ಬಿಜೆಪಿ ಜತೆಗೆ ಮೈತ್ರಿ ಅಂತ್ಯ; ಪಂಜಾಬ್ ಚುನಾವಣೆಯಲ್ಲಿ ಅಕಾಲಿ ದಳ, ಬಿಎಸ್ಪಿ ಮೈತ್ರಿ
ಇತರ ಪಕ್ಷದ ಜತೆ ತಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿದೆ ಎಂದು ಸುಖ್ ಬೀರ್ ಸಿಂಗ್ ಬಾದಲ್ ಘೋಷಿಸಿದ್ದರು.
Team Udayavani, Jun 12, 2021, 11:12 AM IST
ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ಜಾರಿಗೆ ತಂದ ನಂತರ ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡಿದ್ದ ಶಿರೋಮಣಿ ಅಕಾಲಿ ದಳ ಮುಂಬರುವ (2022) ವಿಧಾನಸಭಾ ಚುನಾವಣೆಯಲ್ಲಿ ಬಹುಜನ್ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:Article 370 ಕುರಿತು ಪಾಕಿಸ್ತಾನಿ ಪ್ರಜೆಗೆ ದಿಗ್ವಿಜಯ ಸಿಂಗ್ ಹೇಳಿದ ಮಾತು ಲೀಕ್
ಕಳೆದ ಸೆಪ್ಟೆಂಬರ್ ನಲ್ಲಿ ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಂಡ ನಂತರ ಬಿಎಸ್ಪಿ ಜತೆಗಿನ ಹೊಸ ಮೈತ್ರಿಯೊಂದಿಗೆ ಸುಖ್ ಬೀರ್ ಸಿಂಗ್ ಬಾದಲ್ ನೇತೃತ್ವದ ಪಕ್ಷ ಹಲವಾರು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರ ಹೊಂದಿರುವುದಾಗಿ ವರದಿ ವಿವರಿಸಿದೆ.
1996ರ ಲೋಕಸಭಾ ಚುನಾವಣೆಯ 27 ವರ್ಷಗಳ ನಂತರ ಅಕಾಲಿ ದಳ ಮತ್ತು ಬಿಎಸ್ಇ ಮತ್ತೆ ಕೈಜೋಡಿಸಿದೆ. 1996ರಲ್ಲಿ ಅಕಾಲಿದಳ, ಬಿಎಸ್ಪಿ ಮೈತ್ರಿ ಪಂಜಾಬ್ ನ 13 ಸ್ಥಾನಗಳಲ್ಲಿ 11 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್ಪಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಅಕಾಲಿ ದಳ 10ರಲ್ಲಿ ಎಂಟು ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು ಎಂದು ವರದಿ ತಿಳಿಸಿದೆ.
2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು ಹೊರತುಪಡಿಸಿ ಇತರ ಪಕ್ಷದ ಜತೆ ತಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿದೆ ಎಂದು ಸುಖ್ ಬೀರ್ ಸಿಂಗ್ ಬಾದಲ್ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.