ಕೋವಿಡ್‌ ಸೆಂಟರ್‌ ನಲ್ಲಿ ಎಸಿ-ತಹಶೀಲ್ದಾರ್‌ ಗಾನಸುಧೆ!


Team Udayavani, Jun 7, 2021, 10:07 PM IST

7-15

ಚಿಕ್ಕಮಗಳೂರು: ಕೋವಿಡ್‌ ಸೆಂಟರ್‌ನಲ್ಲಿರುವ ಸೋಂಕಿತರಲ್ಲಿ ಆತ್ಮಸ್ಥೈರ್ಯ ಮೂಡಿಸುವ ನಿಟ್ಟಿನಲ್ಲಿ ನಗರದ ಬೇಲೂರು ರಸ್ತೆಯಲ್ಲಿರುವ ವಸತಿನಿಲಯದಲ್ಲಿ ಜಿಲ್ಲಾಡಳಿತ ತೆರೆಯಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಗಾನಸುಧೆ ನಡೆಸುವ ಮೂಲಕ ಸೋಂಕಿತರಿಗೆ ನಿಮ್ಮ ಜೊತೆ ನಾವಿದ್ದೇವೆ ಎಂದು ವಿಶ್ವಾಸ ತುಂಬುವ ಕೆಲಸವನ್ನು ಹಿರಿಯ ಅಧಿಕಾರಿಗಳು ಮಾಡಿದರು.

ಉಪ ವಿಭಾಗಾಧಿ ಕಾರಿ ಡಾ| ಎಚ್‌.ಎಲ್‌. ನಾಗರಾಜ್‌, ತಹಶೀಲ್ದಾರ್‌ ಡಾ| ಕೆ.ಜೆ. ಕಾಂತರಾಜ್‌, ಕಾರಾಗೃಹ ಅಧಿಧೀಕ್ಷಕ ರಾಕೇಶ್‌ ಕಾಂಬಳೆ, ಪತ್ರಕರ್ತ ಪಿ. ರಾಜೇಶ್‌ ನೇತೃತ್ವದಲ್ಲಿ ಶನಿವಾರ ಸಂಜೆ 7 ಗಂಟೆಗೆ ಆರಂಭಗೊಂಡ ಗಾನಸುಧೆಯನ್ನು ರಾತ್ರಿ 10 ಗಂಟೆಯವರೆಗೂ ನಡೆಸಿಕೊಟ್ಟರು. ಉಪ ವಿಭಾಗಾಧಿಕಾರಿ ಡಾ| ಎಚ್‌.ಎಲ್‌. ನಾಗರಾಜ್‌, ತಹಶೀಲ್ದಾರ್‌ ಡಾ| ಕೆ.ಜೆ. ಕಾಂತರಾಜ್‌, ಕಾರಾಗೃಹ ಅ ಧೀಕ್ಷಕ ರಾಕೇಶ್‌ ಕಾಂಬಳೆ ಹಾಗೂ ಪತ್ರಕರ್ತ ಪಿ. ರಾಜೇಶ್‌ ಸುಮಧುರ ಹಳೆಯ ಕನ್ನಡ ಗೀತೆಗಳನ್ನು ಭಕ್ತಿಗೀತೆ, ಭಾವಗೀತೆಗಳನ್ನು ಹಾಡುವ ಮೂಲಕ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿರುವ ಸೋಂಕಿತರನ್ನು ರಂಜಿಸಿದರು. ಕನ್ನಡದ ಸುಪ್ರಸಿದ್ಧ ಗೀತೆ “ಕುಲದಲ್ಲಿ ಕೀಳಾವುದೋ ಹುಚ್ಚಪ್ಪಾ’ ಹಾಡಿಗೆ ಅ ಧಿಕಾರಿಗಳು ಹೆಜ್ಜೆ ಹಾಕಿದರು.

ಅಧಿಕಾರಿಗಳು ಹಾಡಿಗೆ ಹೆಜ್ಜೆ ಹಾಕುತ್ತಿದ್ದಂತೆ ಸೋಂಕಿತರು ತಾವಿರುವ ಜಾಗದಲ್ಲೇ ಕುಣಿದು ಸಂಭ್ರಮಪಟ್ಟರೆ, ಮತ್ತೇ ಕೆಲವು ಸೋಂಕಿತರು ಹಾಡು ಹೇಳುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕೋವಿಡ್‌ ಸೋಂಕಿಗೆ ಒಳಗಾಗಿ ಕೋವಿಡ್‌ ಕೇರ್‌ಸೆಂಟರ್‌ನಲ್ಲಿ ದಿನದೂಡುತ್ತಿರುವ ಅವರಲ್ಲಿ ಮಾನಸಿಕವಾಗಿ ಮನೋಸ್ಥೈರ್ಯವನ್ನು ತುಂಬುವ ನಿಟ್ಟಿನಲ್ಲಿ ಅ ಧಿಕಾರಿಗಳು ಕೈಗೊಂಡ ಈ ಕ್ರಮಕ್ಕೆ ಜಿಲ್ಲೆಯಲ್ಲಿ ಮೆಚ್ಚುಗೆಯೂ ವ್ಯಕ್ತವಾಗಿದೆ.

ಉಪ ವಿಭಾಗಾ ಕಾರಿ ಡಾ|ಎ ಚ್‌.ಎಲ್‌.ನಾಗರಾಜ್‌ ಮಾತನಾಡಿ, ಜಿಲ್ಲೆ ಯ ಕೋವಿಡ್‌ ಕೇರ್‌ ಸೆಂಟರ್‌ ಗಳಲ್ಲಿ ಸೋಂಕಿತರನ್ನು ಇರಿಸಲಾಗಿದೆ. ಅವರಿಗೆ 10 ದಿನಗಳ ಕಾಲ ಅವರನ್ನು ಕೇಂದ್ರದಲ್ಲಿಟ್ಟು ಆರೈಕೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಸೋಂಕಿತರಿಗೆ ಮಾನಸಿಕವಾಗಿ ಖನ್ನತೆ ಕಾಡುತ್ತಿರಬಹುದು, ಬೇಸರ ಉಂಟಾಗಿರಬಹುದು. ಗೃಹಬಂಧನದಲ್ಲಿ ಇದ್ದೇವೆ ಎಂಬ ಭಾವನೆ ಇರಬಹುದು. ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತು ಅವರಲ್ಲಿ ಚೈತನ್ಯ ಮೂಡಿಸಲು ಗಾನಸುಧೆ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದರು.

ಡಾ| ಕೆ.ಜೆ. ಕಾಂತರಾಜ್‌ ಮಾತನಾಡಿ, ಕೋವಿಡ್‌ ಕೇರ್‌ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಮನರಂಜನೆ ನೀಡುವ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಕಾರ್ಯಕ್ರಮದ ಮೂಲಕ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವರ ಜೊತೆಗಿರುತ್ತೇವೆ ಎಂಬ ಸಂದೇಶವನ್ನು ಸಾರಿದ್ದೇವೆ ಎಂದು ಹೇಳಿದರು. ಕಾರಾಗೃಹ ಅಧಿಧೀಕ್ಷಕ ರಾಕೇಶ್‌ ಕಾಂಬಳೆ ಮಾತನಾಡಿ, ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಅವರಲ್ಲಿ ಧೈರ್ಯ ತುಂಬುವಂತಹ ಕೆಲಸವನ್ನು ಹಿರಿಯ ಅಧಿ ಕಾರಿಗಳ ಜೊತೆ ಸೇರಿ ಮಾಡಿದ್ದೇವೆ.

ಸೋಂಕಿತರು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿ, ವೈದ್ಯರ ಸಲಹೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರೊಂದಿಗೆ ಶೀಘ್ರವೇ ಗುಣಮುಖರಾಗಲಿ ಎಂದು ಬಯಸುತ್ತೇನೆ ಎಂದರು. ಪತ್ರಕರ್ತ ಪಿ. ರಾಜೇಶ್‌ ಮಾತನಾಡಿ, ಕೋವಿಡ್‌ ನಿಂದ ಅನೇಕರು ಕಷ್ಟಕ್ಕೆ ಗುರಿಯಾಗಿದ್ದಾರೆ. ಸೋಂಕಿತರನ್ನು ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

10ರಿಂದ 15 ದಿನಗಳ ಕಾಲ ಹೊರ ಪ್ರಪಂಚದಿಂದ ದೂರ ಇರಬೇಕಾದ ಪರಿಸ್ಥಿತಿ ಇದೆ. ಅವರನ್ನು ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಇದಕ್ಕೆ ಹಿರಿಯ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿ ಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.