ಕೋವಿಡ್ ಹೆಚ್ಚಳ: ನಾಳೆಯಿಂದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್
Team Udayavani, Jun 16, 2021, 1:52 PM IST
ಸಾಂದರ್ಭಿಕ ಚಿತ್ರ
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಶನಿವಾರ ಮತ್ತು ರವಿವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯತ್ ನಿರ್ಣಯ ಕೈಗೊಂಡಿದೆ.
ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ವಾರದ ಶನಿವಾರ ಮತ್ತು ರವಿವಾರ ಸಂಪೂರ್ಣ ಲಾಕ್ ಮಾಡಲಾಗುವುದು. ಹಾಲು ಅಂಗಡಿ ಬೆಳಗ್ಗೆ 9 ಗಂಟೆ ವರೆಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದ್ದು, ಹಾಲಿನ ನೆಪದಲ್ಲಿ ಬೇಕರಿ ತೆರೆಯಬಾರದು ಎಂದು ತೀರ್ಮಾನಿಸಲಾಗಿದೆ. ಮೆಡಿಕಲ್ ತೆರೆಯಲು ಅವಕಾಶ ನೀಡಲಾಗಿದೆ.
ವಿಟ್ಲದ ಸುರುಳಿಮೂಲೆ ಭಾಗದಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದ್ದು, ಒಂದೇ ಮನೆಯಲ್ಲಿ 9 ಮಂದಿಗೆ ಪಾಸಿಟಿವ್ ಪತ್ತೆಯಾಗಿದೆ. ಸೋಂಕಿತರನ್ನು ಕೋವಿಡ್ ಸೆಂಟರ್ ಗೆ ಬರುವಂತೆ ವಿನಂತಿಸಲಾಗುವುದು. ಅವರು ಒಪ್ಪದಿದ್ದರೆ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗುವುದು ಎಂದು ನಿಶ್ಚಯಿಸಲಾಗಿದೆ.
ವಿಟ್ಲ ಪೇಟೆಯಲ್ಲಿ ಅನಗತ್ಯವಾಗಿ ನಾಗರಿಕರ ತಿರುಗಾಟ ನಡೆಸುತ್ತಿರುವುದನ್ನು ನಿಯಂತ್ರಿಸಲು ವಾರದ ಪ್ರತಿದಿನ ವಿಟ್ಲ ನಾಲ್ಕು ರಸ್ತೆಗಳಲ್ಲಿ ಬಿಗಿ ಪೊಲೀಸ್ ತಪಾಸಣೆ ನಡೆಸಲಾಗುತ್ತದೆ. ಅನಗತ್ಯವಾಗಿ ತಿರುಗಾಟ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಿಶ್ಚಯಿಸಲಾಗಿದೆ.
ನಾಳೆಯಿಂದ(ಗುರುವಾರ) ಬೊಬ್ಬೆಕೇರಿ, ಮೇಗಿನಪೇಟೆ, ಬಾಕಿಮಾರ್, ನಾಡಕಚೇರಿ ಈ ನಾಲ್ಕು ಸ್ಥಳದಲ್ಲಿ ಪೊಲೀಸರು, ಆರೋಗ್ಯಾಧಿಕಾರಿಗಳಿದ್ದು ವಿಟ್ಲ ಪೇಟೆಗೆ ಆಗಮಿಸುವ ವ್ಯಕ್ತಿಗಳು ನೆಗೆಟಿವ್ ರಿಪೋರ್ಟ್ ತೋರಿಸಬೇಕು. ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಿಸಿ ಕಳುಹಿಸಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಯಿತು.
ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಉಷಾ ಕೃಷ್ಣಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಕಲ್ಲಕಟ್ಟ, ಮಾಜಿ ಅಧ್ಯಕ್ಷ ಅರುಣ್ ಎಂ ವಿಟ್ಲ, ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ, ಸದಸ್ಯರಾದ ರಾಮದಾಸ ಶೆಣೈ, ಜಯಂತ ನಾಯ್ಕ, ಹಸೈನಾರ್ ನೆಲ್ಲಿಗುಡ್ಡೆ, ಲೋಕನಾಥ ಶೆಟ್ಟಿ ಕೊಲ್ಯ, ದಮಯಂತಿ, ಲತಾ ಅಶೋಕ್, ಅಬೂಬಕ್ಕರ್, ಸುನೀತಾ ಕೋಟ್ಯಾನ್, ಮುಖ್ಯಾಧಿಕಾರಿ ಮಾಲಿನಿ, ವಿಟ್ಲ ಪೊಲೀಸ್ ಠಾಣೆಯ ಎಎಸೈ ಕರುಣಾಕರ್, ಆರೋಗ್ಯ ಇಲಾಖೆಯ ಕುಸುಮ, ಗ್ರಾಮಕರಣಿಕ ಪ್ರಕಾಶ್, ಸಿಬಂದಿ ಚಂದ್ರಶೇಖರ ವರ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.