ಪ್ರಧಾನಿಯನ್ನು ಭೇಟಿಯಾದ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್..!
ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದನ್ನು ಒಳಗೊಂಡು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಸ್ಟ್ಯಾಲಿನ್
Team Udayavani, Jun 17, 2021, 9:45 PM IST
ನವ ದೆಹಲಿ : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು 40 ದಿನಗಳ ನಂತರ, ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರಮುಖ ವಿಚಾರಗಳ ಚರ್ಚೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ಟ್ಯಾಲಿನ್, ಚುನಾವಣೆಯಲ್ಲಿ ಗೆದ್ದು ಮುಖ್ಯ ಮಂತ್ರಿಯಾಗಿದ್ದಕ್ಕೆ ಪ್ರಧಾನಿಯವರು ಅಭಿನಂಧಿಸಿದ್ದಾರೆ. ತಮಿಳು ನಾಡಿನ ಸರ್ವಾಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ಕೈ ಜೋಡಿಸುವುದಾಗಿ ಭರಚಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಯಾವೆಲ್ಲಾ ವಿಚಾರಗಳನ್ನು ಚರ್ಚಿಸಿದ್ದೀರಿ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂತೆಗೆದುಕೊಳ್ಳುವುದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸುವುದು, ಮತ್ತು ಕರಡು ಇಐಎ ಅಧಿಸೂಚನೆ, ಸೇತುಸಮುತ್ರಂ ಹಡಗು ಕಾಲುವೆ ಯೋಜನೆಯ ಅನುಷ್ಠಾನದ ಜೊತೆಗೆ ಕೆಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ : ಅಲಿಗಢ: ಎರಡು ತಿಂಗಳಿಂದ ಹಸಿವಿನಿಂದ ಇದ್ದ ತಾಯಿ ಮತ್ತು ಐವರು ಮಕ್ಕಳ ರಕ್ಷಣೆ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಪ್ರಧಾನ ಮಂತ್ರಿಯನ್ನು ಭೇಟಿಯಾಗಲು ಬಯಸಿದ್ದೆ, ಆದರೆ ಕೋವಿಡ್ ಸೋಂಕಿನ ಕಾರಣದಿಂದಾಗಿ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಇಂದು ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಸಹಕಾರವನ್ನು ಕೇಳುವುದರ ಜೊತೆಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ.
ಇನ್ನು, ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಲಸಿಕೆಗಳ ಅಗತ್ಯವಿದ್ದು, ತಮಿಳು ನಾಡಿಗೆ ಹೆಚ್ಚುವರಿ ಲಸಿಕೆಗಳನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು. ಪ್ರಧಾನಿ ಅವರು ಅಗತ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನು ಪೂರೈಸಲಾಗುವುದು ಎಂದು ಭರವಸೆ ನೀಡಿದ್ದಲ್ಲದೇ, ಯಾವುದೇ ಸಂದರ್ಭದಲ್ಲಿ ನನ್ನನ್ನು ಸಂಪರ್ಕಿಸಬಹುದು, ಕೇಂದ್ರ ಸರ್ಕಾರ ರಾಜ್ಯದ ಸುಸ್ತಿರ ಅಭಿವೃದ್ಧಿಗೆ ಕೈ ಜೋಡಿಸುತ್ತದೆ ಎಂದು ಭವರಸೆ ನೀಡಿರುವುದಾಗಿ ತಿಳಿಸಿದ್ದಾರೆ.
ಚೆನ್ನೈನಲ್ಲಿ ಸುಪ್ರೀಂ ಕೋರ್ಟ್‌ನ ಪ್ರಾದೇಶಿಕ ಶಾಖೆಗೆ ಬೇಡಿಕೆ
ಮಧುರೈನಲ್ಲಿ ಏಮ್ಸ್ ನಿರ್ಮಾಣ, ಕೊಯಮತ್ತೂರಿನಲ್ಲಿ ಹೊಸ ಏಮ್ಸ್ ಸ್ಥಾಪನೆ, ಈಲಂ ತಮಿಳರಿಗೆ ಸಮಾನ ನಾಗರಿಕ ಮತ್ತು ರಾಜಕೀಯ ಹಕ್ಕುಗಳು, ತಮಿಳನ್ನು ಭಾರತದ ಅಧಿಕೃತ ಭಾಷೆ ಎಂದು ಘೋಷಿಸುವುದು ಮತ್ತು ತಮಿಳು ಬಳಕೆ ಹೈಕೋರ್ಟ್‌ನಲ್ಲಿ ಭಾಷೆ, ತಿರುಕ್ಕುರಾಲ್ ನನ್ನು ರಾಷ್ಟ್ರೀಯ ಸಾಹಿತ್ಯವೆಂದು ಘೋಷಿಸುವುದು, ಚೆನ್ನೈನಲ್ಲಿ ಸುಪ್ರೀಂ ಕೋರ್ಟ್‌ನ ಪ್ರಾದೇಶಿಕ ಶಾಖೆಯನ್ನು ಸ್ಥಾಪಿಸುವ ವಿಚಾರ, ಜಲಸಂಪನ್ಮೂಲ ಸಮಸ್ಯೆಗಳು, ಮೀನುಗಾರಿಕೆ, ವಿದ್ಯುತ್, ಹಣಕಾಸು, ಆರೋಗ್ಯ, ಕೃಷಿ, ಕೈಗಾರಿಕೆಗಳು, ಮೂಲಸೌಕರ್ಯ ಯೋಜನೆಗಳು ಮುಂತಾದ ಹಲವು ಬೇಡಿಕೆಗಳನ್ನು ಇಡಲಾಯಿತು ಎಂದಿದ್ದಾರೆ.
ಕೆಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದಿಂದ ಮಾತ್ರ ಮಾಡಲು ಸಾಧ್ಯ. ಕೇಂದ್ರ ಸರ್ಕಾರ ತಮಿಳು ನಾಡಿನ ಬೇಡಿಕೆಗಳನ್ನು ಈಡೆರಿಸುತ್ತದೆ ಎನ್ನುವ ಭರವಸೆ ಇದೆ. ನಮ್ಮ ಸರ್ಕಾರ ತಮಿಳು ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ತೈಲ ಬೆಲೆ ಏರಿಕೆ ಎಫೆಕ್ಟ್: ಅಕ್ಕಿ ದರದಲ್ಲಿ ಕ್ವಿಂಟಲ್‌ಗೆ ದಿಢೀರ್ 200 ರೂ. ಹೆಚ್ಚಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.