ಹಳೆಯ ವೈಷಮ್ಯ ಶಂಕೆ: ಕಲಬುರಗಿ ಮುಖ್ಯರಸ್ತೆಯಲ್ಲಿ ಯುವಕನ ಭೀಕರ ಹತ್ಯೆ
Team Udayavani, Jun 17, 2021, 8:28 AM IST
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಕಳೆದ ರಾತ್ರಿ ನಗರದ ಹಿಂದಿ ಪ್ರಚಾರ ಸಭಾ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ರವಿ ಕುಮಾರ್ ಗೋಟೂರ್ ಅಲಿಯಾಸ್ ರವಿ ಪೂಜಾರಿ (30 ವ) ಎಂಬಾತನೇ ಕೊಲೆಯಾದ ವ್ಯಕ್ತಿ. ರವಿ ಕುಮಾರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಎಸೆದು ಹಂತಕರು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಗುಂಪಿನಲ್ಲಿ ಅಲ್ಲ, ಒಬ್ಬೊಬ್ಬರಾಗಿ ಬನ್ನಿ: ಶಾಸಕರಿಗೆ ಅರುಣ್ ಸಿಂಗ್ ತಾಕೀತು
ಕೊಲೆಯಾದ ರವಿ ಕುಮಾರ್ 2019ರಲ್ಲಿ ಯುವತಿಯೋರ್ವಳ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಕಳೆದ ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಕಳೆದ ರಾತ್ರಿ ಎರಡು ಗಂಟೆ ಸುಮಾರಿಗೆ ನಡು ರಸ್ತೆಯಲ್ಲೇ ಭೀಕರವಾಗಿ ಕೊಲೆಯಾಗಿದ್ದಾನೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.