ವಿಜಯಪುರ ಜಿಲ್ಲೆಯಲ್ಲಿ ಭೂಕಂಪದ ಅನುಭವ, ಮನೆ ಬಿಟ್ಟು ಹೊರಗೆ ಓಡಿ ಬಂದ ಜನ
Team Udayavani, Jun 13, 2021, 9:21 AM IST
ವಿಜಯಪುರ: ಜಿಲ್ಲೆಯ ಭಾನುವಾರ ನಸುಕಿನಲ್ಲಿ 2-25 ರಿಂದ 2-30 ರ ಅವಧಿಯಲ್ಲಿ ಹಲವು ಕಡೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಇದರಿಂದಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದು ಜಾಗರಣೆ ಮಾಡಿದ ಘಟನೆ ನಡೆದಿದೆ.
ವಿಜಯಪುರ ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಸುಕಿನ 2-29 ಕ್ಕೆ, ಲೋಹಗಾಂವ್ ಗ್ರಾಮದಲ್ಲಿ ಬೆಳಿಗ್ಗೆ 2-27 ರ, ಅರಕೇರಿ, ಕಳ್ಳಕವಟಗಿ ಸೇರಿದಂತೆ ವಿಜಯಪುರ ಗ್ರಾಮೀಣ, ತಿಕೋಟ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಭೂಕಂಪದ ಅನುಭವ ಆಗಿದೆ.
ಜನರು ಗಾಢ ನಿದ್ದೆಯಲ್ಲಿ ಇದ್ದಾಗ ನಸುಕಿನಲ್ಲಿ ಜರುಗಿದ ಭೂಕಂಪದ ಅನುಭವ ಆಗುತ್ತಲೇ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ವಿದ್ಯಾವಂತರು ಭೂಕಂಪದ ಅನುಭವ ಆಗುತ್ತಲೇ ಖಚಿತ ಪಡಿಸಿಕೊಳ್ಳಲು ತಮ್ಮ ಮೊಬೈಲ್ ಮೂಲಕ ಗೂಗಲ್ ಸರ್ಚ್ ಮಾಡಿದ್ದಾರೆ.
ಇದನ್ನೂ ಓದಿ:ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗೆ ಸಿಹಿಸುದ್ದಿ: ಸಬ್ಸಿಡಿ ಹೆಚ್ಚಳ,ವಾಹನದ ದರ ಇಳಿಕೆ ಸಾಧ್ಯತೆ
ಮತ್ತೆ ಕೆಲವರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಭೂಕಂಪದ ಅನುಭವ ಆಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ನಗರದ ಗ್ಯಾಂಗ್ ಬಾವಡಿ ನಿವಾಸಿ ಅರಕೇರಿ ಶಾಲೆ ಶಿಕ್ಷಕ ನಿಂಗಣ್ಣ ಅರವತ್ತು, ಲೋಹಗಾಂವ ವಸ್ತಿ ಪ್ರದೇಶದ ಸಂತೋಷ ಬಗಲಿ, ಕಳ್ಳಕವಟಗಿ ವಸ್ತಿ ಪ್ರದೇಶದ ನಿವಾಸಿ ಪರಮೇಶ ಗದ್ಯಾಳ ಹೀಗೆ ಹಲವರು ನಸುಕಿನಲ್ಲಿ 3-4 ಬಾರಿ ಭೂಮಿಯ ಆಳದಿಂದ ಭಾರಿ ಸದ್ದಿನ ಮೂಲಕ ಭೂಕಂಪನ ಅನುಭವ ಆಗಿದ್ದನ್ನು ಉದಯವಾಣಿ ಪತ್ರಿಕೆಗೆ ಖಚಿತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.