![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 16, 2021, 2:41 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಜೂನ್ 19 ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 21 ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್ ಫುಡ್ ಸರ್ವಿಸಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅದೇ ರೀತಿ ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಲಾಕ್ ಡೌನ್ ಷೋಷಿಸಿರುವ ದಿನಗಳಂದು ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕು.
ಅದೇ ರೀತಿ, ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ12.00 ಗಂಟೆಯವರೆಗೆ ಅಂಗಡಿಗಳನ್ನು ತೆರೆದು ಬೀಜ ಹಾಗೂ ರಸಗೊಬ್ಬರಗಳನ್ನು ವಿತರಿಸಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶ ನೀಡಲಾಗಿದೆ.
ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಲಾಕ್ ಡೌನ್ ದಿನಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯಲು ಅವಕಾಶವಿದ್ದು, ಅಲ್ಲಿ ತೆರಳುವ ರೈತರು ಗ್ರಾಮ ಪಂಚಾಯತಿ ಪಿ.ಡಿ.ಓ. ಹಾಗೂ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್
ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಹಾ ಜಿಲ್ಲಾಧಿಕಾರಿಗಳಾಗಿರುವ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.