ಸಂಚಾರಿ ವಿಜಯ್ ನಿಧನದಿಂದ ಮನಸ್ಸಿಗೆ ನೋವಾಗಿದೆ: ನಟ ನಿಖಿಲ್ ಕುಮಾರಸ್ವಾಮಿ
Team Udayavani, Jun 14, 2021, 5:17 PM IST
ಮಂಡ್ಯ: ಅಪಘಾತದಿಂದ ಚಿಕಿತ್ಸೆ ಫಲಿಸದೆ ನಿಧನರಾದ ನಟ ಸಂಚಾರಿ ವಿಜಯ್ ಅವರಿಗೆ ನಟ ನಿಖಿಲ್‌ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದರು.
ತಾಲೂಕಿನ ಹನಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ ವಿಜಯ್ ಅವರ ಸಾವಿನ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಕೋವಿಡ್ ಬಳಿಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಒಳ್ಳೆ ನಟನ್ನು ಇಂಡಸ್ಟ್ರಿ ಕಳೆದುಕೊಂಡಿದೆ ಎಂದರು.
ನಿನ್ನೆ ಮಾಧ್ಯಮಗಳನ್ನ ಗಮನಿಸಿದಾಗ ವಿಜಯ್ ಗುಣಮುಖರಾಗುವ ನಿರೀಕ್ಷೆಯಲ್ಲಿದ್ದೆ. ಆದರೆ ಅದು ಆಗಲಿಲ್ಲ. ವೈಯಕ್ತಿಕವಾಗಿ ಯಾವುದೇ ಒಡನಾಟ ನನಗೆ ಇರಲಿಲ್ಲ. ಇವತ್ತು ಅವರ ಸಾವಿನ ಸುದ್ದಿ ಕೇಳಿ ನೋವಾಗಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಹೇಳಿದರು.
ಇದನ್ನೂ ಓದಿ:ಪಂಚನಹಳ್ಳಿ ಗ್ರಾಮದಿಂದ ರಾಷ್ಟ್ರಪ್ರಶಸ್ತಿಯವರೆಗೆ ವಿಜಯ್ ಸಂಚಾರ..!
ಎಚ್‌ಡಿಕೆ ಸಂತಾಪ: ನಟ ಸಂಚಾರಿ ವಿಜಯ್ ನಿಧನಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದರು.
ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯ್ ಪ್ರತಿಭಾನ್ವಿತ ಕಲಾವಿದ. ನಟಿಸಿದ ಎರಡ್ಮೂರು ಸಿನೆಮಾಗಳಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಕನ್ನಡ ನಟನ ಮರಣದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ವಿಜಯ್ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.