ ಪ್ರಾರಂಭಿಸಬೇಕು ಎನ್ನುವುದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಹೊನ್ನೂರು ಮುನಿಯಪ್ಪ ಅವರ ಒತ್ತಾಯ. ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಲ್‌ ಭತ್ತಕ್ಕೆ ಇಂತಿಷ್ಟ ದರ ನಿಗದಿಪಡಿಸಿ ಖರೀದಿ ಕೇಂದ್ರ ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಕಡಿಮೆ ಬೆಲೆ ಟೆಂಡರ್‌ ಮಾಡಿದರೆ ಖರೀದಿದಾರರನ್ನು ಯಾಕೆ ಕಡಿಮೆ ದರ ಎಂದು ಖರೀದಿದಾರರನ್ನೂ ಕೇಳಲಿಕ್ಕೆ ರೈತರಿಗೆ ಧೈರ್ಯ ಇರುತ್ತದೆ.

ಹಾಗಾಗಿ ಖರೀದಿ ಕೇಂದ್ರ ಪ್ರಾರಂಭಿಸಲೇಬೇಕು ಎನ್ನುತ್ತಾರೆ ಅವರು. ರೈತರು ಬೆಳೆದ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಡಾ| ಸ್ವಾಮಿನಾಥನ್‌ ವರದಿ ಯಥಾವತ್ತಾಗಿ ಜಾರಿ ಮಾಡದೇ ಹೋದರೂ ಚಿಂತೆ ಇಲ್ಲ. ಸದ್ಯಕ್ಕೆ ಖರೀದಿ ಕೇಂದ್ರ ಪ್ರಾರಂಭಿಸುವ ಮೂಲಕ ಭತ್ತ ಬೆಳೆದವರಿಗೆ ಅನುಕೂಲ ಮಾಡಿಕೊಡಬೇಕು. ಆದರೆ ಸರ್ಕಾರ ಕೊರೊನಾ ನೆಪದಲ್ಲಿ ಏನೂ ಮಾಡುತ್ತಲೇ ಇಲ್ಲ. ಎಲ್ಲವನ್ನೂ ಮಾಡಲಿಕ್ಕೆ ಹಣ ಇರುತ್ತದೆ, ಬೆಂಬಲ ಬೆಲೆ, ಪ್ರೋತ್ಸಾಹಧನ ನೀಡಿ ಖರೀದಿ ಕೇಂದ್ರ ಪ್ರಾರಂಭ ಮಾಡಲಿಕ್ಕೆ ಆಗುವುದಿಲ್ಲ ಎಂದು ಸರ್ಕಾರದ ಧೋರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಎಲ್ಲ ಹಂಗಾಮಿನಲ್ಲಿ ಭತ್ತ ಬೆಳೆಯೋದು, ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ಮಾಡುವುದು ನಡೆಯುತ್ತಲೇ ಇದೆ. ಆದರೆ ಕಳೆದ ವರ್ಷ ಮತ್ತು ಈ ವರ್ಷ ಕೊರೊನಾ ಕಾರಣಕ್ಕೆ ರೈತರು ಹೊರಗೆ ಬರದಂತಾಗಿದೆ. ಕೊರೊನಾದ ಬಗ್ಗೆ ಸರ್ಕಾರವೇ ಭಯ ಹುಟ್ಟುವಂತೆ ಮಾಡುತ್ತಿದೆ. ಹಾಗಾಗಿ ರೈತರು ಹೋರಾಟ ಮಾಡುವ ಮಾತೇ ದೂರ ಉಳಿಯುತ್ತಿದೆ. ಸರ್ಕಾರಕ್ಕೆ ಇದೇ ವರವಾಗಿದೆ.

ಹೇಳುವವರು, ಕೇಳುವವರು ಇಲ್ಲದಂತಾಗಿರುವುದರಿಂದ ಖರೀದಿ ಕೇಂದ್ರ ಪ್ರಾರಂಭಕ್ಕೆ ಮನಸ್ಸು ಮಾಡುತ್ತಿಲ್ಲ. ರೈತರ ಸಂಕಷ್ಟ ದೂರವಾಗುತ್ತಿಲ್ಲ ಎಂದು ಹೊನ್ನೂರು ಮುನಿಯಪ್ಪ ಬೇಸರ ವ್ಯಕ್ತಪಡಿಸುತ್ತಾರೆ.

ಜನಪ್ರತಿನಿಧಿಗಳ ಒತ್ತಾಯ: ಭತ್ತ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಸಹ ಒತ್ತಾಯ ಮಾಡುತ್ತಿದ್ದಾರೆ. ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಅವರು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಅವರಿಗೆ ಈ ಬಗ್ಗೆ ಒತ್ತಾಯಿಸಿದ್ದಾರೆ. ಉಸ್ತುವಾರಿ ಸಚಿವರೂ ಭರವಸೆ ನೀಡುತ್ತಲೇ ಇದ್ದಾರೆ. ಆದರೆ ಕಾರ್ಯರೂಪಕ್ಕೆ ಮಾತ್ರ ಬಂದಿಲ್ಲ. ಖರೀದಿ ಕೇಂದ್ರ ಕೇಂದ್ರ ಪ್ರಾರಂಭವಾಗುವ ಹೊತ್ತಿಗೆ ಹಂಗಾಮು ಮುಗಿದು ಹೋದರೂ ಅಚ್ಚರಿ ಪಡಬೇಕಾಗಿಲ್ಲ.

ಜಿಲ್ಲೆಯ 53,431 ಹೆಕ್ಟೇರ್‌ನಲ್ಲಿದೆ ಭತ್ತ ಬೆಳೆ

ದಾವಣಗೆರೆ ತಾಲೂಕಿನಲ್ಲಿ 20,848 ಹೆಕ್ಟೇರ್‌ ಅಂತೆಯೇ ಹರಿಹರದಲ್ಲಿ 20,502, ಚನ್ನಗಿರಿಯಲ್ಲಿ 4,385. ಹೊನ್ನಾಳಿಯಲ್ಲಿ 5,033 ಹಾಗೂ ನ್ಯಾಮತಿಯಲ್ಲಿ 663 ಹೆಕ್ಟೇರ್‌ ಒಳಗೊಂಡಂತೆ ಜಿಲ್ಲೆಯ 53,431 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯಲಾಗಿದೆ. ಈಗಾಗಲೇ ರೈತರು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಖರೀದಿ ಕೇಂದ್ರ ಪ್ರಾರಂಭವಾದಲ್ಲಿ ರೈತರಿಗೆ ಅನುಕೂಲ ಆಗಲಿದೆ. ಮುಕ್ತ ಮಾರುಕಟ್ಟೆಯಲ್ಲಿ ರೈತರ ನಿರೀಕ್ಷಿತ ಧಾರಣೆಗಿಂತಲೂ ಕಡಿಮೆ ದರದಲ್ಲಿ ಖರೀದಿ ಮಾಡುವುದು ನಿಲ್ಲಲಿದೆ. ಹಾಗಾಗಿ ಸರ್ಕಾರ ಭತ್ತ ಖರೀದಿ ಕೇಂದ್ರ ಪ್ರಾರಂಭಕ್ಕೆ ಮುಂದಾಗುವುದು ತುರ್ತು ಅಗತ್ಯ.

ವಿಸ್ತರಣೆಗೆ ಮನವಿ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗೆ ರೈತರು ತಮ್ಮ ಹೆಸರು ನೋಂದಣಿಗೆ ಮೇ 5 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಕೊರೊನಾ, ಲಾಕ್‌ಡೌನ್‌ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರೈತರು ನೋಂದಣಿ ಮಾಡಿಸಲು ಆಗಲಿಲ್ಲ. ಹಾಗಾಗಿ ನೋಂದಣಿಗೆ ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಖರೀದಿ ಕೇಂದ್ರ ಪ್ರಾರಂಭಕ್ಕೆ ಅನುಮತಿ ನೀಡಿದರೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಆಹಾರ ಇಲಾಖೆ ಉಪನಿರ್ದೇಶಕ ಡಿ. ಮಂಟೇಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.