ಬಿಸ್ವಾಸ್ ಬರುವ ಮುನ್ನವೇ ಬಿಮ್ಸ್ನೊಳಗೆ ಅಧಿಕಾರಿಗಳ ಭೇಟಿ
Team Udayavani, Jun 7, 2021, 8:02 PM IST
ಬೆಳಗಾವಿ: ಅವ್ಯವಸ್ಥೆಯಿಂದ ಕೂಡಿರುವ ಇಲ್ಲಿಯ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಜಿಲ್ಲಾಸ್ಪತ್ರೆ)ಗೇ ಶಸ್ತ್ರಚಿಕಿತ್ಸೆ ಮಾಡಲು ಆಡಳಿತಾಧಿಕಾರಿಯಾಗಿ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ನೇಮಕಗೊಂಡಿದ್ದರಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ರವಿವಾರ ಆಸ್ಪತ್ರೆಯೊಳಗೆ ರೌಂಡ್ಸ್ ಹಾಕಿ ಪರಿಶೀಲನೆ ನಡೆಸಿದರು.
ಬಿಮ್ಸ್ನಲ್ಲಿ ಅವ್ಯವಸ್ಥೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಬಿಮ್ಸ್ ಸುಧಾರಣೆ ಬಗ್ಗೆ ಕಾಳಜಿ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕೆ ಆಡಳಿತಾ ಧಿಕಾರಿಯನ್ನಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿರುವ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಧಿಕಾರ ವಹಿಸಿಕೊಂಡ ಬಳಿಕ ಬಿಸ್ವಾಸ್ ಸೋಮವಾರ ಜೂ.7ರಂದು ಆಸ್ಪತ್ರೆಗೆ ಬಂದು ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರವಿವಾರ ಬಿಮ್ಸ್ನ ಕೋವಿಡ್ ವಾರ್ಡ್ ಸೇರಿ ಎಲ್ಲ ಕಡೆಗೂ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿಕೊಂಡು ಸುತ್ತು ಹಾಕಿದರು. ಕೋವಿಡ್ ವಾರ್ಡ್ನಲ್ಲಿ ಸೋಂಕಿತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ವಾರ್ಡ್ನಲ್ಲಿರುವ ಸೌಲಭ್ಯಗಳ ಬಗ್ಗೆ ಪರಿಶೀಲಿನೆ ನಡೆಸಿದರು.
ಭೀಮ್ಸ್ ಪ್ರಭಾರಿ ನಿರ್ದೇಶಕ ಡಾ| ಉಮೇಶ ಕುಲಕರ್ಣಿ, ಆಡಳಿತಾಧಿಕಾರಿ ಸಯೀದಾ ಆಫ್ರೀನ್ ಬಳ್ಳಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುಧಾಕರ, ವೈದ್ಯಕೀಯ ಅಧೀಕ್ಷಕ ಡಾ. ದಂಡಗಿ ಸೇರಿದಂತೆ ಬಿಮ್ಸ್ನ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.