ಗೋವಾದಲ್ಲಿ ತೆಂಗಿನಕಾಯಿ ಬೆಲೆ 55ಕ್ಕೆ ಏರಿಕೆ..!
Team Udayavani, Jun 11, 2021, 8:30 PM IST
ಪ್ರಾತಿನಿಧಿಕ ಚಿತ್ರ
ಪಣಜಿ: ಗೋವದವರ ಆಹಾರದ ಅವಿಭಾಜ್ಯ ಅಂಗವಾಗಿರುವ ತೆಂಗಿನ ಕಾಯಿಯ ದರ ಗಗನಕ್ಕೇರಿದೆ. ಸರ್ವೆಸಾಧಾರಣವಾಗಿ 25 ರೂಗಳಿಗೆ ಸಿಗುತ್ತಿದ್ದ ದೊಡ್ಡ ಗಾತ್ರದ ತೆಂಗಿನ ಕಾಯಿ ಸದ್ಯ 55 ರೂಗಳಿಗೆ ತಲುಪಿದೆ.
ಗೋವಾ ರಾಜಧಾನಿ ಪಣಜಿಯಲ್ಲಿ ದೊಡ್ಡ ಗಾತ್ರದ ತೆಂಗಿನ ಕಾಯಿಯನ್ನು 55 ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಸದ್ಯ ತೆಂಗಿನ ಕಾಯಿಯ ಉತ್ಪಾದನೆ ಮತ್ತು ಆವಕ ಕಡಿಮೆಯಾಗಿರುವುದರಿಂದ ತೆಂಗಿನ ಕಾಯಿಯ ದರದಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ವ್ಯಾಪಾರಸ್ಥರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ : ಅನಿವಾರ್ಯವಾದರೆ ಶೀಘ್ರವೇ ಮತ್ತೊಂದು ಪ್ಯಾಕೇಜ್ ಘೋಷಣೆ :ಸಿಎಂ
ಗೋವಾಕ್ಕೆ ಪ್ರಮುಖವಾಗಿ ಕರ್ನಾಟಕ ಮತ್ತು ಕೇರಳದಿಂದ ಭಾರಿ ಪ್ರಮಾಣದಲ್ಲಿ ತೆಂಗಿನ ಕಾಯಿ ಪೂರೈಕೆಯಾಗುತ್ತದೆ. ಆದರೆ ಕಳೆದ ಹಲವು ದಿನಗಳಿಂದ ಕರ್ನಾಟಕ ಕೇರಳದಲ್ಲಿ ಕಠಿಣ ಲಾಕ್ ಡೌನ್ ಜಾರಿಯಾಗಿದ್ದರಿಂದ ಅಲ್ಲಿಂದ ಗೋವಾಕ್ಕೆ ತೆಂಗಿನಕಾಯಿ ಪೂರೈಕೆ ಬಂದ್ ಆಗಿದೆ. ಇದರಿಂದಾಗಿ ಗೋವಾದ ಜನತೆ ಸ್ಥಳೀಯವಾಗಿ ಲಭಿಸುವ ತೆಂಗಿನ ಕಾಯಿಯನ್ನೇ ಅವಂಭಿಸುವಂತಾಗಿದೆ.
ಕಳೆದ ಕೆಲ ದಿನಗಳ ಹಿಂದೆ ತೌಕ್ತೆ ಚಂಡಮಾರುತದ ಪರಿಣಾಮ ಗೋವಾದಲ್ಲಿ ನದಿಯ ದಡದಲ್ಲಿರುವ ಬಹುತೇಕ ತೆಂಗಿನ ಮರಗಳ ಕಾರಿಗಳು ನದಿಯಲ್ಲೇ ಬಿದ್ದು ತೇಲಿ ಹೋಗಿದೆ. ಇಷ್ಟೇ ಅಲ್ಲದೆಯೇ ಹೆಚ್ಚಿನ ತೆಂಗಿನ ಮರಗಳು ಮುರುದುಬಿದ್ದಿದೆ. ಹೀಗೆ ಗೋವಾದಲ್ಲಿ ಸ್ಥಳೀಯವಾಗಿ ತೆಂಗಿನ ಕಾಯಿಯ ಉತ್ಪಾದನೆ ಕೂಡ ಇಳಿಕೆಯಾಗಿದ್ದು, ಇದರಿಂದಾಗಿ ದರ ಹೆಚ್ಚಳವಾಗಿದೆ ಎಂದು ವ್ಯಾಪಾರಸ್ಥರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ : ಮಮತಾ ಬ್ಯಾನರ್ಜಿ ನಮ್ಮ ನಾಯಕಿ; ಬಿಜೆಪಿ ತೊರೆದ ರಾಯ್ ಮತ್ತೆ ಟಿಎಂಸಿ ಸೇರ್ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.