ಮಲೆನಾಡಲ್ಲೂ ವಿಜಯ ಸಂಚಾರ…

ಶಿವಮೊಗ್ಗದ ಊಟ-ನೀರ್‌ದೋಸೆ-ಚಟ್ನಿ, ಪಡ್ಡು ಫೇವರೆಟ್‌ | ಕುಪ್ಪಳ್ಳಿಯ ಕವಿಶೈಲ ನೆಚ್ಚಿನ ತಾಣ

Team Udayavani, Jun 16, 2021, 10:55 PM IST

Shivamogga

ಶಿವಮೊಗ್ಗ: ಬೈಕ್‌ ಅಪಘಾತದಲ್ಲಿ ಗಾಯಗೊಂಡು ಬಾರದ ಲೋಕಕ್ಕೆ ಸಂಚಾರ ಬೆಳೆಸಿದ ನಟ ಸಂಚಾರಿ ವಿಜಯ್‌ಗೆ ಶಿವಮೊಗ್ಗ ಜಿಲ್ಲೆಯೊಂದಿಗೆ ಉತ್ತಮ ನಂಟು ಇತ್ತು. ಕುಪ್ಪಳ್ಳಿಯ ಕವಿಶೈಲ ವಿಜಯ್‌ ನೆಚ್ಚಿನ ತಾಣಗಳಲ್ಲೊಂದು. ಶಿವಮೊಗ್ಗದ ಹೊಟೇಲ್‌ ಒಂದರ ತಿಂಡಿ ಇವರಿಗೆ ಅಚ್ಚುಮೆಚ್ಚು.

ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಸಂಚಾರಿ ವಿಜಯ್‌ಗೆ ಮೊದಲ ನಾಗರಿಕ ಸನ್ಮಾನವಾಗಿದ್ದು ಸಹ ಜಿಲ್ಲೆಯ ಭದ್ರಾವತಿಯಲ್ಲಿ. ಸಂಚಾರಿ ವಿಜಯ್‌ ಅವರಿಗೆ ರಾಜ್ಯದ ವಿವಿಧೆಡೆ ಗೆಳೆಯರ ಬಳಗವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅವರ ಆಪ್ತರ ಪೈಕಿ ಒಬ್ಬರು ಶಂಕರ್‌ ಮಿತ್ರ. ಸಂಚಾರಿ ವಿಜಯ್‌ ಅವರು ಶಿವಮೊಗ್ಗಕ್ಕೆ ಬಂದಾಗಲೆಲ್ಲ ಇವರನ್ನು ಭೇಟಿಯಾಗುತ್ತಿದ್ದರು. ಒಟ್ಟಿಗೆ ಸುತ್ತಾಡುತ್ತಿದ್ದರು. ಮಲೆನಾಡಿನ ಊಟ, ತಿಂಡಿ ಸಂಚಾರಿ ವಿಜಯ್‌ ಅವರಿಗೆ ಬಹಳ ಇಷ್ಟ ಎಂದು ಶಂಕರ್‌ ಮಿತ್ರ ಸ್ಮರಿಸಿಕೊಳ್ಳುತ್ತಾರೆ.

ನೀರ್‌ ದೋಸೆ, ಚಟ್ನಿಯನ್ನು ತುಂಬಾ ಇಷ್ಟಪಡುತ್ತಿದ್ದರು. ಹೊಟೇಲ್‌ ಮೀನಾಕ್ಷಿ ಭವನದ ದೋಸೆ, ಮೊಸರು ಅವಲಕ್ಕಿಯನ್ನು ಇಷ್ಟಪಟ್ಟು ತಿನ್ನುತ್ತಿದ್ದರು. ಶಿವಮೊಗ್ಗಕ್ಕೆ ಬಂದಾಗಲೆಲ್ಲ ನೆನಪು ಮಾಡಿಕೊಂಡು ಅಲ್ಲಿಗೆ ತೆರಳಿ ತಮ್ಮ ಇಷ್ಟ ಖಾದ್ಯ ಸವಿಯುತ್ತಿದ್ದರು. ಇದಲ್ಲದೆ ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಪಕ್ಕದ ಫುಟ್‌ ಪಾತ್‌ ಮೇಲೆ ಗಾಡಿಯಲ್ಲಿ ಮಾಡುವ ಪಡ್ಡು ಇಷ್ಟ ಪಡುತ್ತಿದ್ದರು.

ಇಲ್ಲಿಗೆ ಬಂದಾಗ ಎರಡು ಪ್ಲೇಟ್‌ ಪಡ್ಡು ತಿಂದರಷ್ಟೆ ಅವರಿಗೆ ಸಮಾಧಾನವಾಗುತ್ತಿತ್ತು ಎಂದು ಶಂಕರ್‌ ಸ್ಮರಿಸುತ್ತಾರೆ. ನಾನು ಅವನಲ್ಲ ಅವಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಬಂದಾಗ ಸಂಚಾರಿ ವಿಜಯ್‌ ಅವರಿಗೆ ಮೊಟ್ಟಮೊದಲು ನಾಗರಿಕ ಸನ್ಮಾನವಾಗಿದ್ದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ. ಇಲ್ಲಿನ ಎಂಪಿಎಂ ರಂಗಮಂದಿರ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಕೆ. ಸಂಗಮೇಶ್ವರ್‌ ಮತ್ತು ಅಪ್ಪಾಜಿಗೌಡರ ಉಪಸ್ಥಿತಿಯಲ್ಲಿ ಸನ್ಮಾನ ಮಾಡಲಾಗಿತ್ತು. ನಟ ಸಂಚಾರಿ ವಿಜಯ್‌ ಅವರು ಅವಕಾಶ ಸಿಕ್ಕಾಗಲೆಲ್ಲ ಕುಪ್ಪಳ್ಳಿಗೆ ಭೇಟಿ ನೀಡುತ್ತಿದ್ದರು. ಕವಿಶೈಲವನ್ನು ತುಂಬಾ ಇಷ್ಟಪಡುತ್ತಿದ್ದರು ಎನ್ನುತ್ತಾರೆ ಶಂಕರ್‌ ಮಿತ್ರ.

ರಾಷ್ಟ್ರ ಕವಿ ಕುವೆಂಪು ಮತ್ತು ಪೂರ್ಣಚಂದ್ರ ತೇಜಸ್ವಿ ಅವರ ಸಮಾಧಿ  ಸ್ಥಳಕ್ಕೆ ಹೋಗಿ ನಮಸ್ಕರಿಸಿ ಮೌನಕ್ಕೆ ಶರಣಾಗುತ್ತಿದ್ದರು. ಇದಲ್ಲದೆ ಮಂಡಗದ್ದೆ, ಗಾಜನೂರಿಗೆ ಒಮ್ಮೆ ಹೋಗಿ ಪ್ರಕೃತಿ ಸೊಬಗನ್ನು ಕಂಡು ಸಮಯ ಕಳೆಯಬೇಕು ಎಂದು ವಿಜಯ್‌ ಹೇಳಿದ್ದರು ಎಂದು ಶಂಕರ್‌ ನೆನಪಿಸಿಕೊಳ್ಳುತ್ತಾರೆ. ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ದೇವಸ್ಥಾನ, ಶರಾವತಿ ಹಿನ್ನೀರಿನ ಲಾಂಚ್‌ನಲ್ಲಿ ಸಂಚರಿಸೋದು ವಿಜಯ್‌ಗೆ ಬಲು ಅಚ್ಚುಮೆಚ್ಚು. ನಾತಿಚರಾಮಿ ಸಿನಿಮಾ ತಂಡದ ಜೊತೆ ಒಮ್ಮೆ ದೇವಸ್ಥಾನಕ್ಕೆ ತೆರಳಿ ದೇವಿ ದರ್ಶನ ಪಡೆದಿದ್ದರು.

ನಟಿ ಶೃತಿ ಹರಿಹರನ್‌ ಸೇರಿದಂತೆ ಹಲವರು ಈ ತಂಡದಲ್ಲಿದ್ದರು. ನಟ ಸಂಚಾರಿ ವಿಜಯ್‌ ಅವರು “ಆ್ಯಕ್ಟ್ 1978′ ಸಿನಿಮಾದ ಪ್ರಮೋಷನ್‌ಗಾಗಿ ಶಿವಮೊಗ್ಗಕ್ಕೆ ಬಂದಿದ್ದರು. ಸಿಟಿ ಸೆಂಟರ್‌ ಮಾಲ್‌ನ ಭಾರತ್‌ ಸಿನಿಮಾಸ್‌ನಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಸಲಾಗಿತ್ತು. ಪ್ರತಿ ಬಾರಿ ಶಿವಮೊಗ್ಗಕ್ಕೆ ಬಂದಾಗಲೂ ಇಲ್ಲಿಯ ರಂಗ ತಂಡಗಳು, ರಂಗ ಕರ್ಮಿಗಳನ್ನು ಭೇಟಿಯಾಗಲು ಇಷ್ಟಪಡುತ್ತಿದ್ದರು ಎಂದು ಶಂಕರ್‌ ಮಿತ್ರ ಸ್ಮರಿಸಿಕೊಳ್ಳುತ್ತಾರೆ. ಶಿವಮೊಗ್ಗದ ಜೊತೆ, ಇಲ್ಲಿಯ ರಂಗಕರ್ಮಿಗಳು ಸೇರಿದಂತೆ ಹಲವರ ಜೊತೆ ಉತ್ತಮ ನಂಟು ಹೊಂದಿದ್ದರು. ಅವರ ಅಕಾಲಿಕ ಮರಣ ಅರಗಿಸಿಕೊಳ್ಳಲಾಗದ್ದು. ಉತ್ತಮ ಸ್ನೇಹಿತರ ಬಳಗಕ್ಕೆ ಸಂಪಾದಿಸಿದ್ದ ವಿಜಯ್‌ ಇನ್ನು ಬರೀ ನೆನಪು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.