ದೊಡ್ಡ ಬಳ್ಳಾಪುರದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ
Team Udayavani, Jun 15, 2021, 5:14 PM IST
ದೇವನಹಳ್ಳಿ: ಬೆಂ.ಗ್ರಾ. ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನಲ್ಲಿ ಕೋವಿಡ್ ಸೋಂಕಿನ ಪ್ರಮಾಣಹೆಚ್ಚಾಗಿದೆ. ಇದರಿಂದ ಸೋಂಕು ನಿಯಂತ್ರಿಸಲು ತಾಲೂಕಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನುಜಾರಿಗೊ ಳಿಸಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡಬೇಕುಎಂದು ಜಿÇÉಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಎÇÉಾ ತರಹದಮಾಂಸದ ಅಂಗಡಿಗಳನ್ನು ಜೂ.21ರವರೆಗೆ ಸಂಪೂರ್ಣ ವಾಗಿ ಮುಚ್ಚಬೇಕು. ಕೃಷಿ ಉತ್ಪನ್ನ ಮಾರುಕಟ್ಟೆಬೆಳಗ್ಗೆ 8 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶಕಲ್ಪಿಸಲಾಗಿದೆ. ಅಗತ್ಯ ಸೇವೆಗಳಲ್ಲದ ಅಂಗಡಿಗಳುಬೆಳಗ್ಗೆ 10 ಗಂಟೆ ನಂತರ ತೆರೆದಿದ್ದಲ್ಲಿ, ಆ ಅಂಗಡಿಗಳಿಗೆಪೊಲೀಸ್ ಹಾಗೂ ನಗರಸಭೆ ಅಧಿಕಾರಿಗಳಿಂದ ದಂಡ ವಿಧಿಸಲಾಗುವುದು. ಅಲ್ಲದೆ, ಮೆಕಾನಿಕ್ ಅಂಗಡಿಗಳು ಬೆಳಗ್ಗೆ 10 ಗಂಟೆ ನಂತರ ತೆಗೆದಿರುವುದು ಕಂಡುಬಂದಲ್ಲಿ ಪೊಲೀಸ್ ಹಾಗೂ ನಗರಸಭೆ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ, ಅವರಿಗೆ ದಂಡವನ್ನುವಿಧಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಗತ್ಯ ಸಂಚಾರ ಮಾಡಿದರೆ ಕ್ರಮ: ದೊಡ್ಡಬಳ್ಳಾಪುರ ತಾಲೂಕಿನ ರಸ್ತೆಗಳಲ್ಲಿ ಪೊಲೀಸ್ ಇಲಾಖೆಅಧಿಕಾರಿಗಳು ನಾಕಾಬಂದಿಯನ್ನು ಹಾಕಲಿದ್ದು,ಅನಗತ್ಯವಾಗಿ ಸಂಚಾರ ಮಾಡುವ ವಾಹನಗಳನ್ನುವಶಕ್ಕೆ ಪಡೆದುಕೊಳ್ಳುವುದರ ಜೊತೆಯಲ್ಲಿ ಅವರಮೇಲೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂ.14ರಿಂದ 21ರವರೆಗೆಇರುವ ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ,ಸಮ್ಮೇಳನ, ಕ್ರೀಡಾಕೂಟ ಹಾಗೂ ಇತರೆ ಯಾವುದೇಧಾರ್ಮಿಕ ಸಮಾರಂಭಗಳು, ಬೇಸಿಗೆ ಶಿಬಿರ,ಪ್ರವಾಸ ಸ್ನೇಹ ಸಮ್ಮೇಳನ, ಸಂಗೀತ ಸಮ್ಮೇಳನ,ನಾಟಕೋತ್ಸವ ವಿಚಾರಗೋಷ್ಠಿ ಮುಂತಾದವುಗಳಮೇಲಿರುವ ನಿಷೇಧಾಜ್ಞೆ, ದೊಡ್ಡಬಳ್ಳಾಪುರತಾಲೂಕಿನಲ್ಲೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.