ವರ್ಷ ಕಳೆದರೂ ಕಾಮಗಾರಿ ಅಪೂರ್ಣ
ಆಮೆಗತಿಯಲ್ಲಿ ಸಾಗಿರುವ ಕಾಮಗಾರಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ
Team Udayavani, Jun 17, 2021, 5:07 PM IST
ವರದಿ: ಗೋವಿಂದಪ್ಪ ತಳವಾರ
ಮುಧೋಳ: ರೈತರ ಹಾಗೂ ಜನರ ಅನುಕೂಲಕ್ಕಾಗಿ ವರ್ಷದ ಹಿಂದೆ ಆರಂಭಗೊಂಡಿದ್ದ ರಸ್ತೆ ದುರಸ್ತಿ ಕಾಮಗಾರಿಯೊಂದು ಇದೂವರೆಗೂ ಮುಕ್ತಾಯಗೊಳ್ಳದೇ ಇರುವುದರಿಂದ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.
ಸಮೀಪದ ಹಲಗಲಿ ಗ್ರಾಮದ ಸರಹದ್ದಿನ ಶ್ರೀನಿವಾಸ ನ್ಯಾಮಗೌಡರ ತೋಟದಿಂದ ಅಂದಾಜು 1 ಕಿ.ಮೀ ರಸ್ತೆಯನ್ನು ಪಂಚಾಯತ್ ರಾಜ್ ಇಲಾಖೆಯಿಂದ ದುರಸ್ತಿಗೊಳಿಸಿ ಡಾಂಬರೀಕರಣ ಮಾಡಲು ವರ್ಷದ ಹಿಂದೆಯೇ ಕಾರ್ಯಾರಂಭ ಮಾಡಲಾಗಿತ್ತು. ಆದರೆ ಅ ಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಇದೂವರೆಗೂ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿಲ್ಲ. ಕಾರಣ ಈ ಮಾರ್ಗವಾಗಿ ತೋಟಕ್ಕೆ ಓಡಾಡುವ ರೈತರು ಇನ್ನಿಲ್ಲದ ತೊಂದರೆ ಅನುಭವಿಸುವಂತಾಗಿದೆ.
ಈ ಮಾರ್ಗದಲ್ಲಿ ಹೆಚ್ಚಿನ ನೀರಾವರಿ ತೋಟಗಳಿದ್ದು, ರೈತರ ಅನುಕೂಲಕ್ಕಾಗಿ ಮೊದಲಿದ್ದ ಕಚ್ಚಾ ರಸ್ತೆಯನ್ನು ಸುಧಾರಿಸಿ ಡಾಂಬರೀಕರಣ ಮಾಡಲು ವರ್ಷದ ಹಿಂದೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ನೀಡಿದಾಗಿನಿಂದ ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯಿಂದಾಗಿ ಈ ಮಾರ್ಗದ ರೈತರಿಗೆ ಕಿರಿಕಿರಿಯುಂಟಾಗಿದೆ.
ಕಡಿ ಹಾಕಿದ ರಸ್ತೆಯಲ್ಲಿ ನಿತ್ಯ ಸರ್ಕಸ್: ಹಲಗಲಿ-ಕಾತರಕಿ ಗ್ರಾಮದ ಸಂಪರ್ಕ ರಸ್ತೆಗೆ ಹೊಂದಿಕೊಂಡು ಆರಂಭವಾಗುವ ಈ ರಸ್ತೆಯಲ್ಲಿ ದುರಸ್ತಿಗಾಗಿ ಎರಡ್ಮೂರು ತಿಂಗಳ ಹಿಂದೆಯೇ ಕಡಿ ಸುರಿಯಲಾಗಿದೆ. ಕಡಿ ಸುರಿದ ಬಳಿಕ ಕಾಮಗಾರಿ ನಿಲ್ಲಿಸಿರುವುದರಿಂದ ರಸ್ತೆಗೆ ಹಾಕಿರುವ ಕಡಿಗಳು ಮೇಲೆದ್ದು ಸಾರ್ವಜನಿಕರು ಓಡಾಟದ ವೇಳೆ ನಿತ್ಯ ಸರ್ಕಸ್ ಮಾಡುವಂತಾಗಿದೆ.
ಪ್ರತಿನಿತ್ಯ ಈ ಮಾರ್ಗದಲ್ಲಿ ಹತ್ತಾರು ಬೈಕ್ ಸವಾರರು ಓಡಾಡುವುದರಿಂದ ಆಯತಪ್ಪಿ ಬಿದ್ದು ಗಾಯ ಮಾಡಿಕೊಂಡ ಘಟನೆಗಳು ಸಂಭವಿಸಿವೆ. ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುವ ಮೊದಲು ಶೀಘ್ರವೇ ರಸ್ತೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂಬುದು ಈ ಭಾಗದ ರೈತರ ಆಗ್ರಹವಾಗಿದೆ.
ಕಬ್ಬು ಕಟಾವು ಮೊದಲೇ ಪೂರ್ಣಗೊಳ್ಳಲಿ: ಪ್ರಸ್ತುತ ರಸ್ತೆ ಕಾಮಗಾರಿ ನಡೆದಿರುವ ಪ್ರದೇಶದಲ್ಲಿ ಹೆಚ್ಚಿನ ರೈತರು ಕಬ್ಬು ಬೆಳೆ ಬೆಳೆದಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಕಬ್ಬು ಕಟಾವು ಹಂಗಾಮು ಆರಂಭವಾಗಲಿದೆ. ಅಷ್ಟರೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಮುಂದೆ ತೀವ್ರ ತೊಂದರೆಯುಂಟಾಗಲಿದೆ. ಆದ್ದರಿಂದ ಅ ಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.