ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ: ಅರುಣ್ ಸಿಂಗ್
Team Udayavani, Jun 18, 2021, 8:53 PM IST
ಬೆಂಗಳೂರು: ಪಕ್ಷದ ವಿರುದ್ಧ ಯಾರೂ ಮಾತನಾಡಬಾರದು. ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಎರಡರಿಂದ ಮೂರು ಜನರು ಕೆಲಸ ಮಾಡುತ್ತಿದ್ದಾರೆ. ಅಂಥ ಕೆಲವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷವಾಗಿದೆ. ಪಕ್ಷದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡಬೇಕು. ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರ ವಿಫಲತೆಗಳ ಕುರಿತು ಮಾತನಾಡಬೇಕು ಪಕ್ಷದ ವಿರುದ್ಧ ಮಾತನಾಡುವವರಿಗೆ ಹಾಗೆ ಮಾಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ :ಮುಂಬೈ ನೌಕಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರ ಉದ್ಯೋಗಿ ಸಾವು
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಅವುಗಳ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Kuchuku Movie: ಟೀಸರ್‌ನಲ್ಲಿ ಕುಚುಕು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.