ರಾಜ್ಯಕ್ಕೆ ಇಂದು 15,520 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ :ಕೇಂದ್ರ ಸಚಿವ ಸದಾನಂದ ಗೌಡ
Team Udayavani, Jun 9, 2021, 9:44 PM IST
ನವದೆಹಲಿ : ಎರಡು ದಿನಗಳ ಮುಂಚೆ ರಾಜ್ಯಕ್ಕೆ 9750 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿದ್ದ ಕೇಂದ್ರವು ಇಂದು 15,520 ವಯಲ್ಸ್ ಒದಗಿಸಿದೆ. ಇದರೊಂದಿಗೆ ರಾಜ್ಯಕ್ಕೆ ಇದುವರೆಗೆ 40,470 ವಯಲ್ಸ್ ಎಂಫೊಟೆರಿಸಿನ್-ಬಿ ಒದಗಿಸಿದಂತಾಗಿದೆ, ಕಪ್ಪುಶಿಲೀಂದ್ರ ರೋಗದ ಚಿಕಿತ್ಸೆಗೆ ಈ ಔಷಧವನ್ನು ಬಳಸಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದರು.
ಜೂನ್ ತಿಂಗಳು ಆರಂಭದಿಂದ ಇಂದಿನವರೆಗೆ ಕೇಂದ್ರವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 3.21 ಲಕ್ಷ ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ ಮಾಡಿದೆ. ಆಮದು ಹೆಚ್ಚಿಸಲಾಗುತ್ತಿದೆ. ಸ್ವದೇಶಿಯವಾಗಿಯೂ ಈ ಔಷಧದ ಉತ್ಪಾದನೆ ಹೆಚ್ಚಾಗುತ್ತಿದೆ. ಇದರ ಲಭ್ಯತೆ ದೊರೆತಂತೆಲ್ಲಾ ರಾಜ್ಯಗಳಿಗೆ ಹಂಚಿಕೆ ಮಾಡಲಾಗುವುದು. ಇನ್ನೊಂದು ವಾರದಲ್ಲಿ ಇದರ ಬೇಡಿಕೆ ಮತ್ತು ಪೂರೈಕೆ ಮಧ್ಯೆ ಸಮತೋಲನ ಉಂಟಾಗುವ ಭರವಸೆ ಇದೆ ಎಂದರು.
ರಾಮಗುಂಡಂ ಯೂರಿಯಾ ಕಾರ್ಖಾನೆ:
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು – ರಸಗೊಬ್ಬರ ಉತ್ಪಾದನೆಗೆ ಸಂಬಂಧಿಸಿದ ಹೊಸ ಹೂಡಿಕೆ ನೀತಿಯ ಲಾಭವನ್ನು (ಸಹಾಯ ಧನ, ಪ್ರೊತ್ಸಾಹ ಧನ, ಸಬ್ಸಿಡಿ ಇತ್ಯಾದಿ) ರಾಮಗುಂಡಂ ರಸಗೊಬ್ಬರ ಮತ್ತು ರಾಸಾಯನಿಕ ಲಿಮಿಟೆಡ್ (RFCL) ಯೂರಿಯಾ ಕಾರ್ಖಾನೆಗೂ ವಿಸ್ತರಿಸಲು ಒಪ್ಪಿಗೆ ನೀಡಿದೆ ಎಂದರು.
ಇದನ್ನೂ ಓದಿ :ನಾಳೆಯಿಂದ ರಾಜ್ಯದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ -19 ಲಸಿಕೆ : ನಾರಾಯಣಗೌಡ
ವಿವಿಧ ಕಾರಣಗಳಿಂದ ಮುಚ್ಚಿದ್ದ ಐದು ಯೂರಿಯಾ ಘಟಕಗಳನ್ನು ನಮ್ಮ ರಸಗೊಬ್ಬರ ಇಲಾಖೆಯು ಪುನಶ್ಚೇತನಗೊಳಿಸುತ್ತಿದೆ. ಈಗಾಗಲೇ ರಾಮಗುಂಡಂ ಸ್ಥಾವರ ಉತ್ಪಾದನೆ ಆರಂಭಿಸಿದೆ. ಗೋರಖ್ಪುರ ಸ್ಥಾವರ ಜುಲೈ ತಿಂಗಳಲ್ಲಿ ಉತ್ಪಾದನೆ ಆರಂಭಿಸಲಿದೆ. ಸಿಂಧ್ರಿ ಹಾಗೂ ಬರೌಣಿ ಘಟಕಗಳು ಈ ವರ್ಷದ ಡಿಸೆಂಬರ್’ನಲ್ಲಿ ಕಾರ್ಯಾರಂಭ ಮಾಡಲಿವೆ. ತಾಲ್ಚೆರ್ ಘಟಕ 2023ರ ಸೆಪ್ಟೆಂಬರ್’ನಲ್ಲಿ ಕಾರ್ಯಾರಂಭ ಮಾಡಲಿದೆ. ಇವೆಲ್ಲ ವಾರ್ಷಿಕವಾಗಿ ತಲಾ 12.7 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಉತ್ಪಾದನಾ ಸಾಮರ್ಥ್ಯದ ಘಟಕಗಳಾಗಿವೆ (ಒಟ್ಟು ಉತ್ಪಾದನೆ 63.5 ಲಕ್ಷ ಟನ್). ಇಂಧನ ಕ್ಷಮತೆಯನ್ನು ಹೆಚ್ಚಿಸಲು ಅನಿಲ ಆಧಾರಿತ ಪರಿಸರ ಸ್ನೇಹಿ ತಂತ್ರಜ್ಞಾನವನ್ನು ಬಳಸಲಾಗಿದೆ. ಭಾರತವು ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಗಳಿಸಬೇಕು ಎಂಬುದು ಮೋದಿಯವರ ಆಶಯ. ಪುನಶ್ಚೇತನಗೊಳ್ಳುತ್ತಿರುವ ಈ ಘಟಕಗಳು ದೇಶವು ಯೂರಿಯಾ ಸ್ವಾವಲಂಬನೆ ಗಳಿಸುವತ್ತ ಮಹತ್ವದ ಹೆಜ್ಜೆಗಳಾಗಿವೆ ಎಂದು ಸದಾನಂದ ಗೌಡ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.