ಅನ್‌ಲಾಕ್ ಬೆನ್ನಲ್ಲೆ ಎಚ್ಚರ ಮರೆತ ಜನ
ನಗರದ ಮಾರುಕಟ್ಟೆಯಲ್ಲಿ ಜನವೋ.. ಜನಸಾಮಾಜಿಕ ಅಂತರವಿಲ್ಲ, ಮಾಸ್ಕ್ ಧರಿಸಿರಲಿಲ್ಲ
Team Udayavani, Jun 15, 2021, 8:39 PM IST
ಕೊಪ್ಪಳ: ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಜಿಲ್ಲಾಡಳಿತ ಘೋಷಣೆ ಮಾಡಿದ್ದ ಲಾಕ್‌ಡೌನ್‌ನಿಂದ ಕೆಲವೊಂದು ವಿನಾಯಿತಿ ನೀಡಿದ್ದು, ಈ ಬೆನ್ನಲ್ಲೇ ಜಿಲ್ಲೆಯಲ್ಲಿನ ಜನತೆ ಏಕಾಏಕಿ ನಗರದ ಮಾರುಕಟ್ಟೆಗಳಿಗೆ ಸೋಮವಾರ ಲಗ್ಗೆಯಿಟ್ಟು ಕೋವಿಡ್ ನಮ್ಮಿಂದ ದೂರವಾಯಿತು ಎನ್ನುವ ಭಾವನೆಯಲ್ಲಿದ್ದಾರೆ. ನಿಜಕ್ಕೂ ಇದು ದುರದೃಷ್ಟಕರ ಸಂಗತಿ. ಯಾರೂ ಸಾಮಾಜಿಕ ಅಂತರ ಪಾಲಿಸಲಿಲ್ಲ. ಮಾಸ್ಕ್ ಧರಿಸದೇ ಇದ್ದದ್ದು ಮಾರುಕಟ್ಟೆಯಲ್ಲಿ ಕಂಡುಬಂತು.
ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಇದು ಸ್ವಲ್ಪ ಸಮಾಧಾನ ತರಿಸಿದೆ. ಆದರೂ ಸೋಂಕಿನ ಪ್ರಮಾಣ ಇನ್ನೂ ಸೊನ್ನೆಯ ಹಂತಕ್ಕೆ ತಲುಪಿಲ್ಲ. ಇಂದಿಗೂ ನಿತ್ಯ ನೂರಾರೂ ಜನರಲ್ಲಿ ಸೋಂಕು ದೃಢಪಡುತ್ತಿವೆ. ಜನರು ಇದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಜನತೆ ಮಾತ್ರ ಕೋವಿಡ್ ಕಡಿಮೆಯಾಯಿತು ನಾವು ನಗರಕ್ಕೆ ತೆರಳಬಹುದು ಎನ್ನುವ ಭಾವನೆಯಲ್ಲಿ ನಗರ ಪ್ರದೇಶಗಳಿಗೆ ಆಗಮಿಸುತ್ತಿರುವುದು ಆತಂಕ ಮೂಡಿಸಿದೆ.
ಸಾಮಾಜಿಕ ಅಂತರ ಮಾಯ: ಜಿಲ್ಲಾಡಳಿತ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಿ ಜೂ. 21ರವರೆಗೂ ಅಂಗಡಿ, ಮುಂಗಟ್ಟು ಆರಂಭಕ್ಕೆ ಅವಕಾಶ ನೀಡಿದೆ. ಇದನ್ನೇ ಅವಕಾಶ ಎಂದುಕೊಂಡಿರುವ ಜನರು ನಮ್ಮಿಂದ ಕೋವಿಡ್ ಸೋಂಕು ದೂರವಾಯ್ತು ಎನ್ನುವ ಭಾವನೆ ಮೂಡಿದೆ. ನಗರದಲ್ಲಿ ಮಾಸ್ಕ್ ಧರಿಸುವುದು ಕಡಿಮೆಯಾಗಿದೆ.
ಸಾಮಾಜಿಕ ಅಂತರವಂತೂ ಎಲ್ಲಿಯೂ ಕಾಣುತ್ತಿಲ್ಲ. ಯಾವುದೇ ಅಂಗಡಿ ಮಾಲೀಕರು ಗ್ರಾಹಕರಿಗೆ ಕೋವಿಡ್ ಬಗ್ಗೆ ಜಾಗೃತಿಯನ್ನೇ ಮೂಡಿಸುತ್ತಿಲ್ಲ. ಅಧಿ ಕಾರಿ ವರ್ಗವೂ ಇದೆಲ್ಲವನ್ನು ಮರೆತಿದ್ದಾರೆ. ಪೊಲೀಸರು ತಮ್ಮಷ್ಟಕ್ಕೆ ತಾವು ಕೆಲಸ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪ್ರದೇಶದಲ್ಲಿ ಕೋವಿಡ್ ಜಾಗೃತಿಗಾಗಿ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡುವುದು ತುಂಬಾ ಅಗತ್ಯ ಹಾಗೂ ಅವಶ್ಯಕತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.