ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ಮಹೇಶ್ವರಯ್ಯ ಇನ್ನಿಲ್ಲ

Team Udayavani, Jun 13, 2021, 6:08 PM IST

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ಮಹೇಶ್ವರಯ್ಯ ಇನ್ನಿಲ್ಲ

ಕಲಬುರಗಿ: ರಾಜ್ಯದ ಏಕೈಕ ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಹಿಂದಿನ ಕುಲಪತಿ ಪ್ರೊ. ಎಚ್.ಎಂ ಮಹೇಶ್ವರಯ್ಯ (70) ರವಿವಾರ ಧಾರವಾಡದಲ್ಲಿ ನಿಧನರಾದರು.

ಕರ್ನಾಟಕದ ಕೇಂದ್ರೀಯ ವಿವಿಯ ಪ್ರಥಮ ಪೂರ್ಣಾವಧಿ ಕುಲಪತಿಗಳೆಂದು ಹೆಸರು ಪಡೆದಿದ್ದ ಪ್ರೊ. ಮಹೇಶ್ವರಯ್ಯ ಅವರು 2015ರ ಏಪ್ರಿಲ್‌ 20ರಿಂದ 2020ರ ನವ್ಹೆಂಬರ್ 13ರವರೆಗೆ ಐದು ವರ್ಷ  ಆರು ತಿಂಗಳ ಕಾಲ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

ಸಿಯುಕೆ ಕುಲಪತಿಗಳಾಗಿ ವಿವಿಯ ಕಟ್ಟಡಗಳನ್ನು ಪೂರ್ಣಗೊಳಿಸುವ ಕುರಿತಾಗಿ ವಿಶೇಷ ನಿಗಾ ವಹಿಸಿದ್ದಲ್ಲದೇ ಅನೇಕ ಹೊಸ ಕೋರ್ಸುಗಳ ಪ್ರಾರಂಭಕ್ಕೆ ಕಾರಣಿಭೂತರಾಗಿದ್ದರು. ವಿವಿಯಲ್ಲಿದ್ದುಕೊಂಡು ವಿವಿಯ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರಳು ಶ್ರಮಿಸಿದ್ದರು ಎಂದರೆ ತಪ್ಪಾಗಲಿಕ್ಕಿಲ್ಲ. ವಿವಿಯ ಶೈಕ್ಷಣಿಕ ಚಟುವಟಿಕೆಗಳನ್ನು ಕಾಲಾನುಕಾಲ ಆರಂಭಗೊಳ್ಳುವಲ್ಲಿ ಹಾಗೂ ಸಕಾಲಕ್ಕೆ ಘಟಿಕೋತ್ಸವ ನಡೆಯುವಲ್ಲಿ ಪ್ರೊ. ಮಹೇಶ್ವರಯ್ಯ ಅವರ ಕಾರ್ಯಶೀಲತೆಗೆ ಹಿಡಿದ ಕನ್ನಡಿಯಾಗಿದೆ.

ಇದನ್ನೂ ಓದಿ: ದೇವಸ್ಥಾನದ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷಿಸಿ ದೇಣಿಗೆ ಲೂಟಿ: ಪ್ರಕರಣ ದಾಖಲು

ಸಿಯುಕೆ ಕುಲಪತಿಗಳಾಗುವ ಮುಂಚೆ ಮೈಸೂರಿನಲ್ಲಿನ ಭಾರತೀಯ ಭಾಷಾ ಸಂಸ್ಥೆಯ ನಿರ್ದೇಶಕರಾಗಿದ್ದರು. ಅದಕ್ಕೂ ಮುಂಚೆ ಧಾರವಾಡದ ಕರ್ನಾಟಕ ವಿವಿಯ ಭಾಷಾಶಾಸ್ತ್ರದ ಪ್ರಾಧ್ಯಾಪರಾಗಿದ್ದರು.

ಡೀನ್ (ಕಲಾ ವಿಭಾಗ), ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದ ಡಾ. ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ನಿರ್ದೇಶಕರು, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರು, ಪತ್ರಿಕಾ ಮತ್ತು ಪ್ರಕಟಣೆಗಳ ನಿರ್ದೇಶಕರು, ಸಿಂಡಿಕೇಟ್, ಸೆನೆಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರ ಇತರ ಆಡಳಿತಾತ್ಮಕ ಪಾತ್ರಗಳಿಗೆ ಹೆಚ್ಚುವರಿಯಾಗಿ – ಚಾರ್ಜ್ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅವರ ಸಾಮರ್ಥ್ಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸೇವೆ ಸಲ್ಲಿಸಿದ್ದಾರೆ.
ಕಲಬುರಗಿ ಯ ಕೇಂದ್ರೀಯವಿಶ್ವ ವಿದ್ಯಾಲಯದ ಕುಲಪತಿ ಗಳಾಗಿ ಅವರು ಸೇವೆ ಸಲ್ಲಿಸಿ ಗಮನ ಸೆಳೆದಿದಗದ ಅವರು ಕರ್ನಾಟಕ ಜಾನಪದ ವಿವಿಗೆ ಆರಂಭದಲ್ಲಿ ಮಾರ್ಗ ದರ್ಶಕ ರಾಗಿ ಸೇವೆ ಸಲ್ಲಿಸಿದ್ದಾರೆ.

ಜಾನಪದ ಭಾಷಾ ಅಧ್ಯಯನ ಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಧ್ಯಯನ ಕೈಗೊಂಡ ಅವರು ತಮ್ಮ ವಿದ್ಯಾರ್ಥಿಗಳಿಗೆ ಇದೇ ವಿಷಯಗಳ ಮೇಲೆ ಪಿಎಚ್ಡಿ ಮಾಡಲು ಮಾರ್ಗದರ್ಶನ ಮಾಡಿದ್ದರು.
ಅಷ್ಟೇ ಯಲ್ಲ ದೇಶಿ ಜ್ಞಾನ ಪರಂಪರೆಯ ವಿಚಾರಗಳನ್ನು ಅಳವಡಿಸಿ ಕೊಂಡಿದಗದ ಅವರು ಕಡೆ ಅವರೆಗು ತಮ್ಮ ಸಂಶೋಧನಾ ಪ್ರವೃತ್ತಿ ಕೈ ಬಿಟ್ಟಿರಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಜಾನಪದ ಸಂವಹನ ವಿಷಯದಲ್ಲಿ ಅವರು ಹೊರತಂದ ಕೃತಿಗಳು ಯುವ ಸಂಶೋಧಕರಿಗೆ ದಾರಿ ದೀಪ ವಾಗಿವೆ.

ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಪ್ರೊ. ಎಚ್. ಎಂ. ಮಹೇಶ್ವರಯ್ಯ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಪ್ರೊ. ಮಹೇಶ್ವರಯ್ಯ ನಿಧನಕ್ಕೆ ಕರ್ನಾಟಕ ಕೇಂದ್ರೀಯ ವಿವಿಯ ಪ್ರಾಧ್ಯಾಪಕ ಹಾಗೂ ಸಿಬ್ಬಂದಿ ವರ್ಗ ಶೋಕ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.