ಸಚಿವ ಈಶ್ವರಪ್ಪ ಜನ್ಮದಿನ: ಕೆರೆ ಪುನಃಶ್ಚೇತನಕ್ಕೆ ಚಾಲನೆ
Team Udayavani, Jun 11, 2021, 10:58 PM IST
ಶಿವಮೊಗ್ಗ: ಕೆರೆ ಪುನಃಶ್ಚೇತನ ಮಾಡುವ ಮೂಲಕ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು ಖುಷಿ ತಂದಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಮಲ್ಲಿಗೇನಹಳ್ಳಿಯ ಸರ್ವೇ ನಂ.25 ರಲ್ಲಿರುವ ರಾಮಿನಕಟ್ಟೆ ಕೆರೆ ಪುನಃ ಶ್ಚೇತನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಕೆರೆಯ ಅಭಿವೃದ್ಧಿಯ ಮೂಲಕ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ಈ ಹಿಂದೆಯೇ ತಿಳಿಸಿದ್ದೆ. ಅದರಂತೆ ಈ ಕೆರೆಯ ಜಾಗದಲ್ಲಿ ನಮ್ಮ ಶಿವಮೊಗ್ಗ ಪರಿಸರಾಸಕ್ತರ ತಂಡದ ಸಹಯೋಗದೊಂದಿಗೆ ಈ ಕೆರೆಯನ್ನು ಪುನರುಜ್ಜೀವಗೊಳಿಸಲಾಗುವುದು ಮತ್ತು ಕೆರೆಯ ಸುತ್ತಲೂ ಹಸಿರು ಬೆಳೆಸಲಾಗುವುದು ಎಂದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶ್ರೀ ಬಸವ ಮಾದಾರ ಚನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಕೆರೆ ಕಟ್ಟೆಗಳು ಪ್ರಭಾವಿಗಳ ಪಾಲಾಗಿದ್ದು, ಕೆರೆ ಎಲ್ಲಿದೆ ಎಂದು ಹುಡುಕುವ ಸ್ಥಿತಿ ನಿರ್ಮಾಣವಾಗಿದೆ. ಜಲ ಮೂಲಗಳು ಸರಿಯಾಗಿ ಇಲ್ಲದೆ ಇರುವುದರಿಂದ ನದಿಗಳು ಅಕಾಲಿಕವಾಗಿ ಬತ್ತುವಂತಾಗಿದೆ. ಹೀಗಾಗಿ ಕೆರೆಗಳ ಪುನಃಶ್ಚೇತನ ಇಂದು ಅನಿವಾರ್ಯವಾಗಿದೆ ಎಂದರು.
ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಹಿರಿಯರು ನಮಗೆ ಉತ್ತಮವಾದ ಪರಿಸರ ಬಿಟ್ಟು ಹೋಗಿದ್ದಾರೆ. ನಾವು ಇದನ್ನು ಮುಂದಿನ ಪೀಳಿಗೆಗೆ ಉಳಿಸುವಂತಹ ಯೋಜನೆಗಳನ್ನು ರೂಪಿಸಬೇಕೆಂದು ಹೇಳಿದರು. ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಶಿವಾನಂದ ಕಳವೆ ವಿಶೇಷ ಉಪನ್ಯಾಸ ನೀಡಿದರು. ಶಾಸಕ ಅಶೋಕ್‌ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್. ರುದ್ರೇಗೌಡ, ಆರ್. ಎಸ್.ಎಸ್. ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ, ಮೇಯರ್ ಸುನೀತಾ ಅಣ್ಣಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.