ಹತ್ತು ಸಾವಿರ ಸಸಿ ನೆಡುವ ಗುರಿ: ನಾಗೇಂದ್ರ

Team Udayavani, Jun 6, 2021, 8:54 PM IST

6-14

ಬಳ್ಳಾರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಈ ವರ್ಷ 10 ಸಾವಿರ ಸಸಿಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದ್ದು, ಆದ್ಯತೆ ಮೇರೆಗೆ 5 ಸಾವಿರ ಸಸಿಗಳನ್ನು ನೆಡಲಾಗುತ್ತದೆ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಹೇಳಿದರು.

ವಿಶ್ವ ಪರಿಸರದ ದಿನದ ಪ್ರಯುಕ್ತ ಜಿಲ್ಲಾಡಳಿತ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಆಶ್ರಯದಲ್ಲಿ ನಗರದ ವಾಲ್ಮೀಕಿ ಅಭಿವೃದ್ಧಿ ನಿಗಮದ ಎದುರುಗಡೆಯಿರುವ ಪಾರ್ಕ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ನಂತರ ಮಾತನಾಡಿದರು.

ನಾವು ಇಂದು ನೆಟ್ಟ ಗಿಡ ಮುಂದಿನ ಪೀಳಿಗೆಗೆ ಆಮ್ಲಜನಕ ನೀಡುವ ಕೆಲಸ ಮಾಡುತ್ತದೆ. ಕೊರಾನಾ ಸಮಯದಲ್ಲಿ ಆಕ್ಸಿಜನ್‌ಗಾಗಿ ಪರದಾಡಿದ ಘಟನೆ ನಡೆಯಿತು. ಮುಂದೆ ಇಂಥ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಬೇಕು. ನಗರದ ಎಲ್ಲ ಪಾರ್ಕ್‌ಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲರೂ ಕೈಜೋಡಿಸಿ ಪ್ರತಿ ಮನೆಗಳ ಮುಂದೆ ಗಿಡ ಬೆಳೆಸಿ ಅದು ಮುಂದೆ ಹೆಮ್ಮರವಾಗಿ ಬೆಳೆದು ಎಲ್ಲ ಜನರಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳಿದರು.

ಮನೆಗೆ ಬಂದು ನೋಡುವೆ: ಅರಣ್ಯ ಇಲಾಖೆ ವತಿಯಿಂದ ವಾರ್ಡ್‌ನ ಸಾರ್ವಜನಿಕರಿಗೆ ಶಾಸಕ ನಾಗೇಂದ್ರ ಅವರು ಸಸಿಗಳನ್ನು ವಿತರಿಸಿದರು. ಕೇವಲ ಗಿಡ ನೆಡುವುದು ಒಂದು ದಿನಕ್ಕೆ ಸೀಮಿತವಾಗದೆ ಅದನ್ನು ಬೆಳೆಸಿ, ಕಾಪಾಡಿಕೊಂಡು ಹೋಗಬೇಕು. ಮುಂದೊಂದು ದಿನ ನಾನೇ ಸ್ವತಃ ನಿಮ್ಮ ಮನೆಗಳಿಗೆ ಬಂದು ನೀವು ನೆಟ್ಟ ಗಿಡಗಳನ್ನು ನೋಡುವೆ ಎಂದರು.

ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್‌ ಮಾತನಾಡಿ, ನಗರ ವ್ಯಾಪ್ತಿಯ ಶಾಲೆ-ಕಾಲೇಜು, ಪಾರ್ಕ್‌ ಮತ್ತು ಪಾಲಿಕೆಯ ಖಾಲಿ ಜಾಗದಲ್ಲಿ ಸಸಿಗಳನ್ನು ನೆಡಲಾಗುತ್ತದೆ. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈ ವರ್ಷದಲ್ಲಿ 10 ಸಾವಿರ ಸಸಿಗಳನ್ನು ನೆಡುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಗಿಡಗಳು ಮುಂದಿನ ದಿನಮಾನಗಳಲ್ಲಿ ಹೆಮ್ಮರವಾಗಿ ಬೆಳೆದು ಹೆಚ್ಚಿನ ಆಕ್ಸಿಜನ್‌ ನೀಡುವ ಮೂಲಕ ಮುಂದಿನ ಪೀಳಿಗೆಗೆ ಉಸಿರಾಡಲು ಶುದ್ಧವಾದ ಗಾಳಿ ನೀಡಲಿ ಎಂದರು.

ಪರಿಸರ ಬೆಳೆಸುವುದರಿಂದ ಮುಂದಿನ ದಿನದಲ್ಲಿ ನಗರದಲ್ಲಿ ಸ್ವತ್ಛ ಮತ್ತು ಸುಂದರ ಪರಿಸರ ನಿರ್ಮಾಣವಾಗುತ್ತದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಸೈದುಲು ಅಡಾವತ್‌, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಚಳಕಾಪುರೆ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ವಾರ್ಡ್‌ನ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.