ಅನಾಥ ಅಪ್ರಾಪ್ತೆಯರ ಜೊತೆ ಮದುವೆಯಾದ ಯುವಕರು : ದೂರು ದಾಖಲು
Team Udayavani, Jun 12, 2021, 6:58 PM IST
ದಾವಣಗೆರೆ: ಅನಾಥ ಹಾಗೂ ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ, ಮದುವೆಯಾಗಿದ್ದ ಯುವಕರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದ ಘಟನೆ ನಗರದಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯರನ್ನು ಮದುವೆಯಾಗಿದ್ದ ಹೊಸಕುಂದವಾಡದ ಇಬ್ಬರು ಯುವಕರ ವಿರುದ್ಧ ಅಪಹರಣ, ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆಯಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕರು ನಾಪತ್ತೆಯಾಗಿದ್ದು ಪತ್ತೆ ಕಾರ್ಯ ನಡೆದಿದೆ.
ಬಾಲಕಿಯರ ತಂದೆ ಎರಡು ವರ್ಷಗಳ ಹಿಂದೆ, ತಾಯಿ ಆರು ತಿಂಗಳ ಹಿಂದೆ ಮೃತಪಟ್ಟಿದ್ದರು. ಈ ದಂಪತಿಗೆ 15,13, 8, 6 ವರ್ಷದ ನಾಲ್ವರು ಹೆಣ್ಣು ಮಕ್ಕಳು, ಐದು ವರ್ಷದ ಒಬ್ಬ ಮಗನಿದ್ದು ಈ ಐದು ಮಕ್ಕಳನ್ನು ಕಣ್ಣು ಕಾಣದ ಅಜ್ಜಿ ಸಾಕಿಕೊಂಡಿದ್ದರು. 9ನೇ ತರಗತಿ ಓದುತ್ತಿದ್ದ 15ವರ್ಷದ ಬಾಲಕಿಯನ್ನು ಸ್ಥಳೀಯ ಯುವಕನೋರ್ವ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಮದುವೆ ಆಗಿದ್ದನು. ಮತ್ತೊಬ್ಬ ಸ್ಥಳೀಯ ಯುವಕ ಆಕೆಯ ತಂಗಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಬಾಲಕಿಯನ್ನು 9 ದಿನಗಳ ಹಿಂದೆ ಮದುವೆಯಾಗಿದ್ದನು ಎನ್ನಲಾಗಿದೆ.
ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶುಕ್ರವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ವೈ.ಆರ್. ಕಿರಣ್ ಮತ್ತು ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ವರದಿ ನೀಡಿದ್ದರು.
ಈ ವರದಿ ಆಧರಿಸಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್, ಶನಿವಾರ ಭೇಟಿ ಎಲ್ಲ ಐದು ಮಕ್ಕಳನ್ನು ಸಖಿ ಒನ್ ಕೇಂದ್ರದಲ್ಲಿ ಆಶ್ರಯ ನೀಡಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಎಲ್ಲ ಐದು ಮಕ್ಕಳನ್ನು ಸದ್ಯ ಸಖಿ-೧ ಕೇಂದ್ರದಲ್ಲಿ ಆಶ್ರಯ ನೀಡಿದು, ಕೊರೊನಾ ಹಾಗೂ ಇತರ ವೈದ್ಯಕೀಯ ತಪಾಸಣೆ ಬಳಿಕ ಅವರನ್ನು ನಗರದ ಬಾಲಮಂದಿರದಲ್ಲಿ ಆಶ್ರಯ ನೀಡಿ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಮಾಡಲಾಗುವುದು.
-ಕೆಎಚ್. ವಿಜಯಕುಮಾರ್, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ*
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.