ದೆಹಲಿ ಅನ್ ಲಾಕ್ : ರಾಜಧಾನಿಯತ್ತ ವಾಪಾಸಾಗುತ್ತಿರುವ ವಲಸೆ ಕಾರ್ಮಿಕರು..!


Team Udayavani, Jun 7, 2021, 4:03 PM IST

COVID-19: Migrant workers return to city as Delhi unlock begins

ಪ್ರಾತಿನಿಧಿಕ ಚಿತ್ರ

ನವ  ದೆಹಲಿ : ಕೋವಿಡ್ ಸಂಕಷ್ಟ ದೇಶದಲ್ಲಿ ಎಲ್ಲಾ ವರ್ಗದವರಿಗೂ ತಟ್ಟಿದೆ. ವಲಸೆ ಕಾರ್ಮಿಕರ ಪಾಲಿಗೆ ಈ ಕೋವಿಡ್ ಮಹಾಮಾರಿ ಹಾಗೂ ಲಾಕ್ ಡೌನ್  ಅವರ ಜೀವನೋಪಾಯಕ್ಕೆ ಬಲವಾದ ಪೆಟ್ಟು ನೀಡಿದೆ ಎನ್ನುವುದಲ್ಲಿ ಸಂಶಯವಿಲ್ಲ.

ಕೋವಿಡ್ ಸೋಂಕಿನ ಮೊದಲ ಅಲೆಯಲ್ಲಿ ದೇಶದ ಪ್ರಮುಖ ನಗರಗಳಿಂದ ಹೆದ್ದಾರಿಗಳಲ್ಲಿ ವಲಸೆ ಕಾರ್ಮಿಕರು ತಮ್ಮ ತವರಿಗೆ ಮುಖ ಮಾಡಿದ ಹಾಗೆಯೇ ಕೋವಿಡ್ ಸೋಂಕಿನ ಎರಡನೇ ಅಲೆಯಲ್ಲಿಯೂ ಕೂಡ ಆಗಿತ್ತು. ಆದರೇ, ಈಗ ದೇಶದ ಕೆಲವು ರಾಜ್ಯಗಳಲ್ಲಿ  ಕೋವಿಡ್ ಸೋಂಕಿನ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರಗಳು  ಅನ್ ಲಾಕ್ ನತ್ತ ಮುಖ ಮಾಡುತ್ತಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಅನ್ ಲಾಕ್ ವಿವಿಧ ಹಂತಗಳಲ್ಲಿ ನೆಡೆಯುತ್ತಿದ್ದು, ಇಂದಿನಿಂದಲೇ ತವರಿಗೆ ತೆರಳಿದ್ದ ವಲಸೆ ಕಾರ್ಮಿಕರು ಮತ್ತೆ ದೆಹಲಿಯತ್ತ ಮುಖ ಮಾಡುತ್ತಿರುವ ದೃಶ್ಯಗಳು ಕಂಡು ಬಂದಿವೆ.

ಇದನ್ನೂ ಓದಿ : ಬೆಳಗಾವಿ: ಕಾರಿನಲ್ಲಿದ್ದ 5 ಕೆ.ಜಿ. ಚಿನ್ನ ಎಗರಿಸಿದ ಪ್ರಕರಣದ ಕಿಂಗ್‌ಪಿನ್ ಪೊಲೀಸರ ವಶಕ್ಕೆ

ನಗರದ ವಿವಿಧ ಅಂತರ್ ರಾಜ್ಯ ಬಸ್ ಟರ್ಮಿನಸ್ (ಐ ಎಸ್‌ ಬಿ ಟಿ) ಮತ್ತು ರೈಲ್ವೆ ನಿಲ್ದಾಣಗಳಿಂದ ನೂರಾರು ವಲಸೆ ಕಾರ್ಮಿಕರು ವಾಪಾಸಾಗಿದ್ದು ಕಂಡು ಬಂತು.

ದೆಹಲಿಯಲ್ಲಿ ಅನ್ ಲಾಕ್ ಹಂತಗಳು ಆರಂಭವಾಗುತ್ತಿದ್ದಂತೆ ಉದ್ಯಮ ಕ್ಷೇತ್ರಗಳು, ಹಾಗೂ ಅಸಂಘಟಿತ ಕಾರ್ಮಿಕ ವಲಯಗಳು ನಿಧಾನ ಗತಿಯಲ್ಲಿ ತೆರವು ಕಂಡುಕೊಳ್ಳುತ್ತಿರುವ ಕಾರಣದಿಂದ ರಾಷ್ಟ್ರ ರಾಜಧಾನಿಗೆ ಮತ್ತೆ ವಲಸೆ ಕಾರ್ಮಿಕರು ವಾಪಾಸ್ ಆಗುತ್ತಿದ್ದಾರೆ ಎಂದು ವರದಿಯಾಗಿವೆ.

ದೆಹಲಿಯಲ್ಲಿ ಇಂದಿನಿಂದ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದ್ದು, ಕೋವಿಡ್ ಸೋಂಕಿನ ಎರಡನೇ ಅಲೆಯ ನಿಯಂತ್ರಣ ಮಾಡುವ ಉದ್ದೇಶದಿಂದ ಹೇರಿದ್ದ ಕಠಿಣ ಲಾಕ್ ಡೌನ್ ಇಂದಿನಿಂದ ತೆರವುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ಸೇವೆಗಳು ಸಾರ್ವಜನಿಕರಿಗೆ 50 ಪ್ರತಿಶತದಷ್ಟು ಸಾಮರ್ಥ್ಯದೊಂದಿಗೆ ತೆರೆಯಲ್ಪಟ್ಟವು.

ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದರೊಂದಿಗೆ ಮಾತನಾಡಿದ ದೆಹಲಿಗೆ ವಾಪಾಸ್ಸಾದ ಬಿಹಾರ್ ಮೂಲದ ಅಮೃತ್ ಪಾಲ್, ಕೋವಿಡ್ ಇಳಿಮುಖವಾಗುವ ಲಕ್ಷಣಗಳು ಕಾಣುತ್ತಿದೆ. ಉದ್ಯೋಗವಕಾಶಗಳು ಪುನರ್ ನಿರ್ಮಾಣ ಆಗಬಹುದು ಎಂಬ ಭರವಸೆಯೊಂದಿಗೆ ನಾವು ಹದಿನೈದು ಮಂದಿ ದೆಹಲಿಗೆ ಮರಳಿದ್ದೇವೆ ಎಂದಿದ್ದಾರೆ.

ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜ್ನೋರ್ ನಿವಾಸಿ ಹೃದಯ ಕುಶ್ವಾಹ, “ಕೋವಿಡ್ -19 ಪ್ರಕರಣಗಳು ಕಡಿಮೆಯಾದಂತೆ, ದೆಹಲಿ ಸರ್ಕಾರವು ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕುತ್ತದೆ ಎಂದು ನಾವು ಭಾವಿಸುತ್ತೇವೆ. ನಮ್ಮ ಉದ್ಯೋಗಗಳನ್ನು ಮತ್ತೆ ಮರಳಿ ಪಡೆಯುವ ಭರವಸೆ ಇದೆ. ಎಂದಿದ್ದಾರೆ.

ಪೂರ್ವ ದೆಹಲಿಯ ಖಜುರಿ ಖಾಸ್ ಪ್ರದೇಶದಲ್ಲಿ ಚಹಾ ಅಂಗಡಿಯೊಂದನ್ನು ನಡೆಸುತ್ತಿರುವ ಉತ್ತರಪ್ರದೇಶದ ಉನ್ನಾವೊ ನಿವಾಸಿ ಚೋಟು ಪಾಸ್ವಾನ್, ದೆಹಲಿಯ ಲಾಕ್‌ ಡೌನ್ ತೆರವುಗೊಳ್ಳುತ್ತಿದ್ದಂತೆ ವ್ಯಾಪಾರಗಳು ನಿಧಾನವಾಗಿ ಸಹಜ ಸ್ಥಿತಿಯತ್ತ ಬರುವ ಭರವಸೆ ಇದೆ. ಕೊಂಚ ವಿಳಂಬವಾಗಬಹುದು, ವ್ಯಾಪಾರಗಳು ಮೊದಲಿನಷ್ಟು ಇಲ್ಲದಿರಬಹುದು, ಹಾಗಾಗಿ ನನ್ನ ಕುಟುಂಬವನ್ನು ಹಳ್ಳಿಯಲ್ಲೆ ಇರುವಂತೆ ಮಾಡಿ, ನಾನು ಮಾತ್ರ ವಾಪಾಸ್ಸಾಗಿದ್ದೇವೆ. ಹೊಟ್ಟೆಪಾಡು. ಉಳ್ಳವರಿಗೆ ಬದುಕು ಎಂದು ಕಷ್ಟ ಆಗಲಾರದು, ಬಡವರು ನಾವು ದುಡಿದರೇ ಮಾತ್ರ ಹೊಟ್ಟೆಗೆ ಹಿಟ್ಟು ಎಂದು ಸಂಕಷ್ಟವನ್ನು ತೋಡಿಕೊಂಡಿದ್ದಾರೆ.

ಕೋವಿಡ್ ಸೋಂಕಿನ ಎರಡನೇ ಅಲೆಯಲ್ಲಿ ಸೋಂಕಿನ ಹಠಾತ್ ಏರಿಕೆಯ ಕಾರಣದಿಂದಾಗಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಏಪ್ರಿಲ್ ಮೂರನೇ ವಾರದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರು. ಲಾಕ್ ಡೌನ್ ಆಗುತ್ತಿದ್ದಂತೆ ವಲಸೆ ಕಾರ್ಮಿಕರು ತಮ್ಮೂರಿನತ್ತ ಮರಳಿದರು. ಈಗ ಸುಮಾರು ಒಂದುವರೆ ತಿಂಗಳುಗಳ ನಂತರ ದೆಹಲಿ ಸರ್ಕಾರ ಸೋಂಕಿನ ಇಳಿಮುಖ ಕಂಡದ್ದರಿಂದ ಹಂತಹಂತವಾಗಿ ಲಾಕ್ ಡೌನ್ ತೆರವುಗೊಳಿಸುತ್ತಿದೆ.  ವಲಸೆ ಕಾರ್ಮಿಕರು ಮತ್ತೆ ದೆಹಲಿಯತ್ತ ಧಾವಿಸುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.

ಒಂದುವರೆ ತಿಂಗಳುಗಳಿಂದ ನಿರ್ಜನವಾಗಿದ್ದ ರಾಜಧಾನಿಯ ಹೆದ್ದಾರಿ ರಸ್ತೆಗಳು ಮತ್ತು ಮಾರುಕಟ್ಟೆಗಳು ಮತ್ತೆ ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಚೀನಾ:ಹತಾಶೆಯಿಂದ ಕುಪಿತಗೊಂಡ ನಿರುದ್ಯೋಗಿ ಯುವಕನಿಂದ ಚೂರಿಯಿಂದ ದಾಳಿ, ಆರು ಮಂದಿ ಸಾವು

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.