ಜೂ.15ರಿಂದ CETಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ : ಜು.10 ಕೊನೆಯ ದಿನ
Team Udayavani, Jun 14, 2021, 8:45 PM IST
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ.15ರಿಂದ ಆರಂಭವಾಗಲಿದೆ.
ಎಂಜಿನಿಯರಿಂಗ್, ಪಶುವೈದ್ಯ, ಕೃಷಿ ವಿಜ್ಞಾನ, ಆರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್ ಗಳ ಸರ್ಕಾರಿ ಕೋಟದ ಸೀಟುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗುತ್ತದೆ. ಆಗಸ್ಟ್ 28 ಮತ್ತು 29ರಂದು ಸಿಇಟಿ ನಡೆಯಲಿದೆ.
ದ್ವೀತಿಯ ಪಿಯು ಪರೀಕ್ಷೆ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಅರ್ಹತಾ ಅಂಕಗಳನ್ನು ಕೈಬಿಡಲಾಗಿದೆ. ಹೀಗಾಗಿ ವಿಜ್ಞಾನ ವಿಭಾಗದ ಎಲ್ಲ ವಿದ್ಯಾರ್ಥಿಗಳು ಸಿಇಟಿ ಬರೆಯಬಹುದಾಗಿದೆ. ಜತೆಗೆ, ರ್ಯಾಂಕಿಂಗ್ ಹಾಗೂ ಸೀಟು ಹಂಚಿಕೆಗೆ ಸಿಇಟಿಯಲ್ಲಿ ಪಡೆಯುವ ಅಂಕಗಳನ್ನೇ ಮಾನದಂಡವಾಗಿಸಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಈಗಾಗಲೆ ತಿಳಿಸಿದೆ.
ಇದನ್ನೂ ಓದಿ :ಜೂನ್ 15ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್
ಸಿಇಟಿ ನಡೆಸಲು ಈಗಾಗಲೇ 500ಕ್ಕೂ ಅಧಿಕ ಕೇಂದ್ರಗಳನ್ನು ಗುರುತಿಸಲಾಗಿದೆ. ಅರ್ಜಿ ಸಲ್ಲಿಸಲು ಜು.10 ಮತ್ತು ಶುಲ್ಕ ಪಾವತಿಸಲು ಜು.13 ಕೊನೆಯ ದಿನವಾಗಿದೆ.
ವಿಶೇಷ ಪ್ರವರ್ಗಗಳ ಮೂಲ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜು.14 ರಿಂದ 20ರ ವರೆಗೆ ಅವಕಾಶ ಇರಲಿದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು (ಶುಲ್ಕ ಪಾವತಿಸಿದವರಿಗೆ ) ಜು.19ರಿಂದ 22ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 13ರಂದು ಪ್ರವೇಶ ಪತ್ರ ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮಾಹಿತಿಗೆ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in/ ನೋಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.