ಶಕ್ತಿ ಇದ್ದರೆ ನಾನೇ ಸಿಎಂ ಆಗುವೆ ಎಂದು ಬಹಿರಂಗವಾಗಿ ಹೇಳಲಿ
Team Udayavani, Jun 16, 2021, 2:57 PM IST
ಧಾರವಾಡ: ಕೋವಿಡ್ ಸಂಕಷ್ಟದ ಸಮಯದಲ್ಲಿ ಕ್ಷೇತ್ರ ಜನರ ಹಿತಾಸಕ್ತಿ ಬಗ್ಗೆ ಕಾಳಜಿ ವಹಿಸಬೇಕಾದ ಶಾಸಕ ಅರವಿಂದ ಬೆಲ್ಲದ ಸಿಎಂ ಆಗಲು ದೆಹಲಿ ಸುತ್ತಾಟ ಕೈಗೊಂಡಿರುವುದು ದುರದೃಷ್ಟಕರ ಸಂಗತಿ. ಒಂದು ವೇಳೆ ಅವರಿಗೆ ಶಕ್ತಿ ಇದ್ದರೆ ನಾನೇ ಸಿಎಂ ಆಗುವುದಾಗಿ ಬಹಿರಂಗವಾಗಿ ಹೇಳಲಿ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗಿದ್ದರೂ ನಾನು ಹೋಗಿಲ್ಲ ಎಂದು ಹೇಳುತ್ತ ಬೆಲ್ಲದ ಜನರ ಹಾದಿ ತಪ್ಪಿಸುತ್ತಿದ್ದಾರೆ. ಮೊದಲೇ ಕ್ಷೇತ್ರದ ಜನರಿಗೆ ಸುಳ್ಳು ಹೇಳುತ್ತ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡಿಲ್ಲ. ಪಕ್ಷ ಕಟ್ಟದೆ ಕಾರ್ಯಕರ್ತರನ್ನು ತುಳಿದು ಶಾಸಕರಾಗಿ ಇದೀಗ ಮುಖ್ಯಮಂತ್ರಿಯಾಗಲು ಹೊರಟಿರುವ ಬೆಲ್ಲದ ಅವರು ಪಾಲಿಕೆ ಆಯುಕ್ತರಿಗೆ ಹೇಳಿ ಒಂದು ಕೆಲಸ ಮಾಡಲಿ ಎಂದು ಸವಾಲು ಹಾಕಿದರು.
ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸದ್ಯ ಮಳೆಗಾಲ ಆರಂಭವಾಗಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆ ಇದೆ. ಈ ಬಗ್ಗೆ ತಲೆಕೆಡಿಸಿಕೊಳ್ಳದ ಶಾಸಕ ಅರವಿಂದ ಬೆಲ್ಲದ ದೆಹಲಿ, ಬೆಂಗಳೂರು ಸುತ್ತಾಠ ಬಿಟ್ಟು ಕ್ಷೇತ್ರದ ಜನರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು. ಶಾಂತವೀರ ಬೆಟಗೇರಿ, ರಾಜು ಅಂಬೋರೆ, ರಮಾನಾಥ ಶೆಣೈ, ಈರಣ್ಣ ಬಾರಕೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.