ನಿರ್ಮಾಪಕಿ ಆಯಿಷಾ ವಿರುದ್ಧ ದೇಶದ್ರೋಹ ಕೇಸ್ ಖಂಡಿಸಿ 15 ಬಿಜೆಪಿ ನಾಯಕರು ರಾಜೀನಾಮೆ
Team Udayavani, Jun 12, 2021, 12:43 PM IST
ಲಕ್ಷದ್ವೀಪ : ಸಿನಿಮಾ ನಿರ್ಮಾಪಕಿ ಆಯಿಷಾ ಸುಲ್ತಾನ್ ವಿರುದ್ಧ ದಾಖಲಾಗಿರುವ ದೇಶ ವಿರೋಧಿ ಪ್ರಕರಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ಈ ಕ್ರಮ ಖಂಡಿಸಿ 15 ಜನ ಸ್ಥಳೀಯ ಬಿಜೆಪಿ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಮಲಯಾಳಂ ಟಿ.ವಿ ಚಾನೆಲ್‌ನಲ್ಲಿ ನಡೆದ ಚರ್ಚೆಯ ವೇಳೆ ಲಕ್ಷದ್ವೀಪದಲ್ಲಿ ಕೋವಿಡ್-19 ಹರಡಲು ಕೇಂದ್ರ ಸರ್ಕಾರವು ಜೈವಿಕ ಅಸ್ತ್ರಗಳನ್ನು ಬಳಸಿದೆ ಎಂದು ಆಯೆಷಾ ಆರೋಪಿಸಿದ್ದರು. ಇವರ ಹೇಳಿಕೆ ವಿರುದ್ಧ ಬಿಜೆಪಿಯ ಕೆಲ ನಾಯರು ಕೆರಳಿದ್ದರು. ಜೊತೆಗೆ ಆಯೆಷಾ ವಿರುದ್ಧ ದೇಶ ವಿರೋಧಿ ಕೃತ್ಯ ಎಸಗಿದ್ದಾರೆಂದು ಬಿಜೆಪಿ ಮುಖಂಡರು ದೂರಿದ್ದರು.
ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಯೆಷಾ ಸುಲ್ತಾನಾ ವಿರುದ್ಧ ದೂರು ದಾಖಲಿಸಿರುವುದು ಸ್ಥಳೀಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಶುಕ್ರವಾರ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರೆ. ಮುಸ್ಲೀಂ ಬಾಹುಳ್ಯವುಳ್ಳ ಲಕ್ಷ ದ್ವೀಪದಲ್ಲಿ ಸ್ವಪಕ್ಷದ ವಿರುದ್ಧ ಸ್ಥಳೀಯ ನಾಯಕರು ತಿರುಗಿ ಬಿದ್ದಿರುವುದು ಇದು ಇದು ಎರಡನೇ ಬಾರಿ.
ಕಳೆದ ಮೇ ತಿಂಗಳಿನಲ್ಲಿ ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರ ಅನಿಯಂತ್ರಿತ ಕ್ರಮಗಳನ್ನು ವಿರೋಧಿಸಿ ಎಂಟು ಬಿಜೆಪಿ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.