ರಕ್ಷಣಾ ಘಟಕದಿಂದ ಬಾಲ್ಯ ವಿವಾಹಕ್ಕೆ ಬ್ರೇಕ್
ಸಹಾಯವಾಣಿ ಮಾಹಿತಿ ಆಧರಿಸಿ ಕಾರ್ಯಾಚರಣೆನಾಲ್ಕು ಮದುವೆಗೆ ತಡೆ
Team Udayavani, Jun 17, 2021, 4:30 PM IST
ಧಾರವಾಡ: ನಾಲ್ವರು ಅಪ್ರಾಪ್ತೆಯರ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಡೆ ಹಿಡಿಯಲಾಗಿದೆ.
ಜೂ. 15ರಂದು ನಗರದ ಕೆಲಗೇರಿ ಬಾಲಕಿಯ ವಿವಾಹವು ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದ ಯುವಕನ ಜತೆ, ಧಾರವಾಡ ತಾಲೂಕಿನ ಚಂದನಮಟ್ಟಿಯ ಬಾಲಕಿಯ ವಿವಾಹವು ಅದೇ ಗ್ರಾಮದ ಯುವಕನ ಜತೆ, ಕಲಘಟಗಿ ತಾಲೂಕಿನ ಗಳಗಿಹುಲಕೊಪ್ಪ ಒಂದೇ ಕುಟುಂಬದ ಇಬ್ಬರು ಬಾಲಕಿಯರ ವಿವಾಹವನ್ನು ಅದೇ ಗ್ರಾಮದ ಯುವಕರ ಜತೆ ನಿಶ್ಚಿಯಿಸಲಾಗಿತ್ತು. ಮಕ್ಕಳ ಸಹಾಯವಾಣಿ ಮಾಹಿತಿ ಮೇರೆಗೆ ನಾಲ್ಕೂ ಬಾಲ್ಯವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾಘಟಕದಿಂದ ತಡೆ ಹಿಡಿಯಲಾಗಿದೆ.
ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರ ನೇತೃತ್ವದ ತಂಡವು ಈ ಎಲ್ಲ ಪೋಷಕರ ಮನೆಗೆ ಭೇಟಿ ನೀಡಿ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸಿತು. ಬಾಲಕಿಯರಿಗೆ ಆಪ್ತ ಸಮಾಲೋಚನೆ ಮಾಡಿ ನಂತರ ಪಾಲಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕೋವಿಡ್ ಪ್ರಯುಕ್ತ ಆನ್‌ಲೈನ್ ಮೂಲಕ ನಡೆಯುವ ಮಕ್ಕಳ ಕಲ್ಯಾಣ ಸಮಿತಿ ತೆಗೆದುಕೊಳ್ಳುವ ಸಭೆಗೆ ಹಾಜರಾಗುವಂತೆ ನೋಟಿಸ್ ನೀಡಲಾಯಿತು. ಗ್ರಾಪಂ ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಬಾಲಕಿಯರ ಕುಟುಂಬದ ಮೇಲೆ ನಿಗಾ ಇಡುವಂತೆ ತಿಳಿಸಲಾಯಿತು.
ಸಮಾಜ ಕಾರ್ಯಕರ್ತರಾದ ಶ್ವೇತಾ ಕಿಲ್ಲೇದಾರ, ಕರೇಪ್ಪ ಕೌಜಲಗಿ, ಕ್ಷೇತ್ರ ಕಾರ್ಯಕರ್ತರಾದ ಮಹಮ್ಮದಲಿ ತಹಶಿಲ್ದಾರ್, ಭಾರತಿ ಬಂಡಿ, ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ವೀಣಾ ಎಂ., ಅನುಪಮಾ ಅಂಗಡಿ, ಕಮಲಾ ಬೈಲೂರ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.