ಜಾರಕಿಹೊಳಿ ಕೇಸ್ ಗೆ ಹೊಸ ತಿರುವು: ಸರ್ಕಾರ, ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
Team Udayavani, Jun 8, 2021, 2:02 PM IST
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್.ಐ.ಟಿ) ದ ವಿರುದ್ಧವೇ ಸಿಡಿಯಲ್ಲಿದ್ದ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.
ಎಸ್.ಐ.ಟಿ ತನಿಖೆ ಸರಿಯಾಗಿ ನಡೆದಿಲ್ಲ. ಆದ್ದರಿಂದ ಎಸ್.ಐ.ಟಿ ರಚನೆ ಮಾಡಿರುವುದನ್ನು ಮತ್ತು ಅದು ಇದುವರೆಗೆ ನಡೆಸಿದ ತನಿಖೆಯನ್ನು ರದ್ದುಪಡಿಸಿ, ಹೊಸ ತನಿಖಾ ತಂಡ ರಚಿಸುವಂತೆ ಅರ್ಜಿಯಲ್ಲಿ ಯುವತಿ ಮನವಿ ಮಾಡಿದ್ದಾಳೆ.
ಈ ಬಗ್ಗೆ ಹೈಕೋರ್ಟ್, ಸರ್ಕಾರ ಮತ್ತು ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ.
ಇದನ್ನೂ ಓದಿ:ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಅಂತಿಮ ತೀರ್ಪು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ
ರಮೇಶ್ ಜಾರಕಿಹೊಳಿ ಮತ್ತು ಯುವತಿಯಿದ್ದ ಸಿಡಿ ಬಹಿರಂಗವಾದ ಬಳಿಕ ಹಲವು ಬೆಳವಣಿಗೆಗಳು ನಡೆದಿದೆ. ಇತ್ತೀಚೆಗೆ ರಮೇಶ್ ಜಾರಕಿಹೊಳಿಯವರು ಆ ಸಿಡಿಯಲ್ಲಿ ತಾನೇ ಇದ್ದೆ. ಸಮ್ಮತಿಯ ಲೈಂಗಿಕ ಕ್ರಿಯೆಯಲ್ಲಿ ನಾವು ಭಾಗಿಯಾಗಿದ್ದೆವು ಎಂದು ಹೇಳಿದ್ದರು. ಇದೀಗ ಯುವತಿಯ ಈ ನಡೆ ಮತ್ತೆ ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.