ಕೋವಿಡ್ ಅವಧಿಯಲ್ಲಿ ಲಕ್ಷಾಂತರ ಬುಡಕಟ್ಟು ಮಕ್ಕಳ ಆರೋಗ್ಯ ಸಮಸ್ಯೆ


Team Udayavani, Jun 8, 2021, 10:04 AM IST

ಕೋವಿಡ್ ಅವಧಿಯಲ್ಲಿ ಲಕ್ಷಾಂತರ ಬುಡಕಟ್ಟು ಮಕ್ಕಳ ಆರೋಗ್ಯ ಸಮಸ್ಯೆ

ಸಾಂದರ್ಭಿಕ ಚಿತ್ರ

ಮುಂಬಯಿ: ರಾಜ್ಯದ ಸಂಪೂರ್ಣ ಆರೋಗ್ಯ ವ್ಯವಸ್ಥೆ ಕೋವಿಡ್ ರೋಗಿಗಳ ಚಿಕಿತ್ಸೆಯಲ್ಲಿ  ತೊಡಗಿರುವುದರಿಂದ ಇಆರ್‌ವಿಗಳಿಂದ ನಿರ್ಲಕ್ಷಿಸಲ್ಪಟ್ಟ ಬುಡಕಟ್ಟು ಮಕ್ಕಳ ಆರೋಗ್ಯದ ವಿಷಯವು  ಈಗ ಚಿಂತೆಯ ವಿಷಯವಾಗಿದೆ.ಥಾಣೆ, ಪುಣೆ, ಜಲ್ಗಾಂವ್‌ ಮತ್ತು ಗೊಂಡಿಯಾ ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಮಕ್ಕಳ ಸಾವಿಗೆ ಸಾಕ್ಷಿಯಾಗಿದ್ದು, ಮಳೆಗಾಲದಲ್ಲಿ 16 ಬುಡಕಟ್ಟು ಜಿಲ್ಲೆಗಳಲ್ಲಿನ ಮಕ್ಕಳ ಆರೋಗ್ಯವು ಹೆಚ್ಚು ಗಂಭೀರವಾಗಲಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಹೇಳಿದ್ದಾರೆ.

ಬುಡಕಟ್ಟು ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 89,151 ಮಕ್ಕಳಿದ್ದು, 2020-21ರಲ್ಲಿ 6,718 ಮಕ್ಕಳು ಸಾವನ್ನಪ್ಪಿರುವುದನ್ನು ಲೆಕ್ಕಪರಿ ಶೋಧನೆಯಿಂದ ಪತ್ತೆ ಹಚ್ಚಲಾಗಿದೆ. ಅದೇ ಅವಧಿ ಯಲ್ಲಿ 1,715 ಶಿಶುಗಳು ಸಾವನ್ನಪ್ಪಿವೆ.

ಗರ್ಭಿಣಿಯರಿಗೆ ಮಾತೃತ್ವ ಅನುದಾನ ಯೋಜನೆಯಿಂದ 400 ರೂ. ನಗದು ಮತ್ತು ಔಷಧಕ್ಕಾಗಿ 400 ರೂ. ಒಟ್ಟು 800 ರೂ.ಗಳನ್ನು ಸರಕಾರದ ವತಿಯಿಂದ ನೀಡಲಾಗುತ್ತದೆ. ಆದರೆ 2021ರ ಮಾರ್ಚ್‌ ಕೊನೆಯಲ್ಲಿ ಅರ್ಹ 95,848 ಗರ್ಭಿಣಿಯರಲ್ಲಿ 54,104 ಗರ್ಭಿಣಿಯರು ಮಾತ್ರ ಈ ಯೋಜನೆಯ ಲಾಭ ಪಡೆದಿದ್ದಾರೆ. ಆರೋಗ್ಯ ವ್ಯವಸ್ಥೆಯು ಕೋವಿಡ್ ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿರುವುದರಿಂದ ಮಕ್ಕಳಿಗೂ ಸರಿಯಾಗಿ ಲಸಿಕೆ ನೀಡಲು ಸಾಧ್ಯವಾಗಲಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಒಪ್ಪಿಕೊಂಡಿದ್ದಾರೆ.

97,000 ಅಂಗನವಾಡಿ ಕೇಂದ್ರಗಳಿಗೆ ಬೀಗ ಟಾಟಾ ಸಮಾಜ ಸಂಸ್ಥೆಯು ಬುಡಕಟ್ಟು ಪ್ರದೇಶಗಳಲ್ಲಿನ ಮಕ್ಕಳ ಆರೋಗ್ಯದ ಬಗ್ಗೆ ಆರೋಗ್ಯ ಇಲಾಖೆಗೆ ಇತ್ತೀಚೆಗೆ ವರದಿ ಸಲ್ಲಿಸಿದ್ದು, ಮೇಲ್ಘಾಟಿನಲ್ಲಿ ಅಪೌಷ್ಟಿಕತೆಯಿಂದ ಮಕ್ಕಳ ತೂಕವು ಕಡಿಮೆ ಇರುವುದು ಪ್ರಮುಖ ಸಮಸ್ಯೆಯಾಗಿದೆ ಎಂದು ಹೇಳಿದೆ. ರಾಜ್ಯದಲ್ಲಿ  ಸುಮಾರು 97,000 ಅಂಗನವಾಡಿ ಕೇಂದ್ರಗಳಿದ್ದು, ಕೊರೊನಾದಿಂದಾಗಿ ಅವುಗಳನ್ನು ಮುಚ್ಚಲಾಗಿದೆ. ಇದರಿಂದಾಗಿ ನವಜಾತ ಶಿಶುಗಳಿಂದ 6 ವರ್ಷದೊಳಗಿನ ಲಕ್ಷಾಂತರ ಮಕ್ಕಳ ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಈ ಅಂಗನವಾಡಿಗಳಿಂದ ಸುಮಾರು 73 ಲಕ್ಷ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ಮತ್ತು ಆರೋಗ್ಯ ತಪಾಸಣೆಯ ವಿವಿಧ ಚಟುವಟಿಕೆಗಳನ್ನು ಕಾರ್ಯಕರ್ತೆಯರು ಒದಗಿಸುವುದು ನಿಲ್ಲಿಸಿದ್ದರಿಂದ ಕಡಿಮೆ ತೂಕ, ಅಪೌಷ್ಟಿಕತೆ ಮತ್ತು ತೀವ್ರ ಅಪೌಷ್ಟಿಕತೆಯ ಮಕ್ಕಳ ಸಂಖ್ಯೆಯು ಹೆಚ್ಚಾಗುವುದಕ್ಕೆ ಪ್ರಮುಖ ಕಾರಣವಾಗಿದೆ.

ಮುಂಬಯಿ ಹೈಕೋರ್ಟ್‌ ಆದೇಶದಂತೆ 16 ಬುಡಕಟ್ಟು ಜಿಲ್ಲೆಗಳಲ್ಲಿನ ಮಕ್ಕಳ ಆರೋಗ್ಯ, ಅಪೌಷ್ಟಿಕತೆ, ಶಿಶು ಮರಣ ಮತ್ತು ಜನನದ ವೇಳೆ ಕಡಿಮೆ ತೂಕ ಪರಿಶೀಲಿಸಲು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕೋರ್‌ ಸಮಿತಿಯನ್ನು ನೇಮಿಸಲಾಗಿದೆ. ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಬುಡಕಟ್ಟು ಪ್ರದೇಶಗಳಲ್ಲಿ ಈ ಸಮಸ್ಯೆಗಳನ್ನು ಪರಿಶೀಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಸಮಿತಿಯು ಮುಖ್ಯ ಕಾರ್ಯದರ್ಶಿ ಸೀತಾರಾಮ್‌ ಕುಂಟೆ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಭೆ ಸೇರಿತ್ತು. ದುರದೃಷ್ಟವಶಾತ್‌ ಕೊರೊನಾ ಮತ್ತು ಮಳೆಯ ಹಿನ್ನೆಲೆಯಲ್ಲಿ ಸಭೆಯಿಂದ ಯಾವುದೇ ನಿರ್ಧಾರ ಹೊರಬಂದಿಲ್ಲ ಎಂದು ಡಾ| ಅಭಯ್‌ ತಿಳಿಸಿದ್ದಾರೆ.

ಸಭೆಯಲ್ಲಿ ಯಾವುದೇ ದೃಢ ನಿರ್ಧಾರ ಇಲ್ಲ ಮಕ್ಕಳ ಮರಣ, ಅಪೌಷ್ಟಿಕತೆ, ಜನಿಸುವಾಗ ಕಡಿಮೆ ತೂಕ ಬಗ್ಗೆ ಸಭೆಯಲ್ಲಿ  ಮಹತ್ವದ ಚರ್ಚೆಯಾಗಬೇಕಿತ್ತು.  ಸಮಸ್ಯೆಗಳು ಮತ್ತು ಕನಿಷ್ಠ ಒಂದು ವಾರದ ಮೊದಲು ಇಲಾಖೆಯು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯುವ ನಿರೀಕ್ಷೆಯಿದ್ದರೂ ಕೊನೆಯ ಕ್ಷಣದಲ್ಲಿ ಸಮಸ್ಯೆಗಳ ವಿವರಗಳ ಬಗ್ಗೆ ಮಾತ್ರ ತಿಳಿಸಲಾಯಿತು ಎಂದು ಅಭಯ್‌ ಹೇಳಿದ್ದಾರೆ. ಟಾಟಾ ಸಮಾಜದ ವರದಿಯನ್ನು ಕೊನೆಯ ಗಳಿಗೆಯಲ್ಲಿ ನೀಡಲಾಯಿತು. ಅಲ್ಲದೆ 16 ಬುಡಕಟ್ಟು ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಮತ್ತು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ನಿಖರವಾಗಿ ನೀಡಲಾಗಿಲ್ಲ. ಕಳೆದ ಒಂದು ವರ್ಷದಿಂದ ಅಂಗನವಾಡಿಗಳನ್ನು ಮುಚ್ಚಿರುವಾಗ ಮಳೆಗಾಲದಲ್ಲಿ 6 ವರ್ಷಗಳೊಳಗಿನ ವಯಸ್ಸಿನ ಮಕ್ಕಳ ಆರೋಗ್ಯ ಸಮಸ್ಯೆಗಳನ್ನು ಹೇಗೆ ಎದುರಿಸುವುದು, ಮಳೆಯಿಂದಾಗಿ ಗಡಿcರೋಲಿಯ ಅನೇಕ ಹಳ್ಳಿಗಳು ಸಂಪರ್ಕ ಕಳೆದುಕೊಂಡಿರುವ ಬಗ್ಗೆ ಯಾವುದೇ ಚರ್ಚೆ ಇಲ್ಲ, ಅದರ ಬಗ್ಗೆ ಏನು ಮಾಡಬೇಕೆಂಬ ಕಾರ್ಯತಂತ್ರ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ

ಬುಡಕಟ್ಟು ಮಕ್ಕಳಿಗೆ ಹಾಲಿನ ಪುಡಿ ತಾಲೂಕು ಮಟ್ಟವನ್ನು ತಲುಪುತ್ತದೆ. ಆದರೆ ಅದನ್ನು ಪಡೆಯುವಲ್ಲಿ ಹಲವು ಸಮಸ್ಯೆಗಳಿವೆ. ಇದಕ್ಕಾಗಿ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಯನ್ನು ನೇಮಿಸಲು ನಿರ್ಧರಿಸಲಾಗಿದ್ದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾಮಾಜಿಕ ಸಂಸ್ಥೆಗಳ ಸಮನ್ವಯ ಸಮಿತಿಯನ್ನು ರಚಿಸಿದರೆ ಕೆಲವು ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ಅಭಯ್‌ ಹೇಳಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ಬುಡಕಟ್ಟು ಇಲಾಖೆ, ಆರೋಗ್ಯ ಇಲಾಖೆ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ನಡುವಿನ ಸಮನ್ವಯದ ಕೊರತೆಯು ಮಕ್ಕಳ ಆರೋಗ್ಯ ಮತ್ತು ಗರ್ಭಿಣಿಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಮನೆಮನೆಗೆ ಹೋಗಿ ಮಕ್ಕಳ ತಪಾಸಣೆ ಸಮಸ್ಯೆ :

ರಾಜ್ಯದ 16 ಬುಡಕಟ್ಟು ಜಿಲ್ಲೆಗಳಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 89,151 ಮಕ್ಕಳಿದ್ದು, ಆರೋಗ್ಯ ಇಲಾಖೆಯಿಂದ ಸರಿಯಾಗಿ ಪರೀಕ್ಷೆಗೆ ಒಳಗಾಗುತ್ತಿಲ್ಲ ಎಂದು ಸಮಗ್ರ ಮಕ್ಕಳ ಅಭಿವೃದ್ಧಿ ಆಯುಕ್ತರು ಪತ್ರ ಬರೆದಿದ್ದಾರೆ. ಜುಲೈಯಿಂದ ಸೆಪ್ಟಂಬರ್‌ವರೆಗೆ ಈ ಮಕ್ಕಳ ಆಹಾರಕ್ಕಾಗಿ 14.44 ಕೋಟಿ ರೂ.ಗಳಷ್ಟು ವೆಚ್ಚ ಆಗಲಿದ್ದು, ಸಮಗ್ರ ಮಕ್ಕಳ ಅಭಿವೃದ್ಧಿ ಇಲಾಖೆ ಇತ್ತೀಚೆಗೆ ಇದಕ್ಕೆ ಅನುಮತಿ ಕೋರಿದೆ. ಕೊರೊನಾದಿಂದ ಹೆಚ್ಚಿನ ಕಡೆಗಳಲ್ಲಿ ಹೆತ್ತವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಸಿದ್ಧರಿಲ್ಲ. ಆದರೆ ಅಂಗನವಾಡಿ ಕಾರ್ಯಕರ್ತೆಯರು ದಿನಕ್ಕೆ ಎರಡು ಗಂಟೆಯಾದರೂ ಅಂಗನವಾಡಿಗಳ ಬಾಗಿಲು ತೆರೆಯಬೇಕೆಂಬುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗ ಹೇಳಿದೆ. ಮಳೆಗಾಲ ಮತ್ತು ಕೊರೊನಾ ಅವಧಿಯಲ್ಲಿ ಮನೆಮನೆಗೆ ಹೋಗಿ ಕೋವಿಡ್‌ ತಪಾಸಣೆ ನಡೆಸುವುದು ಈ ಕಾರ್ಯಕರ್ತೆಯರಿಗೆ ದೊಡ್ಡ ಸಮಸ್ಯೆಯಾಗಿದೆ ಎಂದು ರಾಜ್ಯ ಅಂಗನವಾಡಿ ಕಾರ್ಮಿಕರ ಸಮಿತಿ ಅಧ್ಯಕ್ಷ ಎಂ. ಎ. ಪಾಟೀಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.