ಬಿಹಾರಿನಲ್ಲಿ ಲಸಿಕೆ ಪಡೆಯಲು ಹಿಂದೇಟು:ಓವೈಸಿ ಫೋಟೊ ಮೊರೆ ಹೋದ ಅಧಿಕಾರಿಗಳು
Team Udayavani, Jun 9, 2021, 2:15 PM IST
ಬಿಹಾರ್ : ಕೋವಿಡ್-19 ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ಮುಸ್ಲಿಂ ಜನರನ್ನು ಪ್ರೇರೆಪಿಸಲು ಎಐಎಮ್ಐಎಮ್ ಮುಖ್ಯಸ್ಥ ಹಾಗೂ ಸಂಸದ ಅಸಾವುದ್ದೀನ್ ಓವೈಸಿ ಹೆಸರನ್ನು ಬಳಲಾಗುತ್ತಿದೆ.
ಮುಸ್ಲಿಂ ಪ್ರಾಬಲ್ಯ ಇರುವ ಬಿಹಾರಿನ ಸೀಮಾಂಚಲ್ ಪ್ರದೇಶದ ವ್ಯಾಪ್ತಿಗೆ ಒಳಪಡುವ ಆರಾರಿಯಾ, ಪುರ್ನಿಯಾ, ಕತಿಹಾರ್ ಹಾಗೂ ಕಿಶಗಂಜ್ ನಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆದರೆ, ಕೆಲವೊಂದು ವದಂತಿಗಳಿಗೆ ಕಿವಿಗೊಟ್ಟು ಅಲ್ಲಿಯ ಜನರು ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಹೀಗಾಗಿ ಅವರನ್ನು ಲಸಿಕೆ ಪಡೆಯಲು ಪ್ರೇರೆಪಿಸುವ ಸಲುವಾಗಿ ಸಂಸದ ಓವೈಸಿ ಲಸಿಕೆ ಪಡೆಯುತ್ತಿರುವ ಭಾವ ಚಿತ್ರವನ್ನು ಬಳಸಿಕೊಳ್ಳಲಾಗುತ್ತಿದೆ. ಓವೈಸಿ ಅವರು ಲಸಿಕೆ ಪಡೆದಿದ್ದಾರೆ ನೀವೂ ಕೂಡ ತೆಗೆದುಕೊಳ್ಳಿ ಎಂದು ಅಧಿಕಾರಿಗಳು ಜನರಿಗೆ ತಿಳಿ ಹೇಳುವ ಕಾರ್ಯ ಮಾಡುತ್ತಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೀಮಾಂಚಲ್ ಪ್ರದೇಶದಿಂದ AIMIM ಪಕ್ಷದ 5 ಶಾಸಕರು ಆಯ್ಕೆಯಾಗಿದ್ದಾರೆ. ಓವೈಸಿ ಅವರು ಹಲವು ಬಾರಿ ಇಲ್ಲಿಗೆ ಭೇಟಿ ನೀಡಿದ್ದಾರೆ. ಸದ್ಯ ಲಸಿಕಾ ಅಭಿಯಾನ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟರ್ ಅವರು ಅಲ್ಲಿಯ ಎಂಎಲ್ಎಗಳನ್ನು ಭೇಟಿ ಮಾಡಿ, ಅಭಿಯಾನ ಯಶಸ್ವಿಯಾಗಿಸಲು ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ. ಈ ಹಿನ್ನೆಲೆ ಅಸಾವುದ್ದೀನ್ ಭಾವಚಿತ್ರವನ್ನಿಟ್ಟುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ.
ಇನ್ನು ಸೀಮಾಂಚಲ್ ಪ್ರದೇಶದಲ್ಲಿ ಹೆಚ್ಚಾಗಿ ಮುಸ್ಲಿಂರೆ ವಾಸಿಸುತ್ತಿದ್ದಾರೆ. ಕೋವಿಡ್ ಮಹಾಮಾರಿ ಹೊಡೆದೊಡಿಸುವ ನಿಟ್ಟಿನಲ್ಲಿ ಲಸಿಕೆ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ, ಇಲ್ಲಿಯ ಜನರು ಮಾತ್ರ ಇದುವರೆಗೆ ಲಸಿಕೆ ಪಡೆಯಲು ಉತ್ಸುಕತೆ ತೋರಿಸುತ್ತಿಲ್ಲ. ಅವರಲ್ಲಿರುವ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಓವೈಸಿಯ ಫೋಟೊ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.