ಮುಂಗಾರು ವಿಪತ್ತು ಎದುರಿಸಲು ಸಿದ್ಧತೆ
Team Udayavani, Jun 14, 2021, 10:34 PM IST
ಸಂದೀಪ ಜಿ.ಎನ್. ಶೇಡ್ಗಾರ್
ಚಿಕ್ಕಮಗಳೂರು: ಕಾಫಿನಾಡಿಗೆ ಮುಂಗಾರು ಪ್ರವೇಶಿಸಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ವಿಪತ್ತು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಸುರಿದ ಮಳೆಯಿಂದ ಮಲೆನಾಡು ಭಾಗದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿತ್ತು.
ಗುಡ್ಡ ಕುಸಿತದಿಂದ ನೂರಾರು ಎಕರೆ ಕಾಫಿತೋಟಕ್ಕೆ ಹಾನಿ ಸಂಭವಿಸಿತ್ತು. ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿದ ಪರಿಣಾಮ ಭತ್ತದ ಗದ್ದೆ, ಕಾಫಿತೋಟ, ಅಡಕೆ ತೋಟಗಳಿಗೆ ನೀರು ನುಗ್ಗಿ ಕೋಟ್ಯಂತರ ರೂ. ನಷ್ಟ ಸಂಭವಿಸಿತ್ತು ಹಾಗೂ ಪ್ರಾಣಹಾನಿಯಾಗಿತ್ತು. ಬಹುತೇಕ ರಸ್ತೆಗಳಿಗೆ ಹಾನಿಯಾಗಿದ್ದು, ಹೊರಗಿನ ಪ್ರಪಂಚದ ಸಂಪರ್ಕವೇ ಕಡಿತಗೊಂಡಿತ್ತು.
ಈ ಕಹಿ ಘಟನೆಗಳ ನಂತರ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ 2021ರ ಮುಂಗಾರು ಆರಂಭದಲ್ಲೇ ಸಂಭವಿಸಬಹುದಾದ ವಿಪತ್ತನ್ನು ಎದುರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯನ್ನು ಜಿಲ್ಲಾಧಿ ಕಾರಿ ಕೆ.ಎನ್. ರಮೇಶ್ ಅವರ ಅಧ್ಯ ಕ್ಷತೆಯಲ್ಲಿ ರಚಿಸಲಾಗಿದೆ.
ಈ ಸಮಿತಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಎಚ್.ಅಕ್ಷಯ್, ಜಿಪಂ ಸಿಇಒ ಎಸ್. ಪೂವಿತ, ಅಪರ ಜಿಲ್ಲಾಧಿ ಕಾರಿ ಬಿ.ಆರ್.ರೂಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಉಮೇಶ್, ಪಿಡಬ್ಯೂಡಿ ಎಂಜಿನಿಯರ್ ಜಿಪಂ ಅಧ್ಯಕ್ಷರು ಹಾಗೂ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಒಳಗೊಂಡ ಸಮಿತಿ ರಚಿಸಲಾಗಿದೆ. ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ವಿಪತ್ತು ನಿರ್ವಹಣೆಗೆ ಸಮಿತಿ ರಚಿಸಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಯಾವುದೇ ಸಂದರ್ಭದಲ್ಲಿ ವಿಪತ್ತು ಸಂಭವಿಸಿದಾಗ ಸಕಾಲಕ್ಕೆ ನಿರ್ವಹಣೆ ಮಾಡಲು ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್‌ನಲ್ಲಿ 5.20 ಕೋಟಿ ರೂ. ಅನ್ನು ವಿಪತ್ತು ನಿರ್ವಹಣೆಗಾಗಿ ಕಾಯ್ದಿರಿಸಲಾಗಿದೆ. ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಈಗಾಗಲೇ ಕೃಷಿ ಚಟುವಟಿಕೆ ಭರದಿಂದ ಸಾಗುತ್ತಿದೆ. ಕೃಷಿ ಚಟುವಟಿಕೆಗೆ ಬೇಕಾಗುವ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. 37,128ಮೆಟ್ರಿಕ್‌ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, ಈಗಾಗಲೇ ಜಿಲ್ಲೆಯ ವಿವಿಧ ಗೋಡೌನ್‌ಗಳಲ್ಲಿ 40,693 ರಸಗೊಬ್ಬರ ದಾಸ್ತಾನಿದೆ. ಬೇಡಿಕೆಗಿಂತ 17,567 ಮೆಟ್ರಿಕ್ ಟನ್ ದಾಸ್ತಾನು ಹೊಂದಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಆರಂಭಗೊಂಡಿದ್ದು, ಭತ್ತ, ಮುಸುಕಿನಜೋಳ, ತೊಗರಿ, ಹಳಸಂದೆ, ಸೂರ್ಯಕಾಂತಿ, ಶೇಂಗಾ, ಹೆಸರು, ಉದ್ದು, ಹತ್ತಿ ಸೇರಿದಂತೆ 5,420 ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ. 3,877ಕ್ವಿಂಟಲ್ ಬಿತ್ತನೆ ಬೀಜ ಪೂರೈಕೆಯಾಗಿದೆ. 1.085ಕ್ವಿಂಟಲ್ ಬಿತ್ತನೆ ಬೀಜ ರೈತರಿಗೆ ಪೂರೈಕೆ ಮಾಡಲಾಗಿದೆ. ಜನವರಿಯಿಂದ ಜೂನ್ ವರೆಗೆ ಸರಾಸರಿ 208ಮಿ. ಮೀ., ವಾಡಿಕೆ ಮಳೆಯಾಗಿದ್ದು, ಈಗಾಗಲೇ ಜಿಲ್ಲಾದ್ಯಂತ 410ಮಿ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.