20ಕ್ಕೂ ಹೆಚ್ಚು ಸೋಂಕಿತರಿದ್ರೆ ಸೀಲ್‌ ಡೌನ್‌


Team Udayavani, Jun 10, 2021, 10:48 PM IST

10-19

ಚಿತ್ರದುರ್ಗ: ಗ್ರಾಮೀಣ ಭಾಗದಲ್ಲಿ 20ಕ್ಕೂ ಹೆಚ್ಚು ಸೋಂಕಿತರು ಕಂಡು ಬಂದಲ್ಲಿ ಅಂತಹ ಹಳ್ಳಿಗಳನ್ನು ಸೀಲ್‌ ಡೌನ್‌ ಮಾಡಿ ಮನೆಗಳಿಗೆ ಕೆಂಪು ಪಟ್ಟಿ ಅಂಟಿಸಿ. ಈ ವಿಷಯದಲ್ಲಿ ನಿರ್ಲಕ್ಷé ವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿ ಕಾರಿ ಕವಿತಾ ಎಸ್‌. ಮನ್ನಿಕೇರಿ ಎಚ್ಚರಿಕೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಲೆಕ್ಕಾಧಿ ಕಾರಿ ಹಾಗೂ ಪಂಚಾಯಿತಿ ಮಟ್ಟದ ನೋಡಲ್‌ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೆ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರು ಕಂಡು ಬಂದರೆ ತಪಾಸಣೆ ನಡೆಸಿ. ನಂತರ ಹತ್ತು ಮಂದಿ ಪ್ರಾಥಮಿಕ ಹಾಗೂ 20 ಮಂದಿ ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸುವುದು ನಿಮ್ಮ ಜವಾಬ್ದಾರಿ ಎಂದರು.

ಕೋವಿಡ್‌ ಸೋಂಕು ತಗುಲಿರುವವರನ್ನು ಮನೆಯಲ್ಲೇ ಇರಲು ಬಿಡಬೇಡಿ. ಅವರ ಮನವೊಲಿಸಿ ಕೋವಿಡ್‌ ಸೆಂಟರ್‌ ಅಥವಾ ಜಿಲ್ಲಾ ಕೋವಿಡ್‌ ಕೇಂದ್ರಕ್ಕೆ ಕರೆ ತನ್ನಿ. ಇಲ್ಲದಿದ್ದರೆ ಕೊರೊನಾ ನಿಯಂತ್ರಣ ಕಷ್ಟವಾಗುತ್ತದೆ ಎಂದು ತಾಕೀತು ಮಾಡಿದರು. ಸೋಂಕಿತರನ್ನು ಪ್ರತ್ಯೇಕವಾಗಿಡು ವುದು ಸವಾಲಿನ ಕೆಲಸ. ಕೆಲವರು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಾಗಲು ವಿತಂಡವಾದ ಮಾಡುತ್ತಾರೆ.

ಅಂಥವರ ಮನವೊಲಿಸಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಬೆಡ್‌, ಆಕ್ಸಿಜನ್‌, ಊಟ, ಸೊಳ್ಳೆ ಪರದೆ, ಶುದ್ಧ ಕುಡಿಯುವ ನೀರು, ಫ್ಯಾನ್‌ ಎಲ್ಲವೂ ಇದೆ ಎಂದು ವಿವರಿಸಿ ಹೇಳಿ. ಗ್ರಾಮಗಳಲ್ಲಿ ಶಾಲೆ ಇಲ್ಲವೇ ಸಮುದಾಯ ಭವನಗಳನ್ನು ಮೈಕ್ರೋ ಕೋವಿಡ್‌ ಕೇರ್‌ ಸೆಂಟರ್‌ಗಳನ್ನಾಗಿ ತೆರೆದು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವಲ್ಲಿ ನಿಮ್ಮ ಪಾತ್ರ ಮುಖ್ಯ. ಎಲ್ಲವನ್ನೂ ತಹಶೀಲ್ದಾರ್‌ ಗಳು ಮಾನಿಟರಿಂಗ್‌ ಮಾಡಬೇಕು. ಕೋವಿಡ್‌ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸುವುದಷ್ಟೇ ಮುಖ್ಯವಲ್ಲ. ಪ್ರತಿ ದಿನವೂ ಫೋನ್‌ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸವಾಗಬೇಕೆಂದು ಕರೆ ನೀಡಿದರು.

ಕೆಲವು ಗ್ರಾಮಗಳಲ್ಲಿ ಚರಂಡಿ ತುಂಬಿ ರಸ್ತೆಯಲ್ಲಿ ಹರಿಯುತ್ತಿದೆ. ಕೋವಿಡ್‌ ಸಂದರ್ಭದಲ್ಲಿ ಶುಚಿತ್ವ ಕಾಪಾಡುವುದು ಅತ್ಯವಶ್ಯ. ಮಳೆ ಬಂದಾಗ ಕೆರೆಗಳು ಭರ್ತಿಯಾಗಿ ನೀರು ಹರಿಯದೆ ಮನೆಗಳಿಗೆ ಅಪಾಯವಾಗಬಹುದು. ಅದಕ್ಕಾಗಿ ಕೆರೆ ಒತ್ತುವರಿಯಾಗದಂತೆ ಮುತುವರ್ಜಿ ವಹಿಸಿ. ಮಳೆ ಅನಾಹುತಗಳು ಸಂಭವಿಸಿದಲ್ಲಿ ತಕ್ಷಣ ಸ್ಥಳಕ್ಕೆ ದೌಡಾಯಿಸಿ ತುರ್ತು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮೈಕ್ರೋ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲು ಸರ್ಕಾರ ಪ್ರತಿ ಪಂಚಾಯಿತಿಗೆ ಐವತ್ತು ಸಾವಿರ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸೋಂಕಿತರಿಗೆ ಉಪಹಾರ, ಊಟಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಡ್‌, ಕಾಟ್‌ ವ್ಯವಸ್ಥೆ ಮಾಡಿಕೊಳ್ಳಿ. ಕುಡಿಯುವ ನೀರು, ಫ್ಯಾನ್‌, ನ್ಯೂಸ್‌ ಪೇಪರ್‌ಗಳನ್ನು ಸೋಂಕಿತರಿಗೆ ತಲುಪಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಚುನಾಯಿತ ಪ್ರತಿನಿಧಿ ಗಳ ಸಹಕಾರ ಪಡೆದುಕೊಂಡು ನಿಯಂತ್ರಣಕ್ಕೆ ಮುಂದಾಗಿ. ಸಣ್ಣ ಸಣ್ಣ ವಯಸ್ಸಿನವರು ಕೋವಿಡ್‌ಗೆ ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚು ಜಾಗ್ರತೆ ವಹಿಸಿ. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಸೇರುವಂತೆ ಮಾಡಿ ಎಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿ ಕಾರಿ ಡಾ| ಗಿರೀಶ್‌ ಮಾತನಾಡಿ, ಚಿತ್ರದುರ್ಗ ತಾಲೂಕಿನಾದ್ಯಂತ ಐದು ಕೋವಿಡ್‌ ಕೇರ್‌ ಸೆಂಟರ್‌ಗಳಿವೆ. ಗ್ರಾಮ ಮಟ್ಟದಲ್ಲಿ ಶಾಲೆ, ಸಮುದಾಯ ಭವನ ಗುರುತಿಸಿ ಮೈಕ್ರೋ ಕೋವಿಡ್‌ ಕೇರ್‌ ಸೆಂಟರ್‌ ಗಳು ಆರಂಭಿಸಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರದವರು ನಿರ್ವಹಣೆ ನೋಡಿಕೊಳ್ಳುತ್ತಾರೆ. ಕೊರೊನಾ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕಸ ವಿಲೇವಾರಿ ಸಮಸ್ಯೆಯಿದ್ದು, ಸರಿಪಡಿಸಿ ಎಂದು ಹೇಳಿದರು.

ಡಿಎಚ್‌ಒ ಡಾ| ಸಿ.ಎಲ್‌. ಪಾಲಾಕ್ಷ, ತಹಶೀಲ್ದಾರ್‌ ಜೆ.ಸಿ. ವೆಂಕಟೇಶಯ್ಯ, ಕೋವಿಡ್‌-19 ಜಾಗೃತಿ ನೋಡಲ್‌ ಅ ಧಿಕಾರಿ ಕೃಷ್ಣಪ್ಪ, ತಾಪಂ ಇಒ ಹನುಮಂತಪ್ಪ ಇದ್ದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.