ಸಹಾಯಧನ ವಿತರಣೆಗೆ ಕ್ರಮ ಕೈಗೊಳ್ಳಿ
Team Udayavani, Jun 9, 2021, 10:36 PM IST
ಶಿವಮೊಗ್ಗ: ಕೊರೊನಾ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ತಲಾ 2 ಸಾವಿರ ರೂ. ಪರಿಹಾರ ಒದಗಿಸುವ ಯೋಜನೆಯಡಿ ಅರ್ಹರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಹಾಯಧನ ಒದಗಿಸುವ ಕುರಿತು ಕಾರ್ಮಿಕ ಸಮಿತಿ, ಕಾರ್ಮಿಕ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಕೊರೊನಾ ಮೊದಲನೇ ಅಲೆಯ ಲಾಕ್‌ಡೌನ್ ಸಂದರ್ಭದಲ್ಲಿ ಸಹಾಯಧನ ಪಡೆದಿರುವ ಅಗಸರು, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಣಿಯಾದ ಕುಟುಂಬಗಳ ಅರ್ಹ ಫಲಾನುಭವಿಗಳು ನೆರವು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಈಗಾಗಲೇ ಲಭ್ಯವಿರುವ ಮಾಹಿತಿ ಆಧಾರದಲ್ಲಿ ಅವರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಇನ್ನುಳಿದಂತೆ ಗೃಹ ಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್‌ಗಳು, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಮತ್ತು ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವವರು ಸಹಾಯಧನಕ್ಕಾಗಿ ಸೇವಾಸಿಂಧು ವೆಬ್‌ಸೈಟ್ ಮೂಲಕ ಮಾತ್ರವೇ ದಾಖಲೆಗಳನ್ನು ಸಲ್ಲಿಸಬೇಕಾಗಿದೆ.
ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಲು ಇವರಿಗೆಲ್ಲ ನೆರವು ನೀಡಬೇಕು ಎಂದರು, ಜಿಲ್ಲಾ ಕಾರ್ಮಿಕ ಅ ಧಿಕಾರಿ ವಿಶ್ವನಾಥ್ ಮಾತನಾಡಿ, ಪರಿಹಾರ ಪಡೆಯ ಬಯಸುವವರು 18 ರಿಂದ 65 ವರ್ಷ ಒಳಗಿನವರಾಗಿರಬೇಕು. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರಬೇಕು.
ವಲಸೆ ಕಾರ್ಮಿಕರು ಸಹ ಪರಿಹಾರಕ್ಕೆ ಅರ್ಹರಾಗಿದ್ದು ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಕಡ್ಡಾಯವಾಗಿ ಹೊಂದಿರಬೇಕು. ಯಾವ ವೃತ್ತಿ ನಿರ್ವಹಿಸುತ್ತಿರುವ ಬಗ್ಗೆ ಅ ಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದರು.
ಅರ್ಹ ಫಲಾನುಭವಿ ಕಾರ್ಮಿಕರು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಬೇಕು. ಆಧಾರ್ ಕಾರ್ಡ್, ವಿಳಾಸ ದೃಢೀಕರಣ ಪತ್ರದ ಅ ಧಿಕೃತ ದಾಖಲೆ ಅಪ್‌ಲೋಡ್ ಮಾಡಬೇಕು. ಮೊಬೈಲ್ ಸಂಖ್ಯೆ ನಮೂದಿಸಬೇಕು. ಜನ್ಮ ದಿನಾಂಕ ನಮೂದಿಸಿದ ಪ್ರಮಾಣ ಪತ್ರ, ಬಿಪಿಎಲ್ ಸಂಖ್ಯೆ, ಪಾಸ್‌ಪೋರ್ಟ್ ಅಳತೆ ಭಾವಚಿತ್ರ ಅಪ್‌ಲೋಡ್ ಮಾಡಬೇಕು.
ಬ್ಯಾಂಕ್ ಖಾತೆಯ ವಿವರ, ಸ್ವಯಂ ಘೋಷಣೆ ಸಲ್ಲಿಸಬೇಕು. ಅರ್ಜಿದಾರರ ವೃತ್ತಿಯ ಕುರಿತಾದ ಉದ್ಯೋಗ ಪ್ರಮಾಣ ಪತ್ರವನ್ನು ಕಂದಾಯ ಅಧಿಕಾರಿಗಳು, ನಿರೀಕ್ಷಕರು, ಕಾರ್ಮಿಕ ಇಲಾಖೆ ಅಧಿ ಕಾರಿಗಳು, ಯಾವುದೇ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧ, ಸಮಿತಿ ಸದಸ್ಯರು ಹಾಗೂ ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಪ್ರತಿನಿ ಧಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.