ಪ್ರವಾಹ ಹಿಮ್ಮೆಟ್ಟಲು ಜಿಲ್ಲಾಡಳಿತ ತಾಲೀಮು

Team Udayavani, Jun 16, 2021, 7:07 PM IST

sdfghgfdfgh

ರಾಯಚೂರು: ಮುಂಗಾರು ಮಳೆ ಹೆಚ್ಚಾದಲ್ಲಿ ಜಿಲ್ಲೆಯ ಕೃಷ್ಣಾ ಮತ್ತು ತುಂಗಭದ್ರಾ ನದಿಗೆ ಎದುರಾಗುವ ಸಂಭವನೀಯ ಪ್ರವಾಹ ಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜತೆಗೆ ಗ್ರಾಪಂ ಟಾಸ್ಕ್ಫೋರ್ಸ್‌ ಸಮಿತಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾ ಧಿಕಾರಿ ಆರ್‌.ವೆಂಕಟೇಶ ಕುಮಾರ್‌ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತೆ ಹಾಗೂ ಗ್ರಾಪಂ ವಿಪತ್ತು ನಿರ್ವಹಣಾ ಯೋಜನಾ ಪುನರ್‌ ರಚಿಸಲು ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಜಲಾನಯನ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೆ ಮಹಾರಾಷ್ಟ್ರದಿಂದ ಹೆಚ್ಚುವರಿ ನೀರು ಕೃಷ್ಣೆಗೆ ಹರಿಸಲಾಗುತ್ತಿದೆ. ತುಂಗಭದ್ರೆಗೂ ಪ್ರವಾಹ ಭೀತಿ ಏರ್ಪಡಲಿದೆ.

ಎರಡೂ ನದಿಗಳ ಪಾತ್ರದಲ್ಲಿನ ಜನ, ಜಾನುವಾರುಗಳ ರಕ್ಷಣೆಗೆ ಗ್ರಾಪಂ ಮಟ್ಟದಲ್ಲಿ ರಚಿಸಿದ ಟಾಸ್ಕ್ಫೋರ್ಸ್‌ ಸಮಿತಿಗಳು ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಬೇಕು ಎಂದರು. ಕೃಷ್ಣ, ತುಂಗಭದ್ರಾ ಹಾಗೂ ಭೀಮ ನದಿಗೆ ಹೆಚ್ಚುವರಿ ನೀರು ಹರಿದಲ್ಲಿ ಪ್ರವಾಹ ಏರ್ಪಡಲಿದೆ. ಇದರಿಂದ 34 ಗ್ರಾಪಂ ವ್ಯಾಪ್ತಿಯ 105 ಗ್ರಾಮಗಳಿಗೆ ಪ್ರವಾಹಭೀತಿ ಏರ್ಪಡಲಿದೆ. ಅಂತಹ ವೇಳೆ ಜನ, ಜಾನುವಾರುಗಳನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕೆಲಸ  ಆಗಬೇಕು. ಲಿಂಗಸೂಗೂರು ತಾಲೂಕಿನಲ್ಲಿ ಮ್ಯಾದರಗಡ್ಡೆ, ರಾಯಚೂರು ತಾಲೂಕಿನ ಗುರ್ಜಾಪುರ, ಆತೂRರು, ಡಿರಾಂಪುರ, ಬೂರ್ದಿಪಾಡು, ಕಲವಲದೊಡ್ಡಿ, ಕರವಕುಲ ಗ್ರಾಮಗಳಲ್ಲಿ ಜನರು ತೆಪ್ಪದ ಮೂಲಕ ನದಿ ದಾಟುತ್ತಾರೆ. ಈ ಬಾರಿ ಯಾವುದೇ ಕಾರಣಕ್ಕೂ ಪ್ರವಾಹದ ವೇಳೆ ನದಿ ದಾಟದಂತೆ ಕಟ್ಟುನಿಟ್ಟಾಗಿ ಸೂಚಿಸುವಂತೆ ತಿಳಿಸಿದರು.

ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್‌ ಮಾತನಾಡಿ, ಪ್ರವಾಹದಂತಹ ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗೆ ಮದೊಲಾದ್ಯತೆ ನೀಡಬೇಕು. ಮಹಾರಾಷ್ಟ್ರದ ಜಲಾಶಯಗಳ ಅ ಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ಜಲಾಶಯದ ನೀರಿನ ಮಟ್ಟ ಹಾಗೂ ನೀರು ಬಿಡುಗಡೆ ಬಗ್ಗೆ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದ್ದರೂ, ಸಂಪೂರ್ಣ ಮುಕ್ತಗೊಂಡಿಲ್ಲ, ಈ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿವಹಿಸಿ ಸುರಕ್ಷಿತ ಕೇಂದ್ರಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಎಡಿಸಿ ಕೆ.ಆರ್‌.ದುರುಗೇಶ್‌ ಮಾತನಾಡಿ, ಅಣೆಕಟ್ಟಿನ ಒಳ ಹರಿವು ಮತ್ತು ಹೊರ ಹರಿವು ಮಾಹಿತಿ ವಿನಿಮಯಕ್ಕೆ ವಾಟ್ಸಾಪ್‌ ಗ್ರೂಪ್‌ಗ್ಳನ್ನು ರಚಿಸಲಾಗಿದೆ.

ಅದರಲ್ಲಿ ನೀರಿನ ಪ್ರಮಾಣದ ಹರಿವಿನ ಮಾಹಿತಿ ಗಂಟೆಗೊಮ್ಮೆ ನೀಡಲಾಗುವುದು ಎಂದರು. ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವುಪುರ, ಎನ್‌ಡಿಆರ್‌ಎಫ್‌ ತಂಡದ ಆರ್‌.ಅಭೀನ್‌ ಇತರರಿದ್ದರು. ಅ ಧಿಕಾರಿಗಳು, ಎನ್‌ಡಿಆರ್‌ಎಫ್‌ ತಂಡದ ಸಿಬ್ಬಂದಿ, ಗ್ರಾಪಂ ಟಾಸ್ಕ್ಫೋರ್ಸ್‌ ಸಮಿತಿ ಸದಸ್ಯರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.