ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಳೆ ವಿದ್ಯಾರ್ಥಿ ಇಂದು Microsoftಗೆ ಅಧ್ಯಕ್ಷ
2014ರಲ್ಲಿ ಸಿಇಒ ಹುದ್ದೆಗೆ ನೇಮಕ
Team Udayavani, Jun 17, 2021, 8:05 PM IST
ನ್ಯೂಯಾರ್ಕ್: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಳೆ ವಿದ್ಯಾರ್ಥಿ, ಮೈಕ್ರೋ ಸಾಫ್ಟ್ ಸಿಇಒ ಸತ್ಯ ನಾದೆಲ್ಲಾ (53)ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಬಗ್ಗೆ ಸಾಫ್ಟ್ ವೇರ್ ದಿಗ್ಗಜ ಮೈಕ್ರೋಸಾಫ್ಟ್, ಹೇಳಿಕೆ ಬಿಡುಗಡೆ ಮಾಡಿದೆ. ಸದ್ಯ ಅಧ್ಯಕ್ಷರಾಗಿರುವ ಜಾನ್ ಡಬ್ಲೂ ಥಾಮಸ್ ಸ್ವತಂತ್ರ ನಿರ್ದೇಶಕರಾಗಿ ಮುಂದುವರಿಯುವ ಹಿನ್ನೆಲೆಯಲ್ಲಿ ಸತ್ಯ ಅವರನ್ನು ನೇಮಿಸಲಾಗಿದೆ. ಜಾಗತಿಕ ಸಂಸ್ಥೆಯ ಮುಖ್ಯಸ್ಥ ಹುದ್ದೆ ಅಲಂಕರಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯೂ ಅವರಾಗಿದ್ದಾರೆ.
“ಆಡಳಿತ ಮಂಡಳಿಯ ಸೂಚನೆಯಂತೆ ಕಂಪನಿಯನ್ನು ನಾದೆಲ್ಲಾ ಮುನ್ನಡೆಸಲಿದ್ದಾರೆ. ಭವಿಷ್ಯದ ದಿನಗಳಲ್ಲಿ ಎದುರಾಗಲಿರುವ ಸವಾಲುಗಳನ್ನು ಗಮನದಲ್ಲಿ ಇರಿಸಿಕೊಂಡು ಸಂಸ್ಥೆಯ ವಹಿವಾಟುಗಳನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ’ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ :ತೈಲ ಬೆಲೆ ಏರಿಕೆ ಎಫೆಕ್ಟ್: ಅಕ್ಕಿ ದರದಲ್ಲಿ ಕ್ವಿಂಟಲ್‌ಗೆ ದಿಢೀರ್ 200 ರೂ. ಹೆಚ್ಚಳ
ಸತ್ಯ ನಾದೆಲ್ಲಾ ಅವರನ್ನು 2014ರ ಫೆಬ್ರವರಿಯಲ್ಲಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಇದೇ ಅವಧಿಯಲ್ಲಿ ಸ್ಟೀವ್ ಬಲ್ಮೇರ್ ಆ ಹುದ್ದೆಯಲ್ಲಿದ್ದರು. ಮೈಕ್ರೋಸಾಫ್ಟ್ ಸಹ- ಸಂಸ್ಥಾಪಕ ಬಿಲ್ ಗೇಟ್ಸ್ ಅಧ್ಯಕ್ಷ ಹುದ್ದೆಯಿಂದ ನಿರ್ಗಮಿಸಿದ್ದರು. ನಾದೆಲ್ಲಾ ಅವಧಿಯಲ್ಲಿ ಮೈಕ್ರೋಸಾಫ್ಟ್ ಹಲವು ವಿನೂತನ ಸಾಧನೆಗಳನ್ನು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.