10 ಸಾವಿರ ಕ್ರೀಡಾಪಟುಗಳಿಗೆ ಲಸಿಕೆ ಅಭಿಯಾನ


Team Udayavani, Jun 10, 2021, 7:30 PM IST

Vaccine Campaign for Athletes

ಬೆಂಗಳೂರು : ಪ್ರತಿಯೊಬ್ಬ ಕ್ರೀಡಾಪಟುವು ಹೆಸರು ನೋಂದಾಯಿಸಿಕೊಂಡು ಲಸಿಕೆಯನ್ನು ಪಡೆದುಕೊಳ್ಳಬೇಕು. ಬೆಂಗಳೂರಿನಲ್ಲಿ ಮಾತ್ರವಲ್ಲದೆ ಜಿಲ್ಲಾ ಕೇಂದ್ರಗಳಲ್ಲೂ ಲಸಿಕೆಯನ್ನು ನೀಡಲಾಗುತ್ತಿದ್ದು, ಎಲ್ಲ ಕ್ರೀಡಾಪಟುಗಳು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದರು.

ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಖ್ಯಾತ ಬ್ಯಾಡ್ಮಿಂಟನ್ ಕ್ರೀಡಾಪಟು ಅನುಪ್ ಶ್ರೀಧರ್ ಅವರಿಗೆ ಲಸಿಕೆ ಹಾಕಿಸುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ರಾಜ್ಯದಲ್ಲಿ ಕೋವಿಡ್  ಇಳಿಮುಖವಾಗುತ್ತಿದೆ. ಆದಾಗ್ಯೂ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಹಾಗೂ ಲಸಿಕೆಯನ್ನು ಪಡೆದುಕೊಳ್ಳುವುದು ಅವಶ್ಯಕ. ದೈಹಿಕ ಕ್ಷಮತೆಯನ್ನು ಸದಾಕಾಲ ಕಾಪಾಡಿಕೊಳ್ಳಬೇಕಾಗಿರುವುದು ಕ್ರೀಡಾಪಟುಗಳ ಆದ್ಯ ಕರ್ತವ್ಯ. ಅವರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ ಕೂಡ ಹೌದು. ಹೀಗಾಗಿ ಕ್ರೀಡಾಪಟುಗಳಿಗೆ ಕೋವಿಡ್ -19 ಲಸಿಕೆ ನೀಡುವ ಸಲುವಾಗಿ ಅಭಿಯಾನ ಆರಂಭಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲಸಿಕೆ ನೀಡುವ ಕಾರ್ಯ ನಡೆಯಲಿದೆ. ಎರಡೇ ದಿನಕ್ಕೆ ಅಭಿಯಾನವನ್ನು ಮುಗಿಸೋದಿಲ್ಲ. ರಾಜ್ಯಾಧ್ಯಂತ ಇರುವ 10 ಸಾವಿರಕ್ಕು ಹೆಚ್ಚು ಕ್ರೀಡಾಪಟುಗಳಿಗೆ ಲಸಿಕೆ ನೀಡಬೇಕು. ಎಲ್ಲ ಜಿಲ್ಲಾ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಈ ಅಭಿಯಾನ ನಡೆಯುತ್ತಿದೆ. ಪ್ರತಿಯೊಬ್ಬ ಕ್ರೀಡಾಪಟುಗಳು ಬಂದು ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆದುಕೊಳ್ಳಬೇಕು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಓಲಂಪಿಕ್ ಸಂಸ್ಥೆ ಸಹಯೋಗದಲ್ಲಿ ಈ ಅಭಿಯಾನವನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ 2200 ಕ್ರೀಡಾಪಟುಗಳು ಈಗಾಗಲೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇಂದು ಮತ್ತು ನಾಳೆ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವವರಿಗೆ ಲಸಿಕೆ ನೀಡಲಾಗುತ್ತದೆ. ಈಗ ಹೆಸರು ನೋಂದಾಯಿಸಿಕೊಂಡವರಿಗೆ ಅಭಿಯಾನವನ್ನು ಮುಂದುವರೆಸಿ ಲಸಿಕೆಯನ್ನು ನೀಡಲಾಗುತ್ತದೆ. ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಅಭಿಯಾನ ಆರಂಭವಾಗಿದ್ದು, ಎಲ್ಲ ಕ್ರೀಡಾಪಟುಗಳು ಲಸಿಕೆ ಪಡೆದುಕೊಂಡ ನಂತರ ಅಭಿಯಾನವನ್ನು ಮುಕ್ತಾಯಗೊಳಿಸಲಾಗುವುದು. ಇದು ಮೊದಲ ಹಂತದ ಲಸಿಕಾ ಅಭಿಯಾನವಾಗಿದ್ದು, ನಿಗದಿತ ಸಮಯದ ನಂತರ ಎರಡನೇ ಹಂತದ ಲಸಿಕೆಯನ್ನೂ ಸಹ ಇದೇ ಮಾದರಿಯಲ್ಲಿ ನೀಡಲಾಗುವುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವರ ಜೊತೆ ಚರ್ಚಿಸಿ ಕ್ರೀಡಾಪಟುಗಳಿಗೆ ಲಸಿಕಾಕರಣ ಅಭಿಯಾನದ ರೂಪುರೇಷೆಯನ್ನು ಸಿದ್ದಪಡಿಸಿದ್ದಾರೆ. ಇಲಾಖೆಯ ಕಾರ್ಯಕ್ಕೆ ಎಲ್ಲ ಕ್ರೀಡಾಪಟುಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕ್ರೀಡಾಟುಗಳ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಮೊದಲ ಡೋಸ್ ಲಸಿಕೆ ಪಡೆದ ಖ್ಯಾತ ಕ್ರೀಡಾಪಟುಗಳು

ಬ್ಯಾಡ್ಮಿಟನ್ ಆಟಗಾರ ಅನೂಪ್ ಶ್ರೀಧರ್, ಪಿ.ಎನ್. ಪ್ರಕಾಶ್- ಶೂಟರ್, ನಿಖಿಲ್- ಶೂಟರ್, ನಿಶಿತಾ- ರೋಯಿಂಗ್, ಶ್ರೇಯಾ ಬಿ. – ರೋಯಿಂಗ್, ಭೂಮಿಕಾ ಆರ್. ಕೇಸರಕರ್- ಸ್ಮಿಮ್ಮರ್, ಪ್ರಿಯಾ ಮೋಹನ್- ಅಥ್ಲೆಟಿ , ನ್ಯಾಷ್ನಲ್ ಚಾಂಪಿಯನ್ ಗಳಾದ ಐಶ್ವರ್ಯ, ಯಶ್ವಂತ್, ಅಕ್ಷಯ್ ಸೇರಿದಂತೆ ನೂರಾರು ಕ್ರೀಡಾಪಟುಗಳು ಲಸಿಕೆ ಪಡೆದರು.

ಸಂಸದ ಪಿ.ಸಿ. ಮೋಹನ್, ರಾಜ್ಯ ಓಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಲಾಖೆ ಆಯುಕ್ತ ಗೋಪಾಲಕೃಷ್ಣ, ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

1-asss

Udupi; ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.