ಜನ ಬಿಜೆಪಿಗೆ ಬುದ್ಧಿ ಕಲಿಸುತ್ತಾರೆ :ಲಕ್ಷ್ಮಿ ಹೆಬ್ಟಾಳಕರ
Team Udayavani, Jun 15, 2021, 7:02 PM IST
ಬೆಳಗಾವಿ: ಕುದುರೆ ವ್ಯಾಪಾರದ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಸರಕಾರದ ಕೋತಿ ಆಟವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ಬಹಳ ಹತ್ತಿರದಲ್ಲೇ ಇವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಟಾಳಕರ ವಾಗ್ಧಾಳಿ ನಡೆಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇದು ರಾಜ್ಯದ ಜನರ ಆಶೀರ್ವಾದದಿಂದ ಬಂದ ಸರಕಾರ ಅಲ್ಲ. ಕಳೆದ ಎರಡು ವರ್ಷಗಳ ಈ ಸರಕಾರದಲ್ಲಿ ಯಾವ ಅಂಶವೂ ವೈಜ್ಞಾನಿಕವಾಗಿ ಕಾಣುತ್ತಿಲ್ಲ. ಒಂದು ಸಮಸ್ಯೆಯನ್ನು ಅಥವಾ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವ ಶಕ್ತಿ ಅಥವಾ ಬುದ್ಧಿವಂತಿಕೆ ಅವರಿಗಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಮಾಡಿದ ರಾಡಿಯನ್ನು ಬಿಜೆಪಿ ತೊಳೆಯುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇಶವನ್ನು ಬ್ರಿಟಿಷರ ಕೈಯಿಂದ ಸ್ವತಂತ್ರ ಮಾಡಿ ವಿಶ್ವದಲ್ಲಿ ಎರಡನೇ ದೊಡ್ಡ ಶಕ್ತಿಶಾಲಿ ರಾಷ್ಟ್ರ ಎಂಬುದನ್ನು ಬಿಂಬಿಸಿದ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲುತ್ತದೆ. ಕಳೆದ 70 ವರ್ಷಗಳಲ್ಲಿ ನಾವು ನಿಂತು ಮಾತನಾಡುವ ಸ್ವಾತಂತ್ರ್ಯವನ್ನು ಕೊಟ್ಟಿರುವುದೇ ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಪಕ್ಷ 70 ವರ್ಷದಲ್ಲಿ ರೈಲ್ವೆ, ವಿಮಾನಯಾನ ಹಾಗೂ ದೊಡ್ಡ ದೊಡ್ಡ ಕಂಪನಿಗಳನ್ನು ಕಟ್ಟಿದೆ ಎಂದು ಬಿಜೆಪಿ ಗೆ ತಿರುಗೇಟು ನೀಡಿದರು.
ದೇಶದಲ್ಲಿ ಬಡವರು ಬದುಕಲೇಬಾರದು ಎಂಬ ಗುರಿಯನ್ನು ಬಿಜೆಪಿ ಹೊಂದಿದೆ. ಬಡವರಿಗೆ ಕಿಂಚಿತ್ತೂ ಮರ್ಯಾದೆ ಇಲ್ಲ. ತಮ್ಮ ತಮ್ಮ ಅಧಿಕಾರ, ಕುರ್ಚಿಯನ್ನು ಹೇಗೆ ಉಳಿಸಿಕೊಳ್ಳಬೇಕು. ಯಾವ ಹಗರಣದಲ್ಲಿ ಎಷ್ಟು ದುಡ್ಡನ್ನು ಲೂಟಿ ಮಾಡಬೇಕು ಎಂಬುದರಲ್ಲೇ ಕೇಂದ್ರಿಕೃತವಾಗಿದ್ದಾರೆ ಎಂದರು. ಈ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಒಂದು ರೂ. ಏರಿಕೆಯಾದಾಗ ಇದೇ ಬಿಜೆಪಿ ಯಡಿಯೂರಪ್ಪ, ಈಶ್ವರಪ್ಪ ಮೊದಲಾದ ನಾಯಕರು ಪ್ರತಿಭಟನೆ ಮಾಡಿದರು. ಚಕ್ಕಡಿ ಹೊಡೆದರು. ಆದರೆ ಈಗ ಪೆಟ್ರೋಲ್ ಬೆಲೆ 100 ರೂ ತಲುಪಿದರೂ ಒಂದು ಮಾತು ಆಡುತ್ತಿಲ್ಲ. ಬದಲಾಗಿ ತಾವು ಮಾಡಿದ್ದೇ ಸರಿ ಎಂದು ಸಮರ್ಥಿಸಿಕೊಳ್ಳುತ್ತಾರೆ ಎಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Renukaswamy Case: ಶೆಡ್‌ನಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ
Bengaluru: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.