![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 17, 2021, 7:16 AM IST
ಕಾಪು: ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಉದ್ಯಾವರ ಕನಕೋಡದಲ್ಲಿ ಬುಧವಾರ ಸಂಜೆ ನಡೆದಿದೆ.
ಮಲ್ಪೆ ಕೊಡವೂರು ನಿವಾಸಿ ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಪುತ್ರ ಮೋಕ್ಷಿತ್ ಕರ್ಕೇರ (25 ವ) ಮೃತ ದುರ್ದೈವಿ.
ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು, ಅದನ್ನು ಕಂಡು ಮೈನ್ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ವಿದ್ಯುತ್ ಶಾಕ್ ನಿಂದ ಗಂಭೀರ ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ:ಎಸೆಸೆಲ್ಸಿ ಪರೀಕ್ಷಾ ಕೇಂದ್ರ ಹೆಚ್ಚಳ : ಕಳೆದ ವರ್ಷ 145; ಈ ವರ್ಷ 256
ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮೋಕ್ಷಿತ್ ಕರ್ಕೇರ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದನು. ಬಿಡುವಿನ ವೇಳೆಯಲ್ಲಿ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು ಮಾರಾಟದ ವ್ಯವಹಾರದಲ್ಲೂ ಕೈ ಜೋಡಿಸುತ್ತಿದ್ದನು.
ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಇಬ್ಬರು ಪುತ್ರರಲ್ಲಿ ಮೋಕ್ಷಿತ್ ಹಿರಿಯವನಾಗಿದ್ದು, ಮನೆಗೆ ಆಧಾರವಾಗಿ ಬೆಳೆಯುತ್ತಿದ್ದನು. ಮಗನ ಅಗಲುವಿಕೆಯಿಂದ ಮನೆಯವರ ಆಕ್ರಂಧನ ಮುಗಿಲು ಮುಟ್ಟಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.