ಡಾ| ಸಿದ್ದಲಿಂಗಯ್ಯ ಅಗಲಿಕೆ ತುಂಬಲಾರದ ನಷ್ಟ
Team Udayavani, Jun 13, 2021, 9:21 PM IST
ಬಳ್ಳಾರಿ: ಕನ್ನಡದ ಖ್ಯಾತ ಕವಿ ಬಂಡಾಯ ಸಾಹಿತಿ ಡಾ| ಸಿದ್ದಲಿಂಗಯ್ಯ ಅವರ ನಿಧನಕ್ಕೆ ನಗರದ ಅಂಬೇಡ್ಕರ್ ಭವನದ ಆವರಣದಲ್ಲಿರುವ ಡಾ| ಬಿ.ಆರ್. ಅಂಬೇಡ್ಕರ್ ಪುತ್ಥಳಿ ಬಳಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಶ್ರದ್ಧಾಂಜಲಿ ಸಲ್ಲಿಸಿದರು.
ಇದೇ ವೇಳೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಜಿಪಂ ಸದಸ್ಯ ಎ. ಮಾನಯ್ಯ ಮಾತನಾಡಿ, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ನಿವಾಸಿಗಳಾದ ಡಾ| ಸಿದ್ಧಲಿಂಗಯ್ಯ ಅವರು ದಲಿತ ಮತ್ತು ಬಂಡಾಯ ಸಾಹಿತ್ಯದ ಮೂಲಕ ಇಡೀ ರಾಜ್ಯಕ್ಕೆ ಹೆಸರು ಮಾಡಿದ್ದರು.
ಅವರ ಬಂಡಾಯ ಸಾಹಿತ್ಯದಿಂದ ದಲಿತ ಲೋಕಕ್ಕೆ ಒಂದು ಹೊಸ ಚೈತನ್ಯ ಮತ್ತು ಹೊಸ ಹುರುಪು ತುಂಬಿದ್ದರು. ಡಾ| ಸಿದ್ದಲಿಂಗಯ್ಯ ಅವರ ಅಗಲಿಕೆಯಿಂದ ಇಡೀ ದಲಿತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್. ಸಿದ್ದೇಶ್, ಪತ್ರಕರ್ತ ಕಾಡೂರು ಮಧುಸೂದನ್, ಮುಖಂಡರಾದ ಡಿ.ಸೂರಿ, ಆಂಜಿನೇಯ, ಕೆ.ಗಾದಿಲಿಂಗ, ಎಚ್. ರಮೇಶ್, ಟಿ.ಎಂ.ಎರ್ರಿಸ್ವಾಮಿ, ಶಂಕರ್, ಮಲ್ಲಯ್ಯ, ಭೀಮಾ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.