ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?
Team Udayavani, Jun 18, 2021, 11:56 AM IST
ಉಡುಪಿ: ಕೋವಿಡ್ 19 ಸೋಂಕು ಪ್ರಸರಣ ಕಡಿಮೆ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.
ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ ಈ ಕೆಳಕಂಡ ಚಟುವಟಿಕೆಗಳನ್ನು ಬಿಟ್ಟು ಉಳಿದೆಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ ಎಂದಿದ್ದಾರೆ.
-ಅಗತ್ಯ ವಸ್ತುಗಳ ಖರೀದಿಗೆ ( ಆಹಾರ, ದಿನಸಿ, ಹಣ್ಣು ತರಕಾರಿ, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು) ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 62,480 ಕೋವಿಡ್ ಪ್ರಕರಣ ಪತ್ತೆ, 1,587 ಸಾವು
-ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಿಗೆ ಬೆಳಗ್ಗೆ6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
-ಹೋಂ ಡೆಲಿವರಿ, ಹೋಟೆಲ್ ಪಾರ್ಸಲ್, ರೋಗಿ- ಪರಿಚಾರಕರಿಗೆ ತೆರಳಲು ಅವಕಾಶ ಕಲ್ಪಸಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ಮಾಡಲು ಅವಕಾಶವಿದೆ.
-ದೂರದ ಊರಿನಿಂದ ರೈಲು, ವಿಮಾನದಲ್ಲಿ ಬರುವವರಿಗೆ ಮನೆ ಸೇರಲು ಖಾಸಗಿ ವಾಹನ ಅಥವಾ ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿಸಲಾಗಿದೆ.
-ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಸರಳವಾಗಿ ಮನೆಯಲ್ಲಿಯೇ ನಡೆಸಲು ಅನುಮತಿ ನೀಡಲಾಗಿದೆ. ಆದರೆ 40 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ.
ಇದನ್ನೂ ಓದಿ: ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ: ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ದ ದೂರು
-ಅಂತ್ಯ ಸಂಸ್ಕಾರಕ್ಕೆ ಐದು ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ.
-ಆದರೆ ಈ ಎರಡು ದಿನ ಕಾರ್ಖಾನೆಗಳು ಕಾರ್ಯ ನಿರ್ವಹಿಸುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.